ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ: ಸಿದ್ದರಾಮಯ್ಯ

Date:

Advertisements

ಮುಂಬೈನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಮಹತ್ವದ ಮೂರನೆಯ ಸಭೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತವನ್ನು ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದೆ. ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಲು ಸಮನ್ವಯ ಸಮಿತಿಯನ್ನು ರೂಪಿಸಿರುವುದು ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯೋಜಿತವಾಗಿ ಮುಂದುವರೆಯುತ್ತಿರುವ ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕು ಶುರುವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ರಾಹುಲ್‌ ಗಾಂಧಿಯವರ ಕ್ರಿಯಾತ್ಮಕ ಸಲಹೆಗಳೂ ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರದ ಜನ ವಿರೋಧಿ ನಿಲುವು-ನಿರ್ಧಾರಗಳು, ವಂಚಕ ಉದ್ಯಮಪತಿಗಳೊಂದಿಗೆ ಸೇರಿ ನಡೆಸುತ್ತಿರುವ ಲೂಟಿ, ಮೈತ್ರಿಕೂಟವು ಎತ್ತುತ್ತಿರುವ ಪ್ರಶ್ನೆಗಳ ಬಗ್ಗೆ ಬಿಜೆಪಿಯ ನಾಯಕರ ಬಳಿ ಉತ್ತರವಿಲ್ಲ. ತಮ್ಮ ಉದ್ಯಮಪತಿ ಗೆಳೆಯ ಅದಾನಿ ಮತ್ತವರ ಸಂಸ್ಥೆಯ ವಿರುದ್ಧದ ಅಕ್ರಮಗಳ ಬಗ್ಗೆ ಜಾಗತಿಕವಾಗಿ ಆಪಾದನೆಗಳು ಕೇಳಿಬರುತ್ತಿದ್ದರೂ ಮೋದಿಯವರು ತಾವೇ ಮುಂದಾಗಿ ಅದಾನಿ ರಕ್ಷಣೆಗೆ ನಿಂತಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

“ಅದಾನಿ ಸಂಸ್ಥೆಯ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ಮಾಡಬೇಕು ಎನ್ನುವ ವಿಪಕ್ಷಗಳ ಆಗ್ರಹಕ್ಕೆ ಪ್ರಧಾನಿ ಮೋದಿ ಜಾಣಕಿವುಡಾಗಿದ್ದಾರೆ. ಉದ್ಯಮಪತಿಗಳೊಂದಿಗಿನ ತಮ್ಮ ಅಪವಿತ್ರ ಮೈತ್ರಿ ಪುರಾವೆಸಹಿತ ಹೊರಬೀಳುವ ಭಯ ಮೋದಿಯವರನ್ನು ಕಾಡುತ್ತಿದೆ. ದೇಶದ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಸಾಲದ ಮೇಲಿನ ಬಡ್ಡಿದರದ ಹೆಚ್ಚಳ, ಹೆಚ್ಚುತ್ತಿರುವ ಜನಾಂಗೀಯ ದ್ವೇಷ, ಹಿಂಸಾಚಾರ, ಪ್ರಕೃತಿ ವಿಕೋಪ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಹಾರ ಹುಡುಕಲಾಗದ ‘ಮೋದಿ ಮತ್ತು ಕಂಪನಿ’ ತಮ್ಮ ಹುಳುಕು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ವಿಫಲಯತ್ನಗಳಿಗೆ ಕೈಹಾಕಿದೆ” ಎಂದು ಕಿಡಿಕಾರಿದ್ದಾರೆ.

“ಅವಸರದಲ್ಲಿ ಕರೆಯಲಾದ ಸಂಸತ್‌ನ ವಿಶೇಷ ಅಧಿವೇಶನ, ‘ಒಂದೇ ದೇಶ, ಒಂದೇ ಚುನಾವಣೆ’ಯ ಬಗ್ಗೆ ಅನವಶ್ಯಕ ಚರ್ಚೆಯ ಮೂಲಕ ಜ್ವಲಂತ ಸಮಸ್ಯೆಗಳನ್ನು ಜನರ ಕಣ್ಣುಗಳಿಂದ ಮರೆಮಾಚುವ ಹತಾಶ ಕೆಲಸಕ್ಕೆ ನರೇಂದ್ರ ಮೋದಿ ಮುಂದಾಗಿದ್ದಾರೆ. ನಮ್ಮ ಹೆಮ್ಮೆಯ ಇಸ್ರೋದ ಶ್ರೇಷ್ಠ ವಿಜ್ಞಾನಿಗಳ ಸಾಧನೆಯನ್ನು ತನ್ನ ಪಕ್ಷದ ಸಾಧನೆ ಎಂದು ಬಿಂಬಿಸಿಕೊಳ್ಳುವಷ್ಟು ಸಣ್ಣತನಕ್ಕೆ ದೇಶದ ಪ್ರಧಾನಿ ಇಳಿದಿರುವುದು ವಿಷಾದನೀಯ. ಮಾತ್ರವಲ್ಲ, ಖಂಡನೀಯ ಕೂಡಾ ಆಗಿದೆ. ಸೌರಯಾನದ ಯಶಸ್ಸುಗಳಿಗೆ ನಮ್ಮ ವಿಜ್ಞಾನಿಗಳಷ್ಟೇ ಅರ್ಹರು” ಎಂದು ಹೇಳಿದ್ದಾರೆ.

“ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ ಮತ್ತು ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘ ಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ. ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ? ಇನ್ನು ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು, ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ” ಎಂದು ಆಗ್ರಹಿಸಿದ್ದಾರೆ.

“ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ ಹೇಳಿ. ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಬತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ. ಇನ್ನು ನಿಮ್ಮ ಈ ಆಟಗಳು ನಡೆಯವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X