“ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ವಿಪಕ್ಷದ ಕಾರ್ಯಕರ್ತರಿಗೆ ಗೃಹ ಬಂಧನ ವಿಧಿಸಲಾಗುತ್ತಿದೆ. ಆ ಮೂಲಕ ಮತ ಎಣಿಕೆಯಲ್ಲಿ ಭಾಗವಹಿಸದಂತೆ ತಡೆ ಹಿಡಿಯಲಾಗುತ್ತಿದೆ” ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.
ಸೋಮವಾರ ರಾತ್ರಿ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸರು ಸೇರಿಕೊಂಡು ಕಾನೂನುಬಾಹಿರವಾಗಿ ವಿರೋಧ ಪಕ್ಷಗಳ ಕಾರ್ಯಕರ್ತರನ್ನು ಗೃಹಬಂಧನದಲ್ಲಿ ಇರಿಸುತ್ತಿದ್ದು, ಇದರಿಂದ ಜೂನ್ 4ರಂದು ನಡೆಯಲಿರುವ ಮತ ಎಣಿಕೆಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ ಆರೋಪಿಸಿದ್ದಾರೆ.
ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿರುವ ಅವರು, “ಇಂತಹ ಬೆಳವಣಿಗೆಗಳನ್ನು ಉತ್ತರ ಪ್ರದೇಶದ ಚುನಾವಣಾಧಿಕಾರಿ ತಕ್ಷಣವೇ ನಿಲ್ಲಿಸಬೇಕು. ಬಂಧಿತ ವಿಪಕ್ಷದ ಮುಖಂಡರನ್ನು ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ಕನೌಜ್‌ನಿಂದ ಸ್ಪರ್ಧಿಸಿರುವ ಅಖಿಲೇಶ್ ಯಾದವ್ ಹಿಂದಿಯಲ್ಲಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
माननीय सर्वोच्च न्यायालय, चुनाव प्रमुख @ECISVEEP @CEOUP व पुलिस प्रमुख @dgpup @Uppolice इस बात का तत्काल संज्ञान लें कि मिर्ज़ापुर, अलीगढ़, कन्नौज के अलावा उत्तर प्रदेश के कई ज़िलों में ज़िलाधिकारी व पुलिस प्रशासन विपक्ष के राजनीतिक कार्यकर्ताओं को घरों में नज़रबंद करने का… pic.twitter.com/0eJwFHlq5u
— Akhilesh Yadav (@yadavakhilesh) June 3, 2024
“ಎಲ್ಲ ರಾಜಕೀಯ ಪಕ್ಷಗಳು ಶಾಂತಿಯುತವಾಗಿ ಕೆಲಸ ಮಾಡುತ್ತಿರುವಾಗ, ಉತ್ತರ ಪ್ರದೇಶ ಸರ್ಕಾರ ಮತ್ತು ಆಡಳಿತವು ಸಾರ್ವಜನಿಕರ ಕೋಪಕ್ಕೆ ಕಾರಣವಾಗುವ ಯಾವುದೇ ಅನೈತಿಕ ಕೆಲಸವನ್ನು ಮಾಡಬಾರದು. ಪಕ್ಷಪಾತಿ ಧೋರಣೆ ಮಾಡುತ್ತಿರುವ ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ತೆಗೆದು ಹಾಕಬೇಕು. ಶಾಂತಿಯುತ ವಾತಾವರಣದಲ್ಲಿ ಮತ ಎಣಿಕೆಯನ್ನು ಪೂರ್ಣಗೊಳಿಸುವ ಭರವಸೆ ನೀಡಬೇಕು” ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥರು ಚುನಾವಣಾ ಆಯೋಗ ಹಾಗೂ ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದ್ದಾರೆ.
