ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆಗೆ ಅವಕಾಶ : ಸಿಎಂ ಸಿದ್ದರಾಮಯ್ಯ

Date:

Advertisements
  • ಮುಖ್ಯಮಂತ್ರಿಯವರನ್ನು ಭೇಟಿಯಾದ ಅಮೆರಿಕದ ಕಾನ್ಸಲ್ ಜನರಲ್‌ ಕ್ರಿಸ್ಟೊಫರ್‌
  • ಅಮೆರಿಕ ದೂತಾವಾಸ ಕಚೇರಿ ಪ್ರಾರಂಭಕ್ಕೆ ಅಗತ್ಯ ಬೆಂಬಲ, ಸಹಕಾರ

ಕರ್ನಾಟಕದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇದ್ದು, ತುಮಕೂರು, ದಾವಣಗೆರೆ ಮತ್ತಿತರ ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತಮ್ಮನ್ನು ಭೇಟಿಯಾದ ಚೆನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸಲ್‌ ಜನರಲ್‌ ಕ್ರಿಸ್ಟೊಫರ್‌ ಡಬ್ಲ್ಯು ಹಾಡ್ಜಸ್‌ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ರಾಜ್ಯ. ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಹೊಂದಿದೆ. ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಅತ್ಯುತ್ತಮವಾಗಿದ್ದು, ಕೌಶಲ್ಯಯುಕ್ತ ಮಾನವ ಸಂಪನ್ಮೂಲ ಲಭ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ಹೂಡಿಕೆ ಮಾಡುವಂತೆ ಮುಖ್ಯಮಂತ್ರಿಯವರು ಮನವಿ ಮಾಡಿದರು.

Advertisements

ದೂತಾವಾಸ ಕಚೇರಿ ಸ್ಥಾಪನೆಗೆ ಅಗತ್ಯ ಸಹಕಾರ
ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಪ್ರಾರಂಭಿಸುವ ತೀರ್ಮಾನವನ್ನು ಸ್ವಾಗತಿಸಿದ ಮುಖ್ಯಮಂತ್ರಿಯವರು, ಇದಕ್ಕೆ ಎಲ್ಲ ರೀತಿಯ ಅಗತ್ಯ ಬೆಂಬಲ, ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕ್ರಿಸ್ಟೊಫರ್‌ ಹಾಡ್ಜಸ್‌, ‘ಬೆಂಗಳೂರು ಪ್ರವಾಸ ಹಾಗೂ ಭಾರತ – ಅಮೆರಿಕಾ ಭಾಗೀದಾರಿಕೆಯ ಬಗ್ಗೆ ಇಲ್ಲಿರುವ ಉತ್ಸಾಹ, ಆಶಾವಾದ ಹೊಸ ಚೈತನ್ಯ ಮೂಡಿಸಿದೆ. ಇಲ್ಲಿರುವ ಸುಮಾರು 650 ಅಮೆರಿಕನ್‌ ಕಂಪನಿಗಳು ಮತ್ತು 30 ವರ್ಷಗಳಿಂದ ಅಮೆರಿಕದ ಕಚೇರಿ ಇಲ್ಲಿ ಕೆಲಸ ಮಾಡುತ್ತಿರುವುದು ನಮ್ಮ ಬದ್ಧತೆಗೆ ಸಾಕ್ಷಿ. ನಮ್ಮ ಸಹಭಾಗಿತ್ವವನ್ನು ಇನ್ನಷ್ಟು ಮುಂದೆ ಹೇಗೆ ಕೊಂಡೊಯ್ಯಬಹುದು ಎಂಬುದರ ಬಗ್ಗೆ ಚರ್ಚೆ ನಡೆಸಿದ್ದು ಖುಷಿ ತಂದಿದೆ’ ಎಂದರು.

ಪೊಲಿಟಿಕಲ್‌-ಎಕನಾಮಿಕ್‌ ವಿಭಾಗದ ಮುಖ್ಯಸ್ಥೆ ವಿರ್ಸಾ ಪರ್ಕಿನ್ಸ್‌, ಅಧಿಕಾರಿಗಳಾದ ಜೇಸನ್‌ ಇವಾನ್ಸ್‌ , ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X