ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಾರೆ: ಸಿದ್ದರಾಮಯ್ಯ

Date:

Advertisements

‘ಸಂವಿಧಾನವನ್ನು ತಿದ್ದುಪಡಿ ಮಾಡಲಾಗುವುದು’ ಎಂಬ ಬಿಜೆಪಿಯವರ ಧೋರಣೆಯ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು.

ಅವರು ಇಂದು (ನ.26) ವಿಧಾನಸೌಧದಲ್ಲಿ ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿದಾನಸೌಧದ ಎದುರು ಆಯೋಜಿಸಿದ್ದ ಕಾಲ್ನಡಿಗೆ ಜಾಥಾವನ್ನು ಉದ್ಘಾಟಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದರು.

“ಸಂವಿಧಾನಕ್ಕೆ ವಿರೋಧವಾಗಿರುವವರು ಸಂವಿಧಾದ ಬದಲಾವಣೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳೂ ಸಹ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು” ಎಂದರು.

Advertisements

“ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಅವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

“ಭಾರತದ ಸಂವಿಧಾನ ಅಂಗೀಕರಣಗೊಂಡ 75ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳು ಸಂವಿಧಾನದಂತೆ ನಡೆದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತೆ ಕೆಲಸ ಮಾಡಬೇಕು. ಆದ್ದರಿಂದ ರಾಜ್ಯದ ೆಲ್ಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿ, ಅದರ ಆಶಯಗಳನ್ನು ವಿದ್ಯಾರ್ಥಿಗಳು ಮನನ ಮಾಡಿಕೊಳ್ಳಬೇಕೆಂಬುದು ನಮ್ಮ ಉದ್ದೇಶವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X