ತಹಶೀಲ್ದಾರ್ ಅಜಿತ್ ಕುಮಾರ್ ರೈ ಅನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸಲು ಆದೇಶ

Date:

  • ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪ
  • ಅನುಕಂಪದಲ್ಲಿ ಸರ್ಕಾರಿ ಹುದ್ದೆ ಪಡೆದಿದ್ದ ಅಜಿತ್ ರೈ ಮೇಲೆ ನಾನಾ ಪ್ರಕರಣ

ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪದ ಮೇಲೆ ಬೆಂಗಳೂರಿನ ಕೆ ಆ‌ರ್ ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ವಿರುದ್ಧ ಮೊಕದ್ದಮೆ ದಾಖಲಿಸಿ, ಸಕ್ಷಮ ನ್ಯಾಯಾಲಯದಲ್ಲಿ‌ ವಿಚಾರಣೆಗೆ ಒಳಪಡಿಸಲು ದಂಡ ಪ್ರಕ್ರಿಯಾ ಸಂಹಿತೆ ಕಲಂ 197ರ ಅನ್ವಯ ಮಂಜೂರಾತಿ ನೀಡಿ ಸರ್ಕಾರ ಆದೇಶಿಸಿದೆ.

- Advertisement -

ಕೆ ಆರ್ ಪುರ ಹೋಬಳಿ, ಕೊತ್ತನೂರು ಗ್ರಾಮದ ಸ.ನಂ:47ರಲ್ಲಿ 17-34 ಎಕರೆ/ಗುಂಟೆ ಜಮೀನು “ಅರಣ್ಯ ಭೂಮಿ” ಎಂದು ಸ್ಪಷ್ಟವಾಗಿ ಗೊತ್ತಿದ್ದರೂ ಸಹ ಹಾಗೂ ಸದರಿ ಜಮೀನನ್ನು ಅರಣ್ಯ ಇಲಾಖೆಗೆ ಹಸ್ತಾಂತರವಾಗಿರುವುದು ದಾಖಲೆಯಲ್ಲಿ ಇದ್ದರೂ ಸಹ, ಅದನ್ನು ರದ್ದುಪಡಿಸಿ, ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿರುವ ಆರೋಪ ಅಜಿತ್ ಕುಮಾರ್ ರೈ ಮೇಲೆ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಹಿನ್ನೆಲೆಯಲ್ಲಿ ಅಜಿತ್ ಕುಮಾರ್ ರೈ ವಿರುದ್ಧ ಮೊಕದ್ದಮೆ ದಾಖಲಿಸಿ, ಸಕ್ಷಮ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲು ಮಂಜೂರಾತಿ ನೀಡುವಂತೆ ಬೆಂಗಳೂರು ನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರ್ಕಾರಕ್ಕೆ ಕೋರಿದ್ದರು.

ಕೆ ಆರ್ ಪುರ ಹೋಬಳಿ, ಕೊತ್ತನೂರು ಗ್ರಾಮದ ಸ.ನಂ:47ರಲ್ಲಿ 17-34 ಎಕರೆ/ಗುಂಟೆ ಜಮೀನನ್ನು ಬೆಂಗಳೂರು ನಗರ ಜಿಲ್ಲಧಿಕಾರಿಗಳು 25.01.2000 ಆದೇಶದಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಅದರಂತೆ, ಪಹಣಿ ಹಾಗೂ ಇತರೆ ಕಂದಾಯ ದಾಖಲೆಗಳಲ್ಲಿ ‘ಅರಣ್ಯ’ ಎಂದು ದಾಖಲಾಗಿರುತ್ತದೆ.

ಕೆ ಆ‌ರ್ ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದಾಗ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಕಳೆದ ಜೂನ್‌ನಲ್ಲಿ ದಾಳಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಖ್ಯಮಂತ್ರಿ ಜನಸ್ಪಂದನ; ಆಡಳಿತ ವೈಫಲ್ಯದ ವಿರಾಟ್ ದರ್ಶನ

ಲೋಕಾಯುಕ್ತ ದಾಳಿ ವೇಳೆ ಅಜಿತ್‌ ಕುಮಾರ್‌ ರೈ ಬಳಿ 500 ಕೋಟಿ ರೂ. ಆಸ್ತಿ ಪತ್ತೆಯಾಗಿತ್ತು. ಸಹಕಾರ ನಗರದ ಮನೆಯಲ್ಲಿ 750 ಗ್ರಾಂ ಚಿನ್ನಾಭರಣ, ದುಬಾರಿ ಬೆಲೆಯ ಮೂರು ರ‍್ಯಾಡೋ ವಾಚ್‌, ವಿದೇಶಿ ಬ್ರಾಂಡ್‌ನ ಸುಮಾರು 50 ವಾಚ್‌ ಜಪ್ತಿ ಮಾಡಲಾಗಿತ್ತು. ಬೆಂಗಳೂರಿನ ಆಸುಪಾಸಿನಲ್ಲಿ 200 ಎಕರೆಗೂ ಹೆಚ್ಚು ಜಮೀನನ್ನು ಬೇನಾಮಿ ಆಸ್ತಿ ಮಾಡಿಕೊಂಡಿದ್ದು ಲೋಕಾಯುಕ್ತ ತನಿಖೆಯಲ್ಲಿ ಬಯಲಾಗಿದೆ.

ಅನುಕಂಪದಲ್ಲಿ ಸರ್ಕಾರಿ ಹುದ್ದೆ ಪಡೆದಿದ್ದ ಅಜಿತ್ ರೈ

ಅಜಿತ್ ರೈ ತಂದೆ ಪುತ್ತೂರಿನಲ್ಲಿ ಭೂ ಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕರ್ತವ್ಯದಲ್ಲಿದ್ದಾಗಲೇ ತಂದೆ ತೀರಿಕೊಂಡಿದ್ದರು ಎಂಬ ಕಾರಣಕ್ಕೆ ಅನುಕಂಪದ ಆಧಾರದ ಮೇಲೆ ಕಂದಾಯ ಇಲಾಖೆಯಲ್ಲಿ ಅಜಿತ್ ರೈಗೆ ಕೆಲಸ ನೀಡಲಾಗಿತ್ತು. ಅಲ್ಲಿ ಕೆಲ ವರ್ಷ ಕೆಲಸ ಮಾಡಿದ್ದ ಅಜಿತ್, ಬಳಿಕ ಹಲವು ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ತಹಶೀಲ್ದಾರ್ ಆಗಿದ್ದ. ಈ ಹಿಂದೆಯೂ ಅಜಿತ್ ರೈ ಕೆಆರ್‌ ಪುರ ತಹಶೀಲ್ದಾರ್ ಆಗಿದ್ದಾಗ ಅಮಾನತುಗೊಂಡಿದ್ದ. ಹಿಂದೆ ಬಿಬಿಎಂಪಿ ಕೈಗೊಂಡಿದ್ದ ಒತ್ತುವರಿ ತೆರವು ಕಾರ್ಯಾಚರಣೆಗೆ ಸಹಕರಿಸಿದ ಅರೋಪದಡಿ ಅಜಿತ್‌ ಕುಮಾರ್ ರೈನನ್ನು ಸರ್ಕಾರ 2022, ನವೆಂಬರ್‌ ತಿಂಗಳಲ್ಲಿ ಅಮಾನತು ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸತ್ಯ ಬರೆದ ಪತ್ರಕರ್ತನ ಹತ್ಯೆ, ಮಗನ ಒಂಟಿ ಹೋರಾಟ: ಪೆರೋಲ್ ಮೋಜಿನಲ್ಲಿ ಅತ್ಯಾಚಾರಿ ರಾಮ್ ರಹೀಮ್

ಸಾಧ್ವಿಗಳ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ...

800 ಉರ್ದು, 200 ಮರಾಠಿ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಸಭಾಪತಿ ಸಲೀಂ ಅಹ್ಮದ್‌ಗೆ ಮನವಿ

ಸರ್ಕಾರವು 800 ಉರ್ದು ಮತ್ತು 200 ಮರಾಠಿ ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು...

ಆಕೃತಿ ಚೌಧರಿ ಪ್ರಕರಣ: IAS ಅಧಿಕಾರಿ ಮೇಧಾರೂಪಂ ವೇತನದಿಂದ 5 ಲಕ್ಷ ರೂ. ದಂಡ ವಸೂಲಿಗೆ ಸುಪ್ರೀಂ ತಡೆಯಾಜ್ಞೆ

ದೆಹಲಿ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿದ್ಯಾರ್ಥಿನಿ ಮತ್ತು ಹೋರಾಟಗಾರ್ತಿ ಆಕೃತಿ ಚೌಧರಿ...

ಗರ್ಬಾ ವೇಳೆ 4.5 ಲಕ್ಷ ಹಿಂದೂ ಯುವತಿಯರು ಪರಾರಿ ಎಂದ ಬಿಜೆಪಿ ಶಾಸಕಿ; ಉಷಾ ಠಾಕೂರ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನವರಾತ್ರಿ ಆಚರಣೆಯ ಭಾಗವಾದ ಗರ್ಬಾ ನೃತ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷ ದೇಶದಲ್ಲಿ ಸುಮಾರು...