ಕಾಂಗ್ರೆಸ್‌ ಸರ್ಕಾರ ಬೀಳಿಸಲು ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ: ಕೆ ಎಸ್ ಈಶ್ವರಪ್ಪ

Date:

Advertisements
  • ‘ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ತಿಂಗಳು ಸಮಯ ಕೊಡುತ್ತೇವೆ’
  • ‘ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರ ಸರ್ಕಾರ ಇರಲ್ಲ’

ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ನಮ್ಮ ಸರ್ಕಾರ ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವೇ? ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಶಿವಮೊಗ್ಗದಲ್ಲಿ ಅವರು ಪ್ರತಿಕ್ರಿಯಿಸಿದರು.

ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್‌ ಯೋಗ್ಯತೆಗೆ ಇಲ್ಲಿಯವರೆಗೂ ಬಿಜೆಪಿಯ ಒಬ್ಬ ಶಾಸಕರನ್ನು ಕರೆದೊಯ್ಯಲು ಆಗಿಲ್ಲ ಎಂದು ಕಿಡಿಕಾರಿದರು.

Advertisements

ಕಾಂಗ್ರೆಸ್‌ಗೆ ಬಿಜೆಪಿಯಿಂದ ಅಷ್ಟು ಜನ ಬರುತ್ತಾರೆ, ಇಷ್ಟು ಜನ ಬರುತ್ತಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಕಾಂಗ್ರೆಸ್ ಬಿಟ್ಟು ಹೋಗಿರುವ 17 ಜನರಲ್ಲಿ ಒಬ್ಬರನ್ನೂ ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಏಕೆ ಬಿಜೆಪಿ ಶಾಸಕರ ಮನೆ ಕಾಯುತ್ತಿದ್ದಾರೆ? ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲಿತ  ಪ್ರಾಧ್ಯಾಪಕಿಯ ಮೇಲೆ ಸಹೋದ್ಯೋಗಿಗಳು- ವಿದ್ಯಾರ್ಥಿಗಳಿಂದ ಹಲ್ಲೆ; ಎತ್ತ ಸಾಗುತ್ತಿದೆ ಭಾರತ?

ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ತಿಹಾರ್ ಜೈಲಿನಲ್ಲಿ ಕಾಲ ಕಳೆದು ಡಿ ಕೆ ಶಿವಕುಮಾರ್ ಈಗ ಪ್ರಜ್ವಲ್ ರೇವಣ್ಣ ಅನರ್ಹತೆಯ ವಿಚಾರ ಮುಂದಿಟ್ಟುಕೊಂಡು, ಆಸ್ತಿ ವಿಚಾರಗಳನ್ನು ಜನಪ್ರತಿನಿಧಿಗಳು ಮುಚ್ಚಿಡಬಾರದು ಎಂದು ಬುದ್ಧಿ ಹೇಳುತ್ತಿದ್ದಾರೆ. ಇದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಗಿದೆ ಎಂದು ಲೇವಡಿ ಮಾಡಿದರು.

ಗ್ಯಾರಂಟಿ ಯೋಜನೆಗಳ ಜಾರಿಗೆ ತರುವ ಗದ್ದಲದಲ್ಲಿಯೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಕೂಡ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X