ಕೇಸರಿ ಶಾಲು ಹಾಕಿದಾಕ್ಷಣ ನಮ್ಮ ಸಿದ್ಧಾಂತ ಬದಲಾಗುವುದಿಲ್ಲ: ಶಾಸಕ ಜಿ ಟಿ ದೇವೇಗೌಡ

Date:

“ಬಿಜೆಪಿ ಜೊತೆಗೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿರುವುದು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಾತ್ರ. ನಮ್ಮ‌ ತತ್ವ–ಸಿದ್ಧಾಂತವೇ ಬೇರೆ; ಬಿಜೆಪಿಯದ್ದೇ ಬೇರೆ. ಕೇಸರಿ ಶಾಲು ಹಾಕಿದಾಕ್ಷಣ ನಮ್ಮ ಸಿದ್ಧಾಂತ ಬದಲಾಗುವುದಿಲ್ಲ” ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, “ನಮ್ಮ ನಾಯಕರಾದ ಎಚ್ ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಈಚೆಗೆ ನಡೆದ ಪ್ರತಿಭಟನೆ ವೇಳೆ ಹಾಕಿದ್ದುದು ಬಿಜೆಪಿಯವರ ಕೇಸರಿ ಶಾಲಲ್ಲ. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಭಕ್ತನೊಬ್ಬ ಹಾಕಿದ ಶಾಲದು. ಇದನ್ನೇ ಕಾಂಗ್ರೆಸ್‌ನವರು ದೊಡ್ಡದು ಮಾಡಿದ್ದಾರೆ” ಎಂದರು.

“ರಾಜಕೀಯ ಪಕ್ಷಗಳ ನಾಯಕರು ವಿವಿಧ ಕಾರ್ಯಕ್ರಮಕ್ಕೆ ಹೋದಾಗ ಸಂಘಟಕರು ಅವರವರ ಶಾಲನ್ನು ಹಾಕುತ್ತಾರೆ. ಬಿಎಸ್‌ಪಿ ಕಾರ್ಯಕ್ರಮದಲ್ಲಿ ಅವರದ್ದೇ ಶಾಲು ನೀಡುತ್ತಾರೆ. ಹಾಗೆಂದ ಮಾತ್ರಕ್ಕೆ ಪಕ್ಷದ ಸಿದ್ಧಾಂತ ಬದಲಾಗುತ್ತಾ” ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

“ಮೈತ್ರಿ ಮಾಡಿಕೊಂಡ ಮಾತ್ರಕ್ಕೆ ಬದಲಾಗದು. ಜನತಾ ಪಕ್ಷ ಕಟ್ಟಿದ ಜಯಪ್ರಕಾಶ್ ನಾರಾಯಣ್, ಪಕ್ಷ ಉಳಿಸಿ ಬೆಳೆಸಿದ ಎಚ್ ಡಿ ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತೇವೆ” ಎಂದು ಹೇಳಿದರು.

“ಕರ್ನಾಟಕಕ್ಕೆ ಕೊಡಬೇಕಾದ ಎಲ್ಲವನ್ನೂ ಕೊಟ್ಟಿದ್ದೇವೆ ಎಂದು ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಹೇಳುತ್ತಾರೆ. ಆದರೆ, ರಾಜ್ಯ ಸರ್ಕಾರದವರು ಅನುದಾನ ಕೊಟ್ಟಿಲ್ಲ ಎನ್ನುತ್ತಾರೆ. ಏನೇ ಇದ್ದರೂ ಸಭೆ ನಡೆಸಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದಿತ್ತು. ದೆಹಲಿ ಪ್ರತಿಭಟನೆ ಸರಿಯಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ

“ಅಮೃತ್ ಭಾರತ ನಿಲ್ದಾಣ ಯೋಜನೆಯಡಿ ₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275...

ಮಾನನಷ್ಟ ಪ್ರಕರಣಗಳಲ್ಲಿ ಪಕ್ಷವನ್ನೂ ಆರೋಪಿಯಾಗಿ ಮಾಡಬಹುದು: ಕರ್ನಾಟಕ ಹೈಕೋರ್ಟ್

ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ...

ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

ಬೆಂಗಳೂರಿನ ಆನೇಕಲ್‌ ಬಳಿಯ ಕಾಳನಾಯಕನಹಳ್ಳಿ ಸಮೀಪದ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ...

ಬೆಂಗಳೂರು | ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಅಪಹರಣ: ಆರೋಪಿಗಳ ಬಂಧನ

ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿ...