ಸಿಎಂ ಅಧಿಕಾರಾವಧಿಯನ್ನು ಪಕ್ಷದ ಹೈಕಮಾಂಡ್‌ ಮಾತ್ರ ನಿರ್ಧರಿಸಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ

Date:

  • ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ
  • ಸಿಎಂ ಅಧಿಕಾರದ ವಿಚಾರದಲ್ಲಿ ಯಾವುದೇ ಗೊಂದಲದ ಹೇಳಿಕೆ ನೀಡದಂತೆ ಮನವಿ

ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳ ಅಧಿಕಾರಾವಧಿಯನ್ನು ಪಕ್ಷದ ಹೈಕಮಾಂಡ್‌ ಮಾತ್ರ ನಿರ್ಧರಿಸಲಿದೆ. ಈ ವಿಚಾರದಲ್ಲಿ ಯಾರೂ ಗೊಂದಲದ ಹೇಳಿಕೆಗಳನ್ನು ನೀಡಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನವರೆ ಐದು ವರ್ಷ ಸಿಎಂ ಎಂಬ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿ ಅಧಿಕಾರ ಅವಧಿಯ ಬಗ್ಗೆ ಮಲ್ಲಿಕಾರ್ಜುನ ಖರ್ಗೆ , ಕೆ.ಸಿ. ವೇಣುಗೋಪಾಲ್, ಸುರ್ಜೇವಾಲ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರುಗಳಿಗೆ ಮಾತ್ರ ಏನು ನಿರ್ಧಾರವಾಗಿದೆ ಎಂದು ಗೊತ್ತಿದೆ. ಇದು ಆಂತರಿಕವಾಗಿ ನಡೆದಿರುವ ಚರ್ಚೆ. ಅವರನ್ನ ಬಿಟ್ಟು ಈ ವಿಚಾರ ಬೇರೆಯವರಿಗೆ ಗೊತ್ತಿಲ್ಲ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?:ಮೂವರು ಸಚಿವರಿಗೆ ಕೊಠಡಿ ಹಂಚಿಕೆ; ಸಿಎಂ ಪರಿಹಾರ ನಿಧಿಗೆ ಹೊಸ ಕಾರ್ಯದರ್ಶಿ ನೇಮಕ

ಮುಂದುವರೆದು ಮಾತನಾಡಿದ ಅವರು ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಚರ್ಚೆ ಆಗಿಲ್ಲ. ಪವರ್ ಶೇರಿಂಗ್ ವಿಚಾರ ಹೈಕಮಾಂಡ್ ನೋಡಿಕೊಳ್ಳಲಿದೆ. ಎಂ.ಬಿ ಪಾಟೀಲ್ ಅವರಿಗೆ ಏನು ಮಾಹಿತಿ ಇದ್ಯೋ ನನಗೆ ಗೊತ್ತಿಲ್ಲ ಎಂದರು.

ಈಗ ನಮ್ಮ ಮುಂದಿರುವುದು ಉತ್ತಮ ಆಡಳಿತ ನೀಡುವ ವಿಚಾರ. ಜನರ ಆಶೋತ್ತರಗಳನ್ನ ಈಡೇರಿಸುವ ವಿಚಾರ, ಆ ಬಗ್ಗೆ ನಮ್ಮ ಗಮನವಿರಬೇಕು, ಈ ಹಿನ್ನೆಲೆಯಲ್ಲಿ ಈ ಬಗ್ಗೆ ಯಾರೂ ಗೊಂದಲ ಸೃಷ್ಟಿಸಬಾರದು ಎಂದ ಪ್ರಿಯಾಂಕ್, ನನಗೆ ಗೊತ್ತಿರುವುದನ್ನು ನಿಮ್ಮ ಮುಂದೆ ಹೇಳಿದ್ದೇನೆ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿಗೆ ಆ್ಯಸಿಡ್​​ ಬೆದರಿಕೆ; ದೂರು ದಾಖಲು

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಅವರಿಗೆ ಆ್ಯಸಿಡ್​​ ಹಾಕುವುದಾಗಿ ಅಪರಿಚಿತರು...

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ ಕೆ ಶಿವಕುಮಾರ್

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ...

ಕಾಂಗ್ರೆಸ್ ನಂತರ, ಸಿಪಿಐಗೆ ಐಟಿ ಇಲಾಖೆ ನೋಟಿಸ್

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾಗೆ (ಸಿಪಿಐ) ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್...

ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ...