ಆಪರೇಷನ್ ಸಿಂಧೂರ | ‘ವಿದೇಶಕ್ಕೆ ತೆರಳಿದ್ದ ನಿಯೋಗಗಳು ಸಾಧಿಸಿದ್ದು ಏನೇನು?’

Date:

ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಗಳ ಬಗ್ಗೆ ಮಿತ್ರರಾಷ್ಟ್ರಗಳಿಗೆ ಭಾರತದ ನಿಲುವನ್ನು ತಿಳಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ 7 ನಿಯೋಗಗಳನ್ನು ಕಳಿಸಿದೆ. ನಿಯೋಗಗಳು ಮಿತ್ರರಾಷ್ಟ್ರಗಳ ರಾಜತಾಂತ್ರಿಕರನ್ನು ಭೇಟಿ ಮಾಡಿ, ಭಾರತ ನಿಲುವಿನ ಬಗ್ಗೆ ವಿವರಿಸುತ್ತಿದ್ದಾರೆ. ಈ ನಡುವೆ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ವಿವಿಧ ರಾಷ್ಟ್ರಗಳಿಗೆ ತೆರಳಿರುವ ನಿಯೋಗಗಳು ಅಲ್ಲಿ ಏನನ್ನು ಸಾಧಿಸಿವೆ” ಎಂದು ಪ್ರಶ್ನಿಸಿದೆ.

- Advertisement -

ಭಾರತ-ಪಾಕ್ ಸಂಘರ್ಷಕ್ಕೆ ಸಂಬಂಧಿಸಿದಂತೆ ವಿವರವಾದ ಚರ್ಚೆಗಾಗಿ ‘ವಿಶೇಷ ಸಂಸತ್ ಅಧಿವೇಶನ’ ಕರೆಯಬೇಕೆಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಆಗ್ರಹಿಸುತ್ತಲೇ ಇವೆ. ಆದರೆ, ವಿಶೇಷ ಅಧಿವೇಶನ ಕರೆಯಲು ಹಿಂದೇಟು ಹಾಕಿರುವ ಕೆಂದ್ರ ಸರ್ಕಾರ ತಮ್ಮ ನಿಯೋಗಗಳನ್ನು ವಿದೇಶಗಳಿಗೆ ಕಳಿಸಿದೆ. ನಿಯೋಗದಲ್ಲಿರುವವರು ಅಲ್ಲಿ ಸಾಧಿಸಿದ್ದಾದರೂ ಏನು? ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯು ‘ಭಾರೀ ವೈಫಲ್ಯ’ ಕಾಣುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ವಿದೇಶಗಳಿಗೆ ಸರ್ವಪಕ್ಷ ನಿಯೋಗಗಳನ್ನು ಕಳಿಸಲಾಗಿದೆ. ಇದರಿಂದ ಭಾರತಕ್ಕೆ ಏನು ಲಾಭ. ನಿಯೋಗಗಳನ್ನು ಕಳಿಸಿದ ಸರ್ಕಾರ ಸಾಧಿಸಿದ್ದಾದರೂ ಏನು? ಮೋದಿ ಸರ್ಕಾರವು ಪಾಲಿಸುತ್ತಿರುವ ‘ವಿದೇಶಾಂಗ ನೀತಿ’ಗಳು ವಿಫಲವಾಗಿದ್ದು, ಜಾಗತಿಕ ಪಟ್ಟದಲ್ಲಿ ಭಾರತ ಅವಮಾನಕ್ಕೆ ಗುರಿಯಾಗಿದೆ” ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್ ಹೇಳಿದ್ದಾರೆ.

“ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮದ ಯಶಸ್ಸನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಸಂಘರ್ಷದ ಸಮಯದಲ್ಲಿ ನಮ್ಮ ಮಿತ್ರರಾಷ್ಟ್ರಗಳು ನಮಗೆ ಸ್ಪಷ್ಟವಾದ ಬೆಂಬಲ ನೀಡಲಿಲ್ಲ. ಮೋದಿ ಆಡಳಿತದಲ್ಲಿ ಭಾರತ ಜಾಗತಿಕವಾಗಿ ಏಕಾಂಗಿಯಾಗಿದೆ” ಎಂದು ಕಿಡಿಕಾರಿದ್ದಾರೆ.

“ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ, ಭಾರತೀಯರನ್ನು ಹತ್ಯೆಗೈದ ಭಯೋತ್ಪಾದಕರು ಏನಾದರು? ಅವರು ಎಲ್ಲಿದ್ದಾರೆ. ಅವರನ್ನು ಇನ್ನೂ ಬಂಧಿಸಿಲ್ಲ. ಭಯೋತ್ಪಾದಕರನ್ನು ಬಂಧಿಸದಿದ್ದರೆ, ದಾಳಿಯಲ್ಲಿ ಹತ್ಯೆಯಾದವರ ಕುಟುಂಬಗಳಿಗೆ ನ್ಯಾಯ ದೊರೆಯುವುದಿಲ್ಲ” ಎಂದು ಹೇಳಿದ್ದಾರೆ.

“ಮೋದಿ ಅವರು 11 ವರ್ಷಗಳಿಂದ ಕೇಂದ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದಾರೆ. ಈ ಅವಧಿಯಲ್ಲಿ ಅವರು 90ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಭೇಟಿ ನೀಡಿದ್ದಾರೆ. ಅವರ ಪ್ರವಾಸ ಮತ್ತು ಸರ್ಕಾರದ ವಿಫಲ ವಿದೇಶಾಂಗ ನೀತಿಯಿಂದಾಗಿ ಭಾರತಕ್ಕೆ ಯಾವುದೇ ಲಾಭವಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...