ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

Date:

Advertisements

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆಂದು ಭರವಸೆ ನೀಡಿದ್ದರು. ಆದರೆ, ಉದ್ಯೋಗಗಳನ್ನು ಎಲ್ಲಿ ಸೃಷ್ಟಿಸಿದ್ದೀರಿ ಎಂದು ಹೇಳಿದರೆ, ಪಕೋಡಾ ಮಾರುವುದು ಉದ್ಯೋಗವೇ ಎಂದು ಹೇಳಿ, ಯುವಜನರನ್ನು ಕಡೆಗಣಿಸುವ ಮಾತನಾಡಿದ್ದಾರೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಸಂಚಾಲಕ ಸರೋವರ್ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೆವಿಎಸ್‌ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ದೇಶಪ್ರೇಮಿ ಯುವಜನರ ಸಮಾವೇಶ’ವನ್ನು ಮೋದಿ ಹೇಳಿದ್ದ ‘ಪಕೋಡಾ’ ಪ್ರದರ್ಶಿಸುವ ಮೂಲಕ ಬಹುಭಾಷಾ ನಟ ಪ್ರಕಾಶ್ ರಾಜ್ ಉದ್ಘಾಟಿಸಿದರು.

ಉದ್ಘಾಟನೆ ವೇಳೆ ಮಾತನಾಡಿದ ಸರೋವರ್, “ಯುವಜನರಿಗೆ ಉದ್ಯೋಗ ಎಲ್ಲಿ ಅಂತ ಹೇಳಿದರೆ, ಪಕೋಡಾ ಮಾರುವುದು ಉದ್ಯೋಗವೆಂದು ಮೋದಿ ಹೇಳಿದ್ದಾರೆ. ಪಕೋಡಾ ಮಾರುವುದು ಅವಮಾನವಲ್ಲ. ಆದರೆ, ಪಕೋಡಾ ಮಾರಲು ಕೇಂದ್ರ ಸರ್ಕಾರ ಯಾವ ಯೋಜನೆಯನ್ನೂ ಕೊಟ್ಟಿಲ್ಲ. ಪಕೊಡಾ ಮಾರಿಯೇ ಜೀವನ ನಡೆಸೋಣ ಎಂದರೆ, ಅಡುಗೆ ಅನಿಲ, ಅಡುಗೆ ಎಣ್ಣೆಯ ಬೆಲೆಯನ್ನೂ ಪ್ರಧಾನಿ ಮೋದಿ ಸರ್ಕಾರ ಏರಿಸಿದೆ. ಪಕೋಡಾ ಮಾರುವುದೂ ಕಷ್ಟವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆಂದು 2014ರ ಚುನಾವಣೆಯಲ್ಲಿ ಹೇಳಿದ್ದರು. ಈಗ ಅವರು ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. 10 ವರ್ಷದಲ್ಲಿ ಸೃಷ್ಟಿಯಾಗಬೇಕಿದ್ದ 20 ಕೋಟಿ ಉದ್ಯೋಗಗಳು ಎಲ್ಲಿವೆ. ಆ 20 ಕೋಟಿ ಉದ್ಯೋಗಗಳು ನಮ್ಮ ಕಣ್ಣಿಗೆ ಕಾಣುತ್ತಿಲ್ಲ ಯಾಕೆ” ಎಂದು ಸರೋವರ್ ಪ್ರಶ್ನಿಸಿದರು.

“ಪದವಿ, ಸ್ನಾತಕೋತ್ತರ ಪದವಿ, ಡಿಪ್ಲಮಾ, ಎಂಜಿನಿಯರಿಂಗ್, ಎಂಬಿಬಿಎಸ್‌ ಸೇರಿದಂತೆ ನಾನಾ ವೃತ್ತಿಪರ ಕೋರ್ಸ್‌ಗಳಲ್ಲಿ ಶಿಕ್ಷಣ ಪಡೆದ ನಮಗೆ ಮೋದಿ ಅವರು ಪಕೋಡಾ ಮಾರಲು ಹೇಳಿದ್ದೇಕೆ? ಸರ್ಕಾರ ಯುವಜನರಿಗೆ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮೋದಿ ಆಡಳಿತದಲ್ಲಿ 60 ಲಕ್ಷ ಸರ್ಕಾರ ಹುದ್ದೆಗಳು ಖಾಲಿ ಉಳಿದಿವೆ. ಅವುಗಳನ್ನು ಭರ್ತಿ ಮಾಡಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ದೇಶದಲ್ಲಿ 3.8 ಕೋಟಿ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿ ಆಡಳಿತದಲ್ಲಿ ಕಳೆದ 45 ವರ್ಷಗಳಲ್ಲಿಯೂ ಕಂಡರಿಯದಷ್ಟು ಪ್ರಮಾಣದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಯುವಜನರಿಗೆ ಉದ್ಯೋಗ ನೀಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X