ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಜ್ಮಾ ನಝೀರ್

Date:

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನ ಸೂಚಿಸಿ ಜೆಡಿಎಸ್‌ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆಯಾಗಿದ್ದ, ಯುವ ನಾಯಕಿ ನಜ್ಮಾ ನಝೀರ್ ಚಿಕ್ಕನೇರಳೆ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಸ್ಟಾರ್ ಪ್ರಚಾರಕಿಯಾಗಿದ್ದ ನಜ್ಮಾ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿಯ ಘೋಷಣೆಯಾಗುತ್ತಿದ್ದಂತೆಯೇ ಮೌನಕ್ಕೆ ಶರಣಾಗಿದ್ದರು. ಈಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಜೊತೆಗೆ ಮಾತನಾಡಿದ ನಜ್ಮಾ ನಝೀರ್ ಚಿಕ್ಕನೇರಳೆ, “ಜೆಡಿಎಸ್‌ ಪಕ್ಷದ ಮುಖಂಡರು ಕೋಮುವಾದಿ ಪಕ್ಷವಾಗಿರುವ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ. ಇದಕ್ಕೆ ನಮ್ಮ ಸಹಮತವಿಲ್ಲ. ಹಾಗಾಗಿ, ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯನ್ನು ಸೋಲಿಸಲು ನನ್ನಿಂದಾದ ಕಾರ್ಯವನ್ನು ಮಾಡುತ್ತೇನೆ. ಕೋಮುವಾದದ ವಿರುದ್ಧ ನನ್ನ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿ ಜೊತೆಗಿನ ಮೈತ್ರಿಯಿಂದಾಗಿ ಜೆಡಿಎಸ್‌ನಲ್ಲಿ ಹಲವು ಮಂದಿಗೆ ಇನ್ನೂ ಅಸಮಾಧಾನವಿದೆ. ಹಾಗಾಗಿ, ಕೆಲವೇ ದಿನಗಳಲ್ಲಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹಲವು ಮಂದಿ ಹಾಲಿ ಜೆಡಿಎಸ್ ಕಾರ್ಪೊರೇಟರ್ ಹಾಗೂ ಇತರೆ ಸ್ಥಳೀಯ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ” ಎಂದು ನಜ್ಮಾ ನಝೀರ್ ಮಾಹಿತಿ ನೀಡಿದ್ದಾರೆ.

ನಜ್ಮಾ ಅವರೊಂದಿಗೆ ಯುವ ಜನತಾದಳದ ಕಾರ್ಯಾಧ್ಯಕ್ಷ ನೂರ್ ಸಹಿತ ಸುಮಾರು 50 ಮಂದಿ ಜೆಡಿಎಸ್ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವ ನಬೀ ಸಾಬ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

 

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ...

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...