‘ನಮ್ಮ ಸರ್ಕಾರ ಯಾರ ಫೋನ್ ಟ್ಯಾಪ್ ಮಾಡುವುದಿಲ್ಲ’: ಸಿಎಂ ಸಿದ್ದರಾಮಯ್ಯ

Date:

ಕೇಂದ್ರ ಸರ್ಕಾರದ ಹೈಕಮಾಂಡ್ ನಿಂದ ರಾಜ್ಯಪಾಲರಿಗೆ ಫೋನ್ ಬಂದಿರಬಹುದು ಎಂದು ಹೆಚ್.ಕೆ. ಪಾಟೀಲ್ ಅವರು ಊಹೆ ಮೇಲೆ ತಿಳಿಸಿದ್ದಾರೆ ಅಷ್ಟೆ. ನಮ್ಮ ಸರ್ಕಾರ ಯಾರ ಫೋನ್ ಅನ್ನು ಟ್ಯಾಪ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಸ್ಪಷ್ಟ ಪಡಿಸಿದರು.

- Advertisement -

ಇಂದು ಮಧ್ಯಾಹ್ನ ಪ್ರಾರಂಭವಾದ ವಿಧಾನಸಭೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ , ಉಪ ನಾಯಕರಾದ ಅರವಿಂದ್ ಬೆಲ್ಲದ್ ಹಾಗೂ ಸುರೇಶ್ ಕುಮಾರ್ ಅವರು ರಾಜ್ಯಪಾಲರ ಹುದ್ದೆಗೆ ಎಲ್ಲರೂ ಗೌರವ ನೀಡಬೇಕು. ಆದರೆ ಸದನದಲ್ಲಿ ರಾಜ್ಯಪಾಲರನ್ನು ಅಗೌರವದಿಂದ ನಡೆಸಿಕೊಳ್ಳಲಾಗಿದೆ. ಹಾಗೂ ಹೆಚ್.ಕೆ.ಪಾಟೀಲ್ ಅವರು ರಾಜ್ಯಪಾಲರಿಗೆ ಕೇಂದ್ರದ ಗೃಹ ಸಚಿವರು ಫೋನ್ ಮಾಡಿದ್ದರು ಎಂದು ಹೇಳಿದ್ದಾರೆ. ಹಾಗಾಗಿ ಸರ್ಕಾರ ರಾಜ್ಯಪಾಲರ ಫೋನ್ ಟ್ಯಾಪಿಂಗ್ ಮಾಡಿಸುತ್ತಿದೆಯೇ ಅಥವಾ ಕೇಂದ್ರ ಗೃಹ ಸಚಿವರು ಫೋನ್ ಮಾಡಿದ್ದರು ಎಂಬುದಕ್ಕೆ ಮಾಹಿತಿ ನೀಡಬೇಕು. ಮಾಹಿತಿ ನೀಡದಿದ್ದರೆ ನಿಮ್ಮ ಹೇಳಿಕೆಯನ್ನು ಹಿಂಪಡೆದು, ಸದನಕ್ಕೆ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಮಾತನಾಡಿದ ಮುಖ್ಯಮಂತ್ತಿಯವರು, ವಿರೋಧ ಪಕ್ಷದವರಿಗೆ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡಲು ಇಷ್ಟವಿಲ್ಲ. ಆದ ಕಾರಣ ಸುಮ್ಮನೆ ಇಲ್ಲಸಲ್ಲದ ವಿಷಯಗಳನ್ನು ಪ್ರಸ್ತಾಪ ಮಾಡಿ ಕಾಲಹರಣ ಮಾಡುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಜ್ಯಪಾಲರಿಗೆ ಅವಮಾನ ಮಾಡಲೆಂದು ಹೆಚ್.ಕೆ.ಪಾಟೀಲರು ಖುರ್ಚಿ ಮೇಲೆ ನಿಂತಿದ್ದಲ್ಲ. ರಾಜ್ಯಪಾಲರು ಬೇಗನೆ ಹೊರಟ ಸಂದರ್ಭದಲ್ಲೂ ಕೂಡ ಉಪಮುಖ್ಯಮಂತ್ರಿಗಳು, ಸಭಾಪತಿಗಳು, ಪಾಟೀಲರು ಮತ್ತು ನಾನು ಅವರ ಹಿಂದೆಯೇ ಹೋಗಿ ಅವರನ್ನು ಗೌರವದಿಂದ ಬೀಳ್ಕೊಟ್ಟಿದ್ದೇವೆ ಎಂದರು.

ಇದನ್ನು ಓದಿದ್ದೀರಾ? ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯಿಸಿದ ಹೆಚ್.ಕೆ.ಪಾಟೀಲರು ಕೇಂದ್ರ ಸರ್ಕಾರವು ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರಗಳಿಗೆ ಮುಜುಗರ ಉಂಟುಮಾಡುವಂತೆ ಒತ್ತಡವನ್ನು ತರುತ್ತಿದೆ. ಈ ವಿಷಯ ಇಂದು ಇಡೀ ದಕ್ಷಿಣ ಭಾರತದಲ್ಲಿ ಚರ್ಚೆಯಾಗುತ್ತಿದ್ದು, ಕೇಂದ್ರದ ವರ್ತನೆಯಿಂದ ದಕ್ಷಿಣ ಭಾರತದ ರಾಜ್ಯಗಳು ಬೇಸತ್ತು ಹೋಗಿವೆ ಎಂದರು.

ಭಾಷಣದಲ್ಲಿ ಲೋಕಸಭೆ ಮತ್ತು ರಾಜ್ಯ ಸಭೆಗಳಲ್ಲಿ ಪ್ರಸ್ತಾಪವಾಗಿ ರಾಷ್ಟ್ರಪತಿಗಳಿಂದ ಅಂಕಿತವಾಗಿರುವ ಕಾಯಿದೆಯ ವಿರುದ್ಧ ಬರೆದಿರುವುದನ್ನು ರಾಜ್ಯಪಾಲರು ಹೇಗೆ ಓದಲು ಸಾಧ್ಯ ಎಂದ ಸುರೇಶ್ ಕುಮಾರ್ ಅವರು, 2011 ರಲ್ಲಿ ಹಂಸರಾಜ್ ಭಾರದ್ವಾಜ್ ಅವರು ಜಂಟಿ ಅಧಿವೇಶನ ಓದುವಾಗ ವಿರೋಧ ಪಕ್ಷದಲ್ಲಿದ್ದ ಸ್ವತಃ ಸಿದ್ದರಾಮಯ್ಯ ಅವರೇ ರಾಜ್ಯಪಾಲರಿಗೆ ಇದು ಭ್ರಷ್ಟ ಸರ್ಕಾರ ದಯವಿಟ್ಟು ಭಾಷಣವನ್ನು ಓದಬೇಡಿ ಎಂದು ಹೇಳುವ ಮೂಲಕ ರಾಜ್ಯಪಾಲರಿಗೆ ಅವಮಾನ ಮಾಡಿದ್ದರು ಎಂದು ಹೇಳಿದಾಗ, ಮುಖ್ಯಮಂತ್ರಿ ಅವರು ‘ಹೌದು ಹೇಳಿದ್ದೆ, ಅಂದಿನ ಸನ್ನಿವೇಶವೇ ಬೇರೆಯಾಗಿತ್ತು. ಆಗಿನ ಸರ್ಕಾರದಲ್ಲಿ ಅಕ್ರಮ ಗಣಿಗಾರಿಕೆಯಿಂದ ಭ್ರಷ್ಟಾಚಾರ ನಡೆದಿತ್ತು. ಅಂದಿನ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗಡೆ ಅವರು ಆ ಬಗ್ಗೆ ವರದಿಯನ್ನು ನೀಡಿದ್ದರು. ಹಾಗಾಗಿ ನಾನು ಅಂದಿನ ಸರ್ಕಾರಕ್ಕೆ ಭ್ರಷ್ಟ ಸರ್ಕಾರ ಎಂದು ಹೇಳಿದ್ದೆ ಹೊರತು ರಾಜ್ಯಪಾಲರಿಗೆ ಹೇಳಿದ್ದಲ್ಲ’ ಎಂದರು.

ರಾಷ್ಟಗೀತೆಯನ್ನು ಹಾಡಿಸದಿದ್ದುದು ಕೂಡ ಆಡಳಿತ ಪಕ್ಷದ ನಿರ್ಲಕ್ಷ್ಯವೆ ಎಂದು ವಿರೋಧ ಪಕ್ಷದವರು ಹೇಳಿದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ ಖರ್ಗೆ ಅವರು ರಾಜ್ಯಪಾಲರು ಒಂದು ನಿಮಿಷದಲ್ಲಿ ಭಾಷಣ ಮುಗಿಸಿ ಹೊರಟರೆ ಹೇಗೆ ತಾನೆ ಬ್ಯಾಂಡ್ ನವರಿಗೆ ತಿಳಿಯುತ್ತದೆ. ಭಾಷಣ ಒಂದು ತಾಸು ಆಗಬಹುದೆಂಬ ನಿರೀಕ್ಷೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ಆದರೆ ರಾಜ್ಯಪಾಲರಿಗೆ ರಾಷ್ಟ್ರಗೀತೆ ಹಾಡಿದ ನಂತರ ತಾವು ಹೋಗಬೇಕೆಂಬುದು ತಿಳಿದಿರಲಿಲ್ಲವೆ ಎಂದರು.

ಹೀಗೆ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವೆ ರಾಜ್ಯಪಾಲರ ನಡವಳಿಕೆ ಬಗ್ಗೆ ವಾದವಿವಾದ ನಡೆಯುತ್ತಲೇ ಇದ್ದುದರಿಂದ ಸಭೆಯನ್ನು 10 ನಿಮಿಷಗಳ ಕಾಲ ಮುಂದೂಡಿದ ಸಭಾಧ್ಯಕ್ಷರು ಆಡಳಿತ ಮತ್ತು ವಿರೋಧ ಪಕ್ಷದವರೊಂದಿಗೆ ಸಭೆಯನ್ನು ನಡೆಸಿದ ನಂತರ ಸದನಯನ್ನು ಆರಂಭಿಸಿದ ವೇಳೆ ರಾಜ್ಯಪಾಲರ ನಡವಳಿಕೆ ಬಗ್ಗೆ ಹೀಗೆ ವಾದ ವಿವಾದ ಮಾಡುವುದು ಸದನದ ಘನತೆಗೆ ತಕ್ಕುದಲ್ಲ. ಇದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗುತ್ತದೆ. ಸದನದ ಸದಸ್ಯರು ತಮ್ಮ ಘನತೆ ತಕ್ಕಂತೆ ಆತ್ಮ ವಿಮರ್ಶೆ ಮಾಡಿಕೊಂಡು ಸದನದಲ್ಲಿ ಗೌರವಯುತವಾಗಿ ನಡೆದುಕೊಳ್ಳಬೇಕು. ಆದ್ದರಿಂದ ಇನ್ನು ಮುಂದೆ ಯಾವ ಸದಸ್ಯರು ರಾಜ್ಯಪಾಲರ ಬಗ್ಗೆ ಮತ್ತು ಅವರ ನಡವಳಿಕೆ ಬಗ್ಗೆ ಮಾತನಾಡಬಾರದೆಂದು ತೀರ್ಪನ್ನು ಮಾಡಿದರು.

ನಂತರ ಕಲಾಪದಲ್ಲಿ ಗಮನ ಸೆಳೆಯುವ ಸೂಚನೆಯನ್ನು ನಡೆಸಿದ ನಂತರ ವಿಧಾನಸಭಾ ಕಲಾಪವನ್ನು ಸಭಾಧ್ಯಕ್ಷರು ಮುಂದೂಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...