ತಾಂತ್ರಿಕತೆ ಆಧಾರಿತ ಅನ್ವೇಷಣೆಯಲ್ಲಿ ನಮ್ಮ ರಾಜ್ಯ ಎಂದಿಗೂ ಮುಂಚೂಣಿಯಲ್ಲಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ಕರ್ನಾಟಕ ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಗಳಿಗೆ ಮಾತ್ರವಲ್ಲದೆ ಶೈಕ್ಷಣಿಕ ಮತ್ತು ಸಂಶೋಧನೆ ಚಟುವಟಿಕೆಗಳಿಗೆ ಭದ್ರ ತಳಹದಿಯನ್ನು ಕಲ್ಪಿಸುವ ಕಾರ್ಯದಲ್ಲಿ ಹೆಸರುವಾಸಿಯಾಗಿದೆ. ತಾಂತ್ರಿಕತೆ ಆಧಾರಿತ ಅನ್ವೇಷಣೆ ಕ್ಷೇತ್ರದಲ್ಲಿ ನಮ್ಮ ರಾಜ್ಯ ಎಂದಿಗೂ ಮುಂಚೂಣಿಯಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ದೇಶದ ಪ್ರತಿಷ್ಠಿತ ಮತ್ತು ಅತಿದೊಡ್ಡ ನ್ಯಾನೋ ಸಮ್ಮೇಳನವಾದ ʻಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನʼವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

“ಐಐಎಸ್ಸಿ, ಜೆಎನ್‌ಸಿಎಎಸ್‌ಆರ್‌, ಎನ್‌ಸಿಬಿಎಸ್‌, ಸಿಇಎನ್‌ಎಸ್ ನಂತಹ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ನೆರವಿನೊಂದಿಗೆ, ಬೆಂಗಳೂರು ದೇಶದ ನ್ಯಾನೋ ಟೆಕ್‌ ಹಬ್‌ ಆಗಿ ರೂಪುಗೊಳ್ಳುವ ಪೂರ್ಣ ವಿಶ್ವಾಸ ನನಗಿದೆ. ಮುಂಬರುವ ವರ್ಷಗಳಲ್ಲಿ ಬೆಂಗಳೂರು ಈ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಲಿದೆ” ಎಂದು ಹೇಳಿದರು.

Advertisements

“ಆಹಾರ ಭದ್ರತೆ, ಇಂಧನ ಸುರಕ್ಷತೆ, ಶುದ್ಧ ಜಲ, ಮೂಲಸೌಕರ್ಯ, ಆರೋಗ್ಯ ಸೇವೆ, ಮೆಡಿಸಿನ್‌, ತ್ಯಾಜ್ಯವಸ್ತುಗಳ ನಿರ್ವಹಣೆ, ಪರಿಸರ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ಎದುರಾಗುವ ಸವಾಲುಗಳಿಗೆ ವಿನೂತನ ನ್ಯಾನೋ ಟೆಕ್ನಾಲಜಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ. ಹೆಚ್ಚುತ್ತಿರುವ ನಗರೀಕರಣ, ಜನಸಂಖ್ಯೆ ಹೆಚ್ಚಳ ಹಾಗೂ ಬದಲಾಗುತ್ತಿರುವ ಜೀವನ ಶೈಲಿಯಿಂದ ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿದ್ದು ಇವುಗಳಿಗೆ ನ್ಯಾನೋ ಟೆಕ್ನಾಲಜಿ ಆಧಾರಿತ ಪರಿಹಾರಗಳನ್ನು ಸಂಶೋಧಿಸಲು ನಾನು ವಿಜ್ಞಾನಿಗಳಿಗೆ ಮತ್ತು ಇಂಜಿನಿಯರ್‌ಗಳನ್ನು ಕೇಳಿಕೊಳ್ಳುತ್ತೇನೆ” ಎಂದರು.

“ರಾಜ್ಯದಲ್ಲಿ ನಡೆಯುವ ಇಂತಹ ವಿಜ್ಞಾನ ಮತ್ತು ತಂತ್ರಜ್ಞಾನ ಸಮಾವೇಶದಲ್ಲಿ ಭಾಗವಹಿಸುವುದು ನನಗೆ ಯಾವತ್ತೂ ಸ್ಪೂರ್ತಿದಾಯಕ ಹಾಗೂ ಸಂತಸದ ವಿಚಾರ. ಪ್ರತಿಷ್ಠಿತ ಪ್ರೊ.ಸಿ.ಎನ್.ಆರ್.‌ ರಾವ್‌ ಬೆಂಗಳೂರು ಇಂಡಿಯಾ ನ್ಯಾನೋ ಸೈನ್ಸ್‌ ಪ್ರಶಸ್ತಿಗೆ ಭಾಜನರಾಗಿರುವ ಪ್ರೊ.ಅರಿಂದಮ್‌ ಘೋಷ್‌ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಹೇಳಿದರು.

“ಯುವ ಉದ್ಯಮಿಗಳು ಈ ಕ್ಷೇತ್ರದ ತಜ್ಞರ ಮತ್ತು ದಿಗ್ಗಜರ ಸಹಕಾರ ಮತ್ತು ಸಹಭಾಗಿತ್ವದ ಸದುಪಯೋಗವನ್ನು ಪಡೆದುಕೊಂಡು ನಮ್ಮ ರಾಜ್ಯದಲ್ಲಿ ಹೊಸ ಉದ್ಯಮಗಳನ್ನು ಆರಂಭಿಸಲು ನಾನು ಆಹ್ವಾನಿಸುತ್ತೇನೆ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಈ ವಿನೂತನ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲು ಸಾಧ್ಯವಿರುವ ಸಂಪೂರ್ಣ ಸಹಕಾರವನ್ನು ನಮ್ಮ ಸರ್ಕಾರ ಒದಗಿಸಲಿದೆ. ಈ ಸಮಾವೇಶವನ್ನು 2007ರಿಂದ ನಿರಂತರವಾಗಿ ಆಯೋಜಿಸಿಕೊಂಡು ಬರಲು ಮಾರ್ಗದರ್ಶನ ನೀಡುತ್ತಿರುವ ಭಾರತ ರತ್ನ ಪ್ರೊ.ಸಿ.ಎನ್.ಆರ್.‌ ರಾವ್‌ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X