ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಪೈಕಿ, ನಾಲ್ಕು ರಾಜ್ಯಗಳ ಮತ ಎಣಿಕೆ ನಡೆಯುತ್ತಿದೆ. ಅವುಗಳಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, “ಈ ದೇಶವನ್ನು ಆಳುವ ನಾಯಕತ್ವ ಬಿಜೆಪಿಗೆ ಬಿಟ್ಟರೆ, ಬೇರೆ ಪಕ್ಷಗಳಲ್ಲಿ ಇಲ್ಲ” ಎಂದು ಹೇಳಿದ್ದಾರೆ.
“ಮೋದಿ ನಾಯಕತ್ವಕ್ಕೆ ಜನರು ಬೆಂಬಲ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.
“ಕಾಂಗ್ರೆಸ್ ಅಧಿಕಾರದಲ್ಲಿದ್ದ ರಾಜಸ್ಥಾನದಲ್ಲಿ 115 ಮತ್ತು ಛತ್ತಿಸ್‌ಗಢದಲ್ಲಿ 52 ಸ್ಥಾನಗಳನ್ನು ಪಡೆದಿದ್ದೇವೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡಿದ್ದೇವೆ. ತೆಲಂಗಾಣದಲ್ಲಿ 8 ಸ್ಥಾನಗಳನ್ನು ಗಳಿಸಿ, ಹಿಂದಿಗಿಂತ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.
“ಲೋಕಸಭಾ ಚುನಾವಣೆಗಾಗಿ ಅಧಿವೇಶನ ಮುಗಿದ ನಂತರ ರಾಜ್ಯದಲ್ಲಿ ಪ್ರವಾಸ ಮಾಡುತ್ತೇವೆ. ಬಿಜೆಪಿ ಸಂಘಟನೆಯನ್ನು ಬಲಪಡಿಸಿ, ಎಲ್ಲ ಸಮುದಾಯವನ್ನು ಒಟ್ಟಾಗಿ ತೆಗೆದುಕೊಂಡೋಗುತ್ತೇವೆ” ಎಂದು ತಿಳಿಸಿದ್ದಾರೆ.