ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ: ಡಿಸಿಎಂ ಡಿ ಕೆ ಶಿವಕುಮಾರ್

Date:

“ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ. ಇದಕ್ಕೆ ಅಗತ್ಯವಾದ ಅನುದಾನವನ್ನು ಬಜೆಟ್‌ನಲ್ಲಿ ಇಡಲಾಗಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಶೃಂಗೇರಿಯ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಫ್ಯಾನ್, ಕುಕ್ಕರ್‌ಗಳಿಗೆ ಒಂದು ವರ್ಷದ ವಾರಂಟಿ ಇದ್ದರೆ, ನಮಗೆ ಜನ ಐದು ವರ್ಷಗಳ ವಾರಂಟಿ ನೀಡಿದ್ದಾರೆ. ಈ ವಾರಂಟಿಯನ್ನು 10 ವರ್ಷಗಳಿಗೆ ನೀಡುವಂತೆ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸುತ್ತಿದ್ದೇನೆ” ಎಂದು ತಿಳಿಸಿದರು.

“ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆ ವಿಫಲ ಆಗುವುದಿಲ್ಲ. ಪ್ರಾರ್ಥನೆಗೆ ಫಲ ಖಂಡಿತವಾಗಿ ಸಿಗುತ್ತದೆ. ಹೀಗಾಗಿ ನಾನು ಧರ್ಮ ಯುದ್ಧ ಆರಂಭವಾಗುವ ಮುನ್ನ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ನಮ್ಮ ಪಕ್ಷ ಹಾಗೂ ರಾಜ್ಯದ ಜನರ ಪರವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ. ಈ ನಾಡು ಸುಭಿಕ್ಷವಾಗಲಿ, ಒಳ್ಳೆಯ ಆಡಳಿತ ನೀಡುವ ಶಕ್ತಿ ನೀಡಲಿ ಎಂದು ಕೇಳಿಕೊಂಡಿದ್ದೇನೆ. ನಾವು ನುಡಿದಂತೆ ನಡೆದಿರುವುದು ಕೂಡ ನಮ್ಮ ಪ್ರಾರ್ಥನೆಯ ಫಲ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಚಿವ ಶಿವರಾಜ್ ತಂಗಡಗಿ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಆಡುಭಾಷೆಯಲ್ಲಿ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿರಬಹುದು. ಇದೇನು ದೊಡ್ಡ ವಿಚಾರವಲ್ಲ. ತಂಗಡಗಿ ಅವರನ್ನು ದೊಡ್ಡ ಲೀಡರ್ ಆಗಿ ಮಾಡುತ್ತಿದ್ದಾರೆ, ಮಾಡಲಿ” ಎಂದರು.

ಇದನ್ನು ಓದಿದ್ದೀರಾ? ಅಮೆರಿಕದ ಗಾಜಾ ನಡೆ ವಿರೋಧಿಸಿ ಪಿ.ಹೆಚ್‌ಡಿ, ಎಂಎಸ್‌ಸಿ ಪದವಿಗಳನ್ನು ಮರಳಿಸಿದ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಗ್ಗೆ ಕೇಳಿದಾಗ, “2013ರಲ್ಲೂ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮೂಲಕ ದೇವೇಗೌಡರ ಸೊಸೆಯನ್ನು ಕಣಕ್ಕಿಳಿಸಿದ್ದವು. ಆಗಲೂ ಇದೇ ಪರಿಸ್ಥಿತಿ ಇತ್ತು. ಆದರೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಸುರೇಶ್ ಅವರನ್ನು ಗೆಲ್ಲಿಸಿದ್ದರು. ಆಗಲೂ ಸಿದ್ದರಾಮಯ್ಯ ಅವರ ಸರ್ಕಾರ ಇತ್ತು. ಈಗ ಸುರೇಶ್ ಅವರು ಮಾಡಿರುವ ಜನಸೇವೆ ಕೂಡ ಅವರ ಬೆನ್ನಿಗೆ ಇದೆ. ಸುರೇಶ್ ಪ್ರತಿ ಪಂಚಾಯ್ತಿ ಸದಸ್ಯನಂತೆ ಕ್ಷೇತ್ರದ ಜನರ ಸೇವೆ ಮಾಡಿದ್ದಾರೆ. ಸುರೇಶ್ ಪ್ರತಿ ಮನೆಗೂ ಗೊತ್ತು. ಹೀಗಾಗಿ ಜನ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರರಿಗೆ ಹೆಂಡ ಕುಡಿಸಿ ಚಟಗಳ ದಾಸರನ್ನಾಗಿಸುತ್ತಿರುವ ಬಿಜೆಪಿ: ಕಾಂಗ್ರೆಸ್‌ ಕಿಡಿ

ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ,...

ಈ ಚುನಾವಣೆ ಪ್ರಜಾಪ್ರಭುತ್ವದ ಭವಿಷ್ಯ ನಿರ್ಧರಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು...

ಬೀದರ್‌ | ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಪೊಲೀಸ್ ಠಾಣೆಯಿಂದ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳುವ ಸಲುವಾಗಿ‌ ರೌಡಿಶೀಟರ್‌...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು...