ಆಂಜನೇಯ ಜನ್ಮಭೂಮಿ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ಮುಂದಿನ ಗುರಿ: ಬಸವರಾಜ ಬೊಮ್ಮಾಯಿ

Date:

“ರಾಮಜನ್ಮ ಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ರಾಮನಿಗೂ ಕರ್ನಾಟಕಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಭೂಮಿಯಾದ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಲಬ್ರೂಹಿ ಅತಿಥಿ ಗೃಹದ ಬಳಿ ಇರುವ ಮಾರುತಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

“ಭಾರತದ ಇತಿಹಾಸದಲ್ಲಿ ಇಂದು ಮಹತ್ವದ ಭಕ್ತಿ ಭಾವದ ದಿನ, ಐತಿಹಾಸಿಕ ದಿನ. ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಯ ದಿನ. ಒಂದು ದೇಶದ ಪ್ರಜಾಪ್ರಭುತ್ವದಲ್ಲಿ ಅಂತಿಮ ನಿರ್ಣಯ ಜನರ ನಿರ್ಣಯ. ಎಲ್ಲಕ್ಕಿಂತ ದೊಡ್ಡ ಕೆಲಸ ಸರ್ಕಾರ ಮಾಡಬೇಕಾಗಿರುವುದು ಜನರ ಕೆಲಸ. ಈ ಕೆಲಸ ಪ್ರಧಾನಿ ನರೇಂದ್ರ ಮೋದಿ ಅವರಿಂದ ಆಗುತ್ತಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸು; ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್

“ಅತ್ಯಂತ ಶ್ರದ್ದಾ ಭಕ್ತಿಯಿಂದ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದೆ. ರಾಮ ಮಂದಿರಕ್ಕಾಗಿ ಹೋರಾಟ ಮಾಡಿದಂತಹ ಎಲ್ಲ ಮಹನೀಯರಿಗೆ ಕೋಟಿ ಕೋಟಿ ನಮನ ಸಲ್ಲಿಸುವೆ” ಎಂದು ಹೇಳಿದರು.

“ಆಂಜನೇಯ ಜನ್ಮಸ್ಥಳ ಆಂಜನಾದ್ರಿ ಕರ್ನಾಟಕದಲ್ಲೇ ಇದೆ. ಆಂಜನೇಯ ಇದ್ದರೆ ರಾಮ ಪರಿಪೂರ್ಣ. ಮುಂದಿನ ನಮ್ಮ ಗುರಿ ಆಂಜನೇಯ ಜನ್ಮ ಭೂಮಿ ಅಭಿವೃದ್ಧಿ ಮಾಡುವುದು ಮುಂದಿನ ದಿನಗಳಲ್ಲಿ ಆಂಜನೇಯ ಕ್ಷೇತ್ರ ಅಭಿವೃದ್ಧಿ ಮಾಡಬೇಕು ಅಂತ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ” ಎಂದು ತಿಳಿಸಿದರು.

“ರಾಮ ರಾಜ್ಯ ಸ್ಥಾಪನೆ ನಮ್ಮ ಮುಂದಿನ ಗುರಿ. ಇದು ಅಮೃತ ಘಳಿಗೆ. ಇಂತಹ ಐತಿಹಾಸಿಕ ಸಂದರ್ಭದಲ್ಲಿ ನಾವಿದ್ದೇವೆ ಎನ್ನುವುದು ನಮ್ಮ ಖುಷಿ. ಇಂಥ ಪವಿತ್ರವಾದ ದಿನ ನಾವು ರಾಜಕೀಯ ಬೆರೆಸಿ ಮಾತನಾಡುವುದಿಲ್ಲ” ಎಂದು ಬೊಮ್ಮಾಯಿ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...