ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವರ್ಷದ ಹಿಂದೆ ಯಾರೂ ನಿರೀಕ್ಷಿಸಿರಲಿಲ್ಲ: ಸಿದ್ದರಾಮಯ್ಯ

Date:

ಇಂದು ಪ್ರಕಟಗೊಂಡ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ’ ಎಂದು ತಿಳಿಸಿದ್ದಾರೆ.

- Advertisement -

‘ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‌ಘಡಗಳಲ್ಲಿ ಹಿನ್ನಡೆ ಆಗಿದೆ. ಒಂದು ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ’ ಎಂದು ಸಿಎಂ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

‘ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ. ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ’ ಎಂದು ಸಿದ್ದರಾಮಯ್ಯ ತಿಳಿಸಿದರು.

‘ಭಾರತ್ ಜೋಡೋ ಕಾರ್ಯಕ್ರಮದ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು. ಬಿಜೆಪಿ, ಬಿಆರ್‌ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ’ ಎಂದು ಅಭಿಪ್ರಾಯಿಸಿದರು.

‘ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮ ಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‘ರಾಜಸ್ತಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು‌ ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ರಾಜಸ್ತಾನ ಮತ್ತು ಛತ್ತೀಸ್‌ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ’ ಎಂದು ಸಿಎಂ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...