ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ವರ್ಷ: ಕನ್ನಡಿಗರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

Date:

Advertisements

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಒಂದು ವರ್ಷವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡಿಗರಿಗೆ ಧನ್ಯವಾದ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಬಹುಮತ ಕೊಟ್ಟಿದ್ದು ಮತದಾರರ ಪ್ರಜ್ಞಾವಂತಿಕೆ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, “ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ” ಎಂದಿದ್ದಾರೆ.

Advertisements

ಇದನ್ನು ಓದಿದ್ದೀರಾ? ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ: ಕಾಂಗ್ರೆಸ್ ಪ್ರಶ್ನೆ

“ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ” ಎಂದು ಆರೋಪಿಸಿದ್ದಾರೆ.

“ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಬಿಜೆಪಿಯ ಕೋಮು ಧ್ರುವೀಕರಣ ತಂತ್ರ ಫಲಿಸುತ್ತಾ? ಕಾಂಗ್ರೆಸ್ ಗ್ಯಾರಂಟಿ ಗೆಲ್ಲುತ್ತಾ?

“ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ” ಎಂದು ಮನವಿ ಮಾಡಿದ್ದಾರೆ.

“ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X