ಸಂಸತ್‌ನಲ್ಲಿ ಮುಂದುವರೆದ ಪ್ರತಿಭಟನೆ; ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ‘ಇಂಡಿಯಾ’ ನಿರ್ಧಾರ

Date:

ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರ ಹಿಂಸಾಚಾರದ ಬಗ್ಗೆ ಸರ್ಕಾರ ಚರ್ಚೆ ನಡೆಸುವಂತೆ ಸರ್ಕಾರವನ್ನು ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಆಗ್ರಹಿಸಿ ಪ್ರತಿಭಟನೆ ನಡೆಸಿತು. ಗದ್ದಲ ಮುಂದುವರೆದ ಕಾರಣ ಎರಡೂ ಸದನಗಳ ಕಲಾಪ ಮುಂದೂಡಲ್ಪಟ್ಟಿದೆ.

ಈ ನಡುವೆ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳ ನಾಯಕರು ಸಭೆ ನಡೆಸಿದರು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳ ನಾಯಕರ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಲಾಯಿತು.

ಈ ಬಗ್ಗೆ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ”ಕಳೆದ 83 ದಿನಗಳಿಂದ ಮಣಿಪುರದಲ್ಲಿ ನಿರಂತರ ಹಿಂಸಾಚಾರ ನಡೆಯುತ್ತಿದೆ. ಈ ಬಗ್ಗೆ ಪ್ರಧಾನಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕಾಗಿದೆ. ಮಣಿಪುರ ಹಿಂಸಾಚಾರದ ಬಗ್ಗೆ ‘ಇಂಡಿಯಾ’ ಮೋದಿ ಸರ್ಕಾರದಿಂದ ಉತ್ತರವನ್ನು ಕೇಳಬಯಸುತ್ತದೆ” ಎಂದು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ದುರ್ಬಲವಾಗಿದೆ ಮತ್ತು ಮಣಿಪುರ ಹಿಂಸಾಚಾರದ ಪರಿಣಾಮಗಳು ಇತರ ರಾಜ್ಯಗಳಿಗೂ ಹರಡುತ್ತಿದೆ. ಇದು ನಮ್ಮ ಸೂಕ್ಷ್ಮ ಗಡಿ ರಾಜ್ಯಗಳಿಗೆ ಒಳ್ಳೆಯದಲ್ಲ. ಪ್ರಧಾನಿ ಮೋದಿಯವರು ತಮ್ಮ ಅಹಂಕಾರವನ್ನು ತೊರೆದು ಮಣಿಪುರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪರಿಸ್ಥಿತಿಯನ್ನು ಸುಧಾರಿಸಲು ತಮ್ಮ ಸರ್ಕಾರ ಏನು ಮಾಡುತ್ತಿದೆ ಮತ್ತು ಮಣಿಪುರದಲ್ಲಿ ಯಾವಾಗ ಸಹಜ ಸ್ಥಿತಿ ಮರಳುತ್ತದೆ ಎಂಬುದನ್ನು ಪ್ರಧಾನಿ ಮೋದಿ ಹೇಳಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಲಿತ ಯುವಕನ ಮೇಲೆ ಮಲ ಬಳಿದ ಪ್ರಕರಣ: ಕಠಿಣ ಕ್ರಮಕ್ಕೆ ಖರ್ಗೆ ಆಗ್ರಹ

ಮಣಿಪುರದ ಬಗ್ಗೆ ಹೇಳಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಯಾಕೆ ಹೆದರಿದ್ದಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಮಧ್ಯೆ ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಕಾಶ ಕಲ್ಪಿಸುವುದಾಗಿ ಹೇಳಿದರೂ ಪ್ರಧಾನಿ ಉತ್ತರ ನೀಡಬೇಕೆಂದು ವಿಪಕ್ಷಗಳ ನಾಯಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಗದ್ದಲ ಹೆಚ್ಚಾದ ಕಾರಣ ಉಭಯ ಸದನಗಳನ್ನು ಮುಂದೂಡಲಾಯಿತು.

ರಾಜ್ಯಸಭೆಯಲ್ಲಿ ನಿನ್ನೆ ನಡೆದ ಕಲಾಪದ ಸಂದರ್ಭದಲ್ಲಿ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆ ಅಧ್ಯಕ್ಷರು ಅಮಾನತುಗೊಳಿಸಿದ್ದರು. ರಾಜ್ಯಸಭೆ ನಿಯಮಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆ ಕಲಾಪ ಮುಗಿಯುವವರಿಗೆ ಅಮಾನತು ಮಾಡಲಾಗಿದೆ. ಈ ಸಂಬಂಧ ವಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 26 ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟ ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿವೆ. ಜುಲೈ 20 ರಂದು ಪ್ರಾರಂಭವಾದ ಮುಂಗಾರು ಅಧಿವೇಶನವು ಆಗಸ್ಟ್ 11 ರವರೆಗೆ ನಡೆಯಲಿದೆ. ವಿಪಕ್ಷಗಳ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ವಾಪಸ್‌ ಪಡೆಯಲು ಪ್ರತಿಪಕ್ಷಗಳ ನಾಯಕರು ನಿರಾಕರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯ ದಿವಸ್ ಆಚರಣೆ | ಕಾರ್ಗಿಲ್ ಯೋಧ ಕ್ಯಾಪ್ಟನ್ ಕಾಲಿಯಾರಿಗೆ ದ್ರೋಹ ಬಗೆದ ಬಿಜೆಪಿ

ಇವತ್ತು ನಾವು ವಿಜಯ್ ದಿವಸ್ ಆಚರಿಸಿ, ನಮ್ಮ ಐನೂರು ಸೈನಿಕರ ಸಾವಿಗೆ...

ಮುಡಾ ದಾಖಲೆ ಬಹಿರಂಗ, ಮನೆ ಮುರುಕ ರಾಜಕಾರಣ ಬಿಡಿ ಎಂದು ಸಿಎಂ ಬಿಜೆಪಿಗೆ ತಿರುಗೇಟು

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ...

ಬಿಜೆಪಿ ಪಾದಯಾತ್ರೆಯ ಪ್ರತಿ ದಿನ ಅವರ ಒಂದೊಂದು ಹಗರಣ ಬಯಲು: ಡಿ ಕೆ ಶಿವಕುಮಾರ್

ಬಿಜೆಪಿ ಪಾದಯಾತ್ರೆಯ ಪ್ರತಿ ದಿನವೂ ಅವರ ಒಂದೊಂದು ಹಗರಣ ಬಯಲು ಮಾಡುತ್ತೇವೆ...

ಏನಿದು ಮುಡಾ – ವಾಲ್ಮೀಕಿ ನಿಗಮ ಅಕ್ರಮ; ಈ ಹಿಂದೆ ಯಾವೆಲ್ಲಾ ಹಗರಣಗಳು ನಡೆದಿವೆ?

ಲೋಕಸಭಾ ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಡಾ ಮತ್ತು...