ತಾರತಮ್ಯವಿಲ್ಲದೆ ಒಬ್ಬರ ಪಕ್ಕ ಒಬ್ಬರು ಕೂರಬೇಕು, ಇದು ನನ್ನ ಆಶಯ : ಸಿದ್ದರಾಮಯ್ಯ

Date:

Advertisements
  • ‘ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆಯನ್ನು ಅಳಿಸಿ ಹಾಕಿದ್ದ ಶರಣರು’
  • ‘ಬಸವ ಜಯಂತಿಯಂದೇ ಮೊದಲ ಬಾರಿ ಸಿಎಂ ಪ್ರಮಾಣ ವಚನ ಸ್ವೀಕರಿಸಿದೆ’

ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆ ಅಳಿಸಿ, ಯಾವುದೇ ಭೇದಭಾವ ಇಲ್ಲದೇ ಒಬ್ಬರ ಪಕ್ಕ ಒಬ್ಬರು ಕೂರುವ ಸಮಾಜ ನಿರ್ಮಾಣ ಬಸವಾದಿ ಶರಣರ ಆಶಯವಾಗಿತ್ತು. ಇದು ನನ್ನ ಆಶಯವೂ ಹೌದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಬಸವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

“ಬಸವಾದಿ ಶರಣರು ಮೇಲ್ವರ್ಗದವರ ಪರವಾಗಿ ಕೆಲಸ ಮಾಡಲಿಲ್ಲ. ಶೂದ್ರ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿದರು. ತಳ ಸಮುದಾಯದ ಅಲ್ಲಮಪ್ರಭು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12ನೇ ಶತಮಾನದಲ್ಲೇ ಜಾರಿಗೆ ತಂದವರು ಬಸವಾದಿ ಶರಣರು. ಆ ಕಾಲದಲ್ಲೇ ಅಂತರ್ಜಾತಿ ವಿವಾಹ ಮಾಡಿಸಿದವರು ಬಸವಣ್ಣ. ಈ ಕಾರಣಕ್ಕೇ ಬಸವಣ್ಣನವರ ವಿರುದ್ಧ ಬಿಜ್ಜಳನನ್ನು ಎತ್ತಿಕಟ್ಟಿದರು” ಎಂದರು.

Advertisements

“12ನೇ ಶತಮಾನದ ಶರಣರ ಆಶಯಗಳು ಇನ್ನೂ ಈಡೇರಿಲ್ಲ. ಸ್ವಾತಂತ್ರ್ಯ ಬಂದು 76 ವರ್ಷಗಳ ನಂತರವೂ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳು ಈಡೇರಿಲ್ಲ. ಅಸಮಾನತೆ ಹೋಗಿಲ್ಲ. ಈ ಬಗ್ಗೆ ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನ ಜಾರಿ ಸಂದರ್ಭದಲ್ಲೇ ಎಚ್ಚರಿಸಿದ್ದರು. ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನೇ 12ನೇ ಶತಮಾನದಲ್ಲೇ ಬಸವಣ್ಣ ಮತ್ತು ಬಸವಾದಿ ಶರಣರು ಕೊಟ್ಟಿದ್ದರು” ಎಂದು ಹೇಳಿದರು.

“ಜನರ ಭಾಷೆಯಲ್ಲೇ ಸಾಹಿತ್ಯ ರಚಸಿದ್ದು ಬಸವಾದಿ ಶರಣರು ಮಾಡಿದ ಬಹಳ ದೊಡ್ಡ ಕ್ರಾಂತಿ. ಸಂಸ್ಕೃತದಲ್ಲಿ ಸಾಹಿತ್ಯ ರಚಿಸಿದರೆ ಜನರಿಗೆ ಅರ್ಥ ಆಗುತ್ತದಾ? ಯಾರಿಗೂ ಅರ್ಥ ಆಗುವುದಿಲ್ಲ ಎನ್ನುವ ಕಾರಣಕ್ಕೆ ಜನರ ಭಾಷೆಯಲ್ಲಿ ಅತ್ಯುನ್ನತ ಕನ್ನಡದಲ್ಲಿ ಶರಣ ಸಾಹಿತ್ಯ ರಚನೆಯಾಯಿತು” ಎಂದರು.

ಈ ಸುದ್ದಿ ಓದಿದ್ದೀರಾ? ದಾಸೋಹ ಸಂಸ್ಕಾರದ ಸಿದ್ದರಾಮಯ್ಯ ಸರ್ವರ ಮುಖ್ಯಮಂತ್ರಿ : ಹೆಚ್‌ ಸಿ ಮಹದೇವಪ್ಪ

“ಬಸವಾದಿ ಶರಣರು 12ನೇ ಶತಮಾನದಲ್ಲೇ ಜಡ್ಡುಗಟ್ಟಿದ ಜಾತಿ ಸಮಾಜಕ್ಕೆ ಚಲನೆ ನೀಡಿದರು. ಜಾತಿ ರಹಿತ ಸಮಾಜ, ಮೌಢ್ಯಗಳನ್ನು ಕಿತ್ತೆಸೆದು ಕಂದಾಚಾರಗಳಿಲ್ಲದ ಸಮಾಜ ನಿರ್ಮಾಣಕ್ಕೆ ಮುಂದಾದರು. ಸಮಾಜ ಜಾತಿ ಆಧಾರದಲ್ಲಿ ವಿಭಜನೆ ಆಗಬಾರದು. ಕುವೆಂಪು ಅವರು, ‘ಹುಟ್ಟುತ್ತಾ ಎಲ್ಲರೂ ವಿಶ್ವ ಮಾನವರು. ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ’ ಎಂದಿದ್ದರು. ನಾವು ಹಾಗಾಗಬಾರದು. ಶ್ರೇಣೀಕೃತ ಸಮಾಜ ಹೋಗಬೇಕು. ಸಮನಾಂತರ ಸಮಾಜ ಬರಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು” ಎಂದರು.

“ವೀರಶೈವ-ಲಿಂಗಾಯತ ಸಮುದಾಯ ಈ ಕಾರ್ಯಕ್ರಮದಲ್ಲಿ ಮುಂದಿಟ್ಟಿರುವ ಬೇಡಿಕೆಗಳನ್ನು ಮುಂದಿನ ಬಜೆಟ್‌ನಲ್ಲಿ ಗಣನೀಯವಾಗಿ ಪರಿಗಣಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು “12ನೇ ಶತಮಾನದ ಶರಣ ದಂಪತಿಗಳು” ಕೃತಿಯನ್ನು ಬಿಡುಗಡೆ ಮಾಡಿದರು. ಬಸವೇಶ್ವರ ಪುತ್ಥಳಿ ದಾನ ಮಾಡಿದ ನೈಸ್ ಸಂಸ್ಥೆಯ ಮುಖ್ಯಸ್ಥರಾದ ಅಶೋಕ್ ಖೇಣಿ, ಶಾಸಕರುಗಳಾದ ಮಾಜಿ ಸಚಿವ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ, ಹೆಚ್.ಎಂ.ಗಣೇಶ್ ಪ್ರಸಾದ್, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಾ. ತಿಮ್ಮಯ್ಯ ಸೇರಿ ಮಾಜಿ ಶಾಸಕರು ಹಾಗೂ ನಾಯಕರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X