ಒಳ ಮೀಸಲಾತಿ ಜಾರಿಗೆ ನಮ್ಮ ಸರ್ಕಾರ ಬದ್ಧವಾಗಿದೆ: ಸಚಿವ ಡಾ. ಹೆಚ್ ಸಿ ಮಹದೇವಪ್ಪ ಭರವಸೆ

Date:

Advertisements

ಒಳ ಮೀಸಲಾತಿ ಜಾರಿಗೆ ನಮ್ಮ ಸಿದ್ದರಾಮಯ್ಯ ಸರ್ಕಾರ ಬದ್ಧವಾಗಿದೆ. ಈಗಾಗಲೇ ಅದನ್ನು ಸ್ಪಷ್ಟವಾಗಿ ಘೋಷಿಸಿದೆ. ಆದರೆ ಬಿಜೆಪಿ ಪಕ್ಷದ ನಾಯಕರು ಇದನ್ನು ರಾಜಕೀಯಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದು ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ಯಾವುದೇ ಪ್ರಯೋಜನ ಇಲ್ಲ ಎಂದು ಡಾ ಹೆಚ್ ಸಿ ಮಹದೇವಪ್ಪ ಹೇಳಿದರು.

ಬೆಳಗಾವಿಯ ಸುವರ್ಣಸೌಧದ ಬಳಿ ಮಾದಿಗ ದಂಡೋರ ಸಮಿತಿಯಿಂದ ನಡೆಯುತ್ತಿರುವ ಒಳ ಮೀಸಲಾತಿ ಜಾರಿ ಹೋರಾಟದ ಸಮಾವೇಶದಲ್ಲಿ ಇಂದು (ಡಿ.16) ಪಾಲ್ಗೊಂಡು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.

ಇದೇ ವೇಳೆ ಪರಿಶಿಷ್ಟ ಸಮುದಾಯಗಳು ತಮ್ಮನ್ನು ಮಾದಿಗ ಮತ್ತು ಹೊಲೆಯ ಎಂದು ಕರೆದುಕೊಳ್ಳುವುದನ್ನು ನಿಲ್ಲಿಸಲು ವಿನಂತಿಸಿದರು. “ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದಂತೆ ರಾಜಕೀಯ ಅಧಿಕಾರವೇ ಶೋಷಿತರ ಅಭಿವೃದ್ಧಿಯ ಕೀಲಿಕೈ ಎಂದು ಹೇಳಿದ್ದು ಅದನ್ನು ಎಲ್ಲರೂ ಗಮನದಲ್ಲಿಟ್ಟುಕೊಂಡು ವರ್ತಿಸಬೇಕು” ಎಂದರು.

Advertisements

“ಜನರನ್ನು ಮೆಚ್ಚಿಸಲು ಹಳೆಯ ವರದಿ ಮತ್ತು 2011ರ ಜನಗಣತಿಯ ದತ್ತಾಂಶ ತೆಗೆದುಕೊಂಡು ಮೀಸಲಾತಿ ಕೊಡಿ ಎಂದು ಸಲಹೆ ಕೊಡುತ್ತಿರುವ ಬಿಜೆಪಿಗರಿಗೆ 2011 ರಿಂದ 2024 ರ ಅವಧಿಯ ಒಳಗೆ ಪರಿಶಿಷ್ಟ ಸಮುದಾಯಗಳ ಜನಸಂಖ್ಯೆಯಲ್ಲಿ ಏರಿಕೆಯಾಗಿದ್ದರ ಕುರಿತು ಅರಿವಿಲ್ಲ. ಸರಿ ಸುಮಾರು ಒಂದೂವರೆ ದಶಕದ ಅವಧಿಯಲ್ಲಿ ಆಗಿರುವ ಮಾರ್ಪಾಡುಗಳನ್ನು ಸೇರಿಸಿಕೊಳ್ಳದೇ ಮೀಸಲಾತಿಯನ್ನು ಜಾರಿ ಮಾಡಿದರೆ ಮುಂದೊಮ್ಮೆ ಯಾರಾದರೂ ಪ್ರಶ್ನೆ ಮಾಡಿದರೆ ಆಗ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದಲೇ ನಾಗಮೋಹನ್ ದಾಸ್ ಸಮಿತಿ ರಚಿಸಲಾಗಿದೆ” ಎಂದು ಹೇಳಿದರು.

“ದೇಶಾದ್ಯಂತ ಅತಿ ಶೋಷಿತ ಸಮುದಾಯಗಳನ್ನು ಗುರುತಿಸಿ ಅವುಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಆಲೋಚಿಸಿದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಪಕ್ಷವು ವಿವರವಾಗಿ ಚರ್ಚಿಸಲಿದೆ. ಒಳ ಮೀಸಲಾತಿಯನ್ನು ಸೂಕ್ತ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿದ್ದು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನುಡಿದಂತೆ ನಡೆಯಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X