11 ಸಾವಿರ ಕೊಳವೆ ಬಾವಿ ಕೊರೆಯಲು ಆದೇಶ: ಡಿಸಿಎಂ ಡಿ ಕೆ ಶಿವಕುಮಾರ್

Date:

ಬೆಂಗಳೂರಿನ ಎಲ್ಲ ಶಾಸಕರಿಗೂ 10 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬಹುದು. ಇತರೇ ಕಾಮಗಾರಿಗಳಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಡಬ್ಲ್ಯೂಎಸ್ಎಸ್‌ಬಿ ವ್ಯಾಪ್ತಿಯಲ್ಲಿ 11 ಸಾವಿರ ಕೊಳವೆ ಬಾವಿ ಮತ್ತೆ ಕೊರೆಯಲು ಆದೇಶ ನೀಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೊಳವೆಬಾವಿಗಳನ್ನು ಕೊರೆಸುವ ಸಂಬಂಧ ಬಿಜೆಪಿ ಶಾಸಕ ಮುನಿರಾಜು ಮತ್ತು ಬೈರತಿ ಬಸವರಾಜು ಅವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, “ಕೋವಿಡ್ ಕಾರಣದಿಂದ ಕಾವೇರಿ ನೀರು ಸರಬರಾಜು ಕಾಮಗಾರಿ ತಡವಾಗಿತ್ತು. ಅಲ್ಲಿಯವರೆಗೆ ರೀ- ಬೋರ್ವೆಲ್, ಪಂಪ್ ದುರಸ್ತಿ ಸೇರಿದಂತೆ ಇತರೇ ಕೆಲಸಗಳಿಗೆ ಟೆಂಡರ್ ಕರೆಯಲಾಗಿದೆ. ಕೂಡಲೇ ಮುಂದಿನ ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆ ವ್ಯಾಪ್ತಿಯಲ್ಲಿ 68 ಟ್ಯಾಂಕರ್ ಗಳು ಕಾರ್ಯನಿರ್ವಹಿಸುತ್ತಿವೆ”ಎಂದು ತಿಳಿಸಿದರು.

“ದಾಸರಹಳ್ಳಿಗೆ ಈಗಾಗಲೇ 5.24 ಲಕ್ಷ ಅನುದಾನವನ್ನು ನೀಡಲಾಗಿದೆ. ಲಕ್ಷ್ಮೀಪುರ ಸೇರಿದಂತೆ ದಾಸರಹಳ್ಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕಾವೇರಿ ನೀರು ಪೂರೈಕೆ ಕಾಮಗಾರಿಯನ್ನು ನಡೆಸಲಾಗುವುದು. ದಾಸರಹಳ್ಳಿ ಕ್ಷೇತ್ರದಲ್ಲಿ ಕಾರ್ಖಾನೆಗಳು ಹೆಚ್ಚು ಇರುವ ಕಾರಣ ನೀರು ಹೆಚ್ಚು ಬಳಕೆಯಾಗುತ್ತಿದೆ. ಆದ ಕಾರಣ ವಸತಿ ಪ್ರದೇಶಗಳಿಗೆ ತೊಂದರೆಯಾಗುತ್ತಿದೆ. ಬೋರ್ವೆಲ್ ನೀರು ಬಳಕೆಯ ಬಗ್ಗೆ ಈಗಾಗಲೇ ಕಾನೂನು ಇದ್ದು. ಈ ಬಗ್ಗೆಯೂ ಸದನದಲ್ಲಿ ಚರ್ಚೆ ಮಾಡಲಾಗುವುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೆ.ಆರ್ ಪುರಂ ಕ್ಷೇತ್ರದಲ್ಲಿ ನಾರಾಯಣಪುರ ಸೇರಿದಂತೆ ಕೆಲವೆಡೆ ನೀರನ್ನು ತುಂಬುವ ಕೆಲಸ ಮಾಡಬೇಕಿದೆ ಟ್ಯಾಂಕರ್ ಗಳು ರೂ.1,500 ವಸೂಲಿ ಮಾಡುತ್ತಿದ್ದು ಇದನ್ನು ರೂ. 500ಕ್ಕೆ ಇಳಿಸಬೇಕು ಎಂದು ಬೈರತಿ ಬಸವರಾಜು ಅವರು ಮನವಿ ಮಾಡಿದ್ದು. ಖಾಸಗಿ ನೀರು ಟ್ಯಾಂಕರ್ ದರ ಇಳಿಸಲು ಕಾನೂನು ತರಬಹುದು. ಇಲ್ಲಿ ಎಲ್ಲರೂ ಒಮ್ಮತಕ್ಕೆ ಬಂದರೆ ಇದನ್ನು ಜಾರಿಗೆ ತರಲು ಸಿದ್ಧ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರಿಂದ ಒಂದು ಪತ್ರ ಬರೆಸಿ ಕೊಟ್ಟರೆ ಸಲಹೆಯನ್ನು ಪರಿಗಣಿಸುತ್ತೇವೆ” ಎಂದು ಹೇಳಿದರು.

“ಇದರ ಜೊತೆಗೆ ಅಂತರ್ಜಲ ನೀರಿನ ಅತಿ ಹೆಚ್ಚಿನ ಬಳಕೆ, ಶೋಷಣೆ ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ವಿಚಾರವಾಗಿ ಕಂದಾಯ ಇಲಾಖೆಯ ಬಳಿಯೂ ಚರ್ಚೆ ನಡೆಸಲಾಗುವುದು. ಬೆಂಗಳೂರಿಗೆ ಈಗ 1,450 ಎಂಎಲ್ಡಿ ನೀರು ಸರಬರಾಜಾಗುತ್ತಿದೆ. ಈ ವರ್ಷ ಬರಗಾಲ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು. ಈ ವಿಚಾರವಾಗಿ ಮೊನ್ನೆ ಬಿಜೆಪಿ ಶಾಸಕರಾದ ಸೋಮಶೇಖರ್ ಹಾಗೂ ಮುನಿರತ್ನ ಅವರು ಪ್ರಸ್ತುತ ಇರುವ ಕೊಳವೆ ಬಾವಿಗಳನ್ನು ಇನ್ನೂ 500 ಅಡಿ ಹೆಚ್ಚು ಕೊರೆಯಲು ಅವಕಾಶ ನೀಡಬೇಕು ಎಂಬ ಸಲಹೆ ನೀಡಿದ್ದಾರೆ. ಈ ವಿಚಾರವಾಗಿ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

110 ಹಳ್ಳಿಗಳಿಗೆ ನೀರು

“ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು” ಎಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದರು.

“ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೇ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ಹೇಳಿದರು.

“ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ ಬಿಡಿಎ ಬಡಾವಣೆಗಳಿಗೆ ನೀರು ಹರಿಸಲು ಇದ್ದಂತಹ ತೊಡಕುಗಳನ್ನು ನಿವಾರಿಸಲಾಗುವುದು. ಈಗಾಗಲೇ ಅರಣ್ಯ ಇಲಾಖೆಯವರ ಜೊತೆಗೆ ಚರ್ಚೆ ನಡೆಸಲಾಗಿದೆ. ಯಶವಂತಪುರ ಕ್ಷೇತ್ರ ದೊಡ್ಡದಾಗಿದ್ದು, ನಗರ ಭಾಗದಷ್ಟೇ ವಿಸ್ತೀರ್ಣವನ್ನು ಗ್ರಾಮೀಣ ಭಾಗ ಹೊಂದಿದೆ. ಎಲ್ಲಾ ಸಮಸ್ಯೆಗಳನ್ನು ನಾನೇ ಖುದ್ದಾಗಿ ಬಗೆಹರಿಸುತ್ತೇನೆ” ಎಂದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...

ಚಂದ್ರಶೇಖರ್‌ ಆತ್ಮಹತ್ಯೆ | ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ಹಗರಣವಿದು: ಗೋವಿಂದ ಕಾರಜೋಳ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು...

ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ...