ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯುತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ್ದ ಚಂದ್ರಶೇಖರನಾಥ ಸ್ವಾಮೀಜಿ, “ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು” ಎಂದು ಹೇಳಿದ್ದರು.
ಈ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್ ಅಶೋಕ್, “ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಸ್ವಾಮೀಜಿಯ ಮೂಲಕ ಡಿಕೆ ಶಿವಕುಮಾರ್ ಹೇಳಿಸಿರಲೂಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯದ ಒಳಗೆ ಹೋಗಿ ತಿಳಿದುಕೊಳ್ಳುವ ಸಾಮರ್ಥ್ಯ ಇದೆ. ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ” ಎಂದು ಹೇಳಿದ್ದಾರೆ.
“ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದೂ ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ, ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು” ಎಂದು ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಸಿಎಂ ಸ್ಥಾನ ನಿರ್ಧಾರ ಮಾಡುವುದು ಹೈಕಮಾಂಡ್, ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ
“ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಡಿಕೆ ಶಿವಕುಮಾರ್ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಮೂರು ಡಿಸಿಎಂಗಳಿಗೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ. ಅದಕ್ಕೆ ಕೌಂಟರ್ ಆಗಿ ಆದರೆ ಅಧಿಕಾರ ಬಿಟ್ಟುಕೊಡಬೇಕು ಎಂದಿದ್ದಾರೆ” ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.
