ಓ ನಲ್ಲ…ನೀನಲ್ಲ… ಚಿಕ್ಕಬಳ್ಳಾಪುರ ಲೋಕಸಭೆಗೆ ನೀ ಲಾಯಕ್ಕಿಲ್ಲ : ಸುಧಾಕರ್‌ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

Date:

ಮಾಜಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿರುವ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಸುಧಾಕರ್‌ ವಿರುದ್ಧ ಗೋ ಬ್ಯಾಕ್‌ ಅಭಿಯಾನ ಜೋರಾಗಿ ನಡೆಯುತ್ತಿದೆ.

ಸುಧಾಕರ್‌ ವಿರುದ್ಧ ಬಿಜೆಪಿ ಕಾರ್ಯಕರ್ತರು ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ. ಹಳೆ ಯಲಹಂಕ ಸಂತೆ ವೃತ್ತದ ಕೆಂಪೇಗೌಡ ಪ್ರತಿಮೆ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ‘ಗೋಬ್ಯಾಕ್‌ ಸುಧಾಕರ್‌’ ಎಂದು ಘೋಷಣೆ ಕೂಗಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್‌ ಅನ್ನು ಸಿದ್ದರಾಮಯ್ಯ ಅವರು ಮಂಡಿಸುವಾಗ, “ಏನಿಲ್ಲ, ಏನಿಲ್ಲ, ಬಜೆಟ್‌ನಲ್ಲಿ ಏನಿಲ್ಲ..” ಎಂದು ರೀಲ್ಸ್‌ವೊಂದರ ಹಾಡನ್ನು ಜೋಡಿಸಿ ಬಿಜೆಪಿಯವರು ಬಜೆಟ್‌ ವಿರೋಧಿಸಿದ್ದರು. ಇದೇ ಹಾಡನ್ನೇ ಬಿಜೆಪಿ ಕಾರ್ಯಕರ್ತರು ಸುಧಾಕರ್‌ ಮೇಲೆ ಹಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಓ ನಲ್ಲ, ನೀನಲ್ಲ, ಚಿಕ್ಕಬಳ್ಳಾಪುರ ಲೋಕಸಭೆಗೆ ನೀ ಲಾಯಕ್ಕಿಲ್ಲ..” ಎಂದು ರೀಲ್ಸ್ ದಾಟಿಯಲ್ಲಿ‌ ಬಿಜೆಪಿ ಕಾರ್ಯಕರ್ತರು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಲಹಂಕ ಶಾಸಕ ಎಸ್‌ಆರ್‌ ವಿಶ್ವನಾಥ್‌ ಪುತ್ರ ಅಲೋಕ್‌ ವಿಶ್ವನಾಥ್‌ ಚಿಕ್ಕಬಳ್ಳಾಪುರ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕೊನೆ ಕ್ಷಣದಲ್ಲಿ ಎಸ್‌ ಆರ್‌ ವಿಶ್ವನಾಥ್‌ ಅವರೇ ನಾನು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಚಿಕ್ಕಬಳ್ಳಾಪುರದಲ್ಲಿ ಪ್ರದೀಪ್‌ ಈಶ್ವರ್‌ ವಿರುದ್ಧ ಸೋಲು ಕಂಡಿದ್ದ ಡಾ ಕೆ ಸುಧಾಕರ್‌ ಅವರಿಗೆ ಟಿಕೆಟ್‌ ನೀಡಿದೆ. ಹೈಕಮಾಂಡ್‌ನ ಈ ನಿರ್ಧಾರದ ವಿರುದ್ಧ ಇದೀಗ ಬಿಜೆಪಿ ಕಾರ್ಯಕರ್ತರೇ ತಿರುಗಿಬಿದ್ದಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...