ಬಿಜೆಪಿ ಮಣಿಸಲು ಪಾಟ್ನಾದಲ್ಲಿ ಇಂದು ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ; 18 ಪಕ್ಷಗಳು ಭಾಗಿ

Date:

ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್‌ ಒಳಗೊಂಡ ವಿರೋಧ ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರ ರೂಪಿಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ಇಂದು (ಜೂನ್‌ 23) ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಯದೆ.

- Advertisement -

ಎಲ್ಲ ಪಕ್ಷಗಳು ಒಟ್ಟಾಗಿ ಬಿಜೆಪಿಯನ್ನು ಮಣಿಸಲು ಯೋಜನೆ ರೂಪಿಸುವುದು ಪಾಟ್ನಾ ಸಭೆಯ ಮುಖ್ಯ ಉದ್ದೇಶವಾಗಿದೆ. 2024 ರ ಲೋಕಸಭೆ ಚುನಾವಣೆಗೆ ಒಗ್ಗಟ್ಟನ್ನು ರೂಪಿಸುವ ಗುರಿಯನ್ನು ಹೊಂದಿರುವ ನಿರ್ಣಾಯಕ ಸಭೆಗಾಗಿ ಹಲವು ವಿರೋಧ ಪಕ್ಷದ ನಾಯಕರು ಈಗಾಗಲೇ ಪಾಟ್ನಾಕ್ಕೆ ಆಗಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತಿಪಕ್ಷಗಳ ಜಂಟಿ ಸಭೆಗಾಗಿ ಪಾಟ್ನಾಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ಸಭೆಗೂ ಮುನ್ನ ಇಬ್ಬರೂ ಪಾಟ್ನಾದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟಿಎಂಸಿ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಪಾಟ್ನಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಎಎಪಿ ಪರವಾಗಿ ದೆಹಲಿ ಸಿಎಂ ಅರವಿಂದ್‌ ಕೇಜ್ರೀವಾಲ್ ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ಪಕ್ಷದ ಹಿರಿಯ ನಾಯಕರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಅವರೊಂದಿಗೆ ಆಗಮಿಸಿದ್ದಾರೆ.  

ಈ ಸುದ್ದಿ ಓದಿದ್ದೀರಾ? ಮೋದಿಗೆ ಭಾರತದಲ್ಲಿ ಪತ್ರಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸಲು ಹೇಳಿ: ಬೈಡನ್‌ಗೆ ಸಿಪಿಜೆ ಒತ್ತಾಯ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್, ಟಿಎಂಸಿ, ಎಎಪಿ, ಎನ್‌ಸಿಪಿ, ಶಿವಸೇನೆ (ಯುಬಿಟಿ), ಡಿಎಂಕೆ, ಜೆಎಂಎಂ, ಎಸ್‌ಪಿ, ಪಿಡಿಪಿ, ಸಿಪಿಐ, ಸಿಪಿಎಂ, ಸಿಪಿಐ ಎಂಎಲ್, ಜೆಡಿಯು, ಆರ್‌ಜೆಡಿ ಸೇರಿದಂತೆ 18 ಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...