ಮತ ಎಣಿಕೆಯಲ್ಲಿ ಭಾಗವಹಿಸದಂತೆ ವಿಪಕ್ಷದ ಕಾರ್ಯಕರ್ತರಿಗೆ ಗೃಹ ಬಂಧನ: ಅಖಿಲೇಶ್ ಯಾದವ್

Date:

“ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ವಿಪಕ್ಷದ ಕಾರ್ಯಕರ್ತರಿಗೆ ಗೃಹ ಬಂಧನ ವಿಧಿಸಲಾಗುತ್ತಿದೆ. ಆ ಮೂಲಕ ಮತ ಎಣಿಕೆಯಲ್ಲಿ ಭಾಗವಹಿಸದಂತೆ ತಡೆ ಹಿಡಿಯಲಾಗುತ್ತಿದೆ” ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಸೋಮವಾರ ರಾತ್ರಿ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸರು ಸೇರಿಕೊಂಡು ಕಾನೂನುಬಾಹಿರವಾಗಿ ವಿರೋಧ ಪಕ್ಷಗಳ ಕಾರ್ಯಕರ್ತರನ್ನು ಗೃಹಬಂಧನದಲ್ಲಿ ಇರಿಸುತ್ತಿದ್ದು, ಇದರಿಂದ ಜೂನ್ 4ರಂದು ನಡೆಯಲಿರುವ ಮತ ಎಣಿಕೆಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿರುವ ಅವರು, “ಇಂತಹ ಬೆಳವಣಿಗೆಗಳನ್ನು ಉತ್ತರ ಪ್ರದೇಶದ ಚುನಾವಣಾಧಿಕಾರಿ ತಕ್ಷಣವೇ ನಿಲ್ಲಿಸಬೇಕು. ಬಂಧಿತ ವಿಪಕ್ಷದ ಮುಖಂಡರನ್ನು ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ಕನೌಜ್‌ನಿಂದ ಸ್ಪರ್ಧಿಸಿರುವ ಅಖಿಲೇಶ್ ಯಾದವ್ ಹಿಂದಿಯಲ್ಲಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಎಲ್ಲ ರಾಜಕೀಯ ಪಕ್ಷಗಳು ಶಾಂತಿಯುತವಾಗಿ ಕೆಲಸ ಮಾಡುತ್ತಿರುವಾಗ, ಉತ್ತರ ಪ್ರದೇಶ ಸರ್ಕಾರ ಮತ್ತು ಆಡಳಿತವು ಸಾರ್ವಜನಿಕರ ಕೋಪಕ್ಕೆ ಕಾರಣವಾಗುವ ಯಾವುದೇ ಅನೈತಿಕ ಕೆಲಸವನ್ನು ಮಾಡಬಾರದು. ಪಕ್ಷಪಾತಿ ಧೋರಣೆ ಮಾಡುತ್ತಿರುವ ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ತೆಗೆದು ಹಾಕಬೇಕು. ಶಾಂತಿಯುತ ವಾತಾವರಣದಲ್ಲಿ ಮತ ಎಣಿಕೆಯನ್ನು ಪೂರ್ಣಗೊಳಿಸುವ ಭರವಸೆ ನೀಡಬೇಕು” ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥರು ಚುನಾವಣಾ ಆಯೋಗ ಹಾಗೂ ಸುಪ್ರೀಂ ಕೋರ್ಟ್‌ ಅನ್ನು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ | ಕಣ್ಣಿಗೆ ಬಟ್ಟೆ ಕಟ್ಟಿ ನಾಮಪತ್ರ ಹಿಂಪಡೆಯುವಂತೆ ಬೆದರಿಕೆ: ಜೈಲಿನಿಂದ ಹೊರಬಂದ ಕಾಂಗ್ರೆಸ್ ಅಭ್ಯರ್ಥಿ ಆರೋಪ

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮ ಉಪಚುನಾವಣೆಯ ಅಖಾಡದ ಕಾಂಗ್ರೆಸ್...

‘ಇಂಡಿಯಾ’ ಒಕ್ಕೂಟ ಅತ್ಯಂತ ಒಗ್ಗಟ್ಟಾಗಿದೆ; ಸಿಇಸಿ ಗ್ಯಾನೇಶ್ ಕುಮಾರ್ ವಜಾಕ್ಕೆ ಮಮತಾ ಬ್ಯಾನರ್ಜಿ ಆಗ್ರಹ

ವಿಪಕ್ಷಗಳ ಇಂಡಿಯಾ ಒಕ್ಕೂಟವು ಸಂಪೂರ್ಣ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು...

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

"ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...