ವಿಧಾನಸಭೆ ಕಲಾಪಕ್ಕೆ ಹಾಜರಾಗದಿರಲು ವಿಪಕ್ಷ ಬಿಜೆಪಿ ತೀರ್ಮಾನ

Date:

ಕೊನೆ ಎರಡು ದಿನಗಳ ವಿಧಾನಸಭೆ ಕಲಾಪಕ್ಕೆ ಹಾಜರಾಗದೇ ಇರಲು ವಿಪಕ್ಷ ಬಿಜೆಪಿ ತೀರ್ಮಾನಿಸಿದ್ದು, ರಾಜ್ಯಪಾಲರಿಗೆ ಬಿಜೆಪಿ ಇಂದು ದೂರು ನೀಡುವ ಸಾಧ್ಯತೆ ಇದೆ.

ಈ ಸಂಬಂಧ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಎಂಎಲ್‌ಎ, ಎಂಎಲ್‌ಸಿಗಳ ಸಭೆ ಕರೆಯಲಾಗಿದೆ. ಪ್ರತಿಭಟನೆ ವಿಚಾರವಾಗಿ ಮುಂದಿನ ನಡೆ ಬಗ್ಗೆ ಮತ್ತು ರಾಜ್ಯ ಪಾಲರಿಗೆ ದೂರು ನೀಡುವ ವಿಚಾರವಾಗಿ ಚರ್ಚೆ ನಡೆಯಲಿದೆ. ಬಿಜೆಪಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ಜೆಡಿಎಸ್ ಕೂಡ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ವಿಧಾನಸೌಧದ ಜೆಡಿಎಸ್‌ ಕಚೇರಿಯಲ್ಲಿ ಸಭೆ ನಡೆಯಲಿದೆ.

ಜುಲೈ 17, 18 ರಂದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಗುಮಾಸ್ತರನ್ನಾಗಿ ಮಾಡಿ ಪ್ರೊಟೋಕಾಲ್ ಇಲ್ಲದವರಿಗೂ ಪಿಎ ರೀತಿ ಕೆಲಸ ಮಾಡುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ವಿಧಾನಮಂಡಲ ಅಧಿವೇಶನದಲ್ಲಿ ಗದ್ದಲ ಪ್ರಾರಂಭಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ ಸದನದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆದೇಶಿಸಿದ ಬಳಿಕ, ಬಿಜೆಪಿ ಸದಸ್ಯರು ಸದನದ ದ್ವಾರದ ಬಳಿ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆ ಕೆಲ ಬಿಜೆಪಿ ಸದಸ್ಯರನ್ನು ಭುಜದ ಮೇಲೆ ಹೊತ್ತು ಮಾರ್ಷಲ್‌ಗಳು ಹೊರ ಹಾಕಿದ್ದರು.

ಸದನದಲ್ಲಿ ಅಗೌರವ ತೋರಿದ ಬಿಜೆಪಿ ಶಾಸಕರಾದ ಡಾ. ಸಿ ಎನ್‌ ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್ ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಧಿವೇಶನ | ಸಭಾಧ್ಯಕ್ಷರ ವಿರುದ್ಧ ಪ್ರತಿಭಟನೆ; ಎಚ್‌ಡಿಕೆ, ಬೊಮ್ಮಾಯಿ ಪೊಲೀಸರ ವಶಕ್ಕೆ

ಯತ್ನಾಳ್‌ ಇಂದು ಆಸ್ಪತ್ರೆಯಿಂದ ಬಿಡುಗಡೆ

ಗದ್ದಲದ ವೇಳೆ ಶಾಸಕ ಯತ್ನಾಳ್​ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯತ್ನಾಳ್​​ ಆರೋಗ್ಯ ಸದ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಬಿಪಿ ಕೂಡ ನಿಯಂತ್ರಣಕ್ಕೆ ಬಂದಿದ್ದು, ಇಂದು ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆ ಆಗಿ ಮನೆಗೆ ತೆರಳಬಹುದೆಂದು ವೈದ್ಯರು ತಿಳಿಸಿದ್ದಾರೆ. ಎರಡು ಮೂರು ದಿನ ವಿಶ್ರಾಂತಿ ಪಡೆಯುವಂತೆಯೂ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರರಿಗೆ ಹೆಂಡ ಕುಡಿಸಿ ಚಟಗಳ ದಾಸರನ್ನಾಗಿಸುತ್ತಿರುವ ಬಿಜೆಪಿ: ಕಾಂಗ್ರೆಸ್‌ ಕಿಡಿ

ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ,...

ಈ ಚುನಾವಣೆ ಪ್ರಜಾಪ್ರಭುತ್ವದ ಭವಿಷ್ಯ ನಿರ್ಧರಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು...

ಬೀದರ್‌ | ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಪೊಲೀಸ್ ಠಾಣೆಯಿಂದ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳುವ ಸಲುವಾಗಿ‌ ರೌಡಿಶೀಟರ್‌...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು...