ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

Date:

  • ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ
  • ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ

ಪಕ್ಷದೊಳಗಿನ ಕೆಲವರ ರಾಜಿ ರಾಜಕಾರಣ ಫಲವಾಗಿ ಬಿಜೆಪಿ ಅಧಿಕಾರ ಕಳೆದುಕೊಳ್ಳುವಂತಾಯ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಹೆಸರು ಹೇಳಲಿಚ್ಚಿಸದ ಕೆಲ ಮುಖಂಡರ ವಿರುದ್ದ ವಾಗ್ದಾಳಿ ನಡೆಸಿದರು.

ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ. ಅವರುಗಳು ಅಂತಹ ನಡೆ ಇಡದಿದ್ದಿದ್ದರೆ ನಾವಿಂದು ವಿಪಕ್ಷದಲ್ಲಿ ಕೂರಬೇಕಾಗಿರಲಿಲ್ಲ ಎಂದರು.

ಮತ್ತೊಂದೆಡೆ ಇದೇ ರೀತಿಯ ಅಭಿಪ್ರಾಯವನ್ನು ವಲಸೆ ಬಿಜೆಪಿಗೆ, ಮಾಜಿ ಸಚಿವ ಎಂ ಟಿ ಬಿ ನಾಗರಾಜ್ ಕೂಡ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಸುಧಾಕರ್‌ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕೊಟ್ಟಿದ್ದರಿಂದ ನನ್ನನ್ನೂ ಒಳಗೊಂಡಂತೆ ಕೆಲವರ ಸೋಲಿಗೆ ಕಾರಣವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ನಲ್ಲಿದ್ದಾಗ ನಾನು ಮೂರು ಬಾರಿ ಗೆದ್ದಿದ್ದೇನೆ. ಬಿಜೆಪಿ ಸೇರಿ ಎರಡು ಬಾರಿ ಸ್ಪರ್ಧಿಸಿ ಎರಡೂ ಬಾರಿಯೂ ಸೋತಿದ್ದೇನೆ. ಸುಧಾಕರ್ ಚುನಾವಣೆಯಲ್ಲಿ ತಾನೂ ಸೋತ, ನಮ್ಮನ್ನೂ ಸೋಲಿಸಿದ. ಉಸ್ತುವಾರಿ ಸಚಿವ ಸ್ಥಾನವನ್ನು ಸುಧಾಕರ್ ಸರಿಯಾಗಿ ನಿಭಾಯಿಸಿಲ್ಲ.

ಈ ಸುದ್ದಿ ಓದಿದ್ದೀರಾ?:ಕುಡಿಯುವ ನೀರಿನ ಸಮಸ್ಯೆ; ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ಆತ ಎಂದೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಕಿವಿ ಮೇಲೆ ಹಾಕಿಕೊಳ್ಳುತ್ತಿರಲಿಲ್ಲ, ಹೀಗಾಗಿ ಆತನಿಂದಲೇ ನಾನು ಮತ್ತು ಚಿಂತಾಮಣಿ ಅಭ್ಯರ್ಥಿ ಸೋಲುವಂತಾಯ್ತು. ಇದಕ್ಕೆ ಸುಧಾಕರ್ ಕಾರಣ ಎಂದು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...