ಟೀಮ್ ಇಂಡಿಯಾ ಸೋಲಿಗೆ ‘ಕೆಟ್ಟ ಶಕುನ’ ಅಲ್ಲಿದ್ದದ್ದು ಕಾರಣ: ರಾಹುಲ್‌ ಗಾಂಧಿ ಹೇಳಿಕೆಯ ವಿಡಿಯೋ ವೈರಲ್

Date:

ಕಳೆದ ಭಾನುವಾರ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ 6ನೇ ಬಾರಿಗೆ ಚಾಂಪಿಯನ್ ಆಗಿತ್ತು.

- Advertisement -

ಟೂರ್ನಿಯಲ್ಲಿ ಫೈನಲ್ ಪಂದ್ಯಕ್ಕೂ ಮೊದಲು ಆಡಿದ್ದ ಎಲ್ಲ ಹತ್ತು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯಿಸುವ ಮೂಲಕ ಫೈನಲ್ ತಲುಪಿತ್ತು. ಆದರೆ ಫೈನಲ್‌ನಲ್ಲಿ ಅದೃಷ್ಟ ಕೈ ಹಿಡಿಯಲಿಲ್ಲ. ಟೀಮ್ ಇಂಡಿಯಾ ಸೋಲನುಭವಿಸಿದ್ದರಿಂದ ಕೋಟ್ಯಂತರ ಭಾರತೀಯರ ಕನಸು ನುಚ್ಚು ನೂರಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸೋಲಿನ ಬಳಿಕ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯಲ್ಲಿ ನೀಡಿರುವ ಹೇಳಿಕೆಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಹೆಸರು ಉಲ್ಲೇಖಿಸದೆಯೇ ಪರೋಕ್ಷವಾಗಿ ‘ಪನೌತಿ (ಅಪಶಕುನ)’ ಎಂದು ವ್ಯಂಗ್ಯವಾಡಿದ್ದಾರೆ.

ಟೀಮ್ ಇಂಡಿಯಾದ ಸೋಲಿಗೆ ‘ಕೆಟ್ಟ ಶಕುನ’ ಅಲ್ಲಿದ್ದದ್ದು ಕಾರಣ ಎನ್ನುವ ಮೂಲಕ ವ್ಯಂಗ್ಯವಾಡಿದ್ದು, ಈ ವಿಡಿಯೋ ಈ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

“ಪನೌತಿ (ಕೆಟ್ಟ ಶಕುನ) ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬಂದಿತ್ತು. ಇದರಿಂದಾಗಿ ಟೀಂ ಇಂಡಿಯಾ ಗೆಲ್ಲಬೇಕಿದ್ದ ಪಂದ್ಯವನ್ನು ಸೋತಿದೆ. ಮಾಧ್ಯಮಗಳು ಹಾಗೂ ಟಿವಿಯಲ್ಲಿ ಇದನ್ನು ತೋರಿಸುವುದಿಲ್ಲ. ಆದರೆ, ನಿಜ ಹೇಳಬೇಕೆಂದರೆ ಇದು ದೇಶದ ಜನತೆಗೆ ಗೊತ್ತಿದೆ” ಎಂದು ಪರೋಕ್ಷವಾಗಿ ಪ್ರಧಾನಿ ಹೆಸರು ಹೇಳದೆಯೇ ಟಾಂಗ್ ನೀಡಿದ್ದಾರೆ. ಈ ವೇಳೆ ಅಲ್ಲಿ ಸೇರಿದ್ದ ಜನರು ನಕ್ಕು ಬೊಬ್ಬೆ ಹೊಡೆದಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಬಿಜೆಪಿಗರನ್ನು ಕೆರಳಿಸಿದೆ.

ರಾಹುಲ್ ಅವರ ‘ಪನೌತಿ’ ಹೇಳಿಕೆಗೆ ಗರಂ ಆಗಿರುವ ಬಿಜೆಪಿ ಮುಖಂಡ ಮಂಜಿಂದರ್ ಸಿಂಗ್ ಸಿರ್ಸಾ, ‘ರಾಹುಲ್ ಗಾಂಧಿಯವರು ಹೇಳಿಕೆ ಖಂಡನೀಯ. ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾಗಿರುವವರನ್ನು ‘ಪನೌತಿ’ ಎಂದು ಹೇಳುವ ಮೂಲಕ ನಿಂದನೀಯ ಪದಗಳನ್ನು ಬಳಸಿದ್ದಾರೆ. ಅಧಿಕಾರಕ್ಕಾಗಿ ಗಾಂಧಿ ಕುಟುಂಬ ಈ ರೀತಿಯ ಹೇಳಿಕೆ ಒಪ್ಪುವಂಥದ್ದಲ್ಲ. ಇಡೀ ಜಗತ್ತಿನ ದೊಡ್ಡ ಅಪಶಕುನಗಳು ನಿಮ್ಮ ಗಾಂಧಿ ಪರಿವಾರ. ನಿಮ್ಮ ಹೇಳಿಕೆಗೆ 140 ಕೋಟಿ ಭಾರತೀಯರು ಉತ್ತರ ನೀಡಲಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...