ಮಹಾರಾಷ್ಟ್ರದ ‘ಲಡ್ಕಿ ಬಹಿನ್’ ಯೋಜನೆಯಡಿ ಹಣ ಪಡೆದ 14,000ಕ್ಕೂ ಹೆಚ್ಚು ಪುರುಷರು!

Date:

ಮಹಾರಾಷ್ಟ್ರದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗಾಗಿ ಜಾರಿ ಮಾಡಲಾಗಿರುವ ‘ಲಡ್ಕಿ ಬಹಿನ್’ ಯೋಜನೆಯಡಿ ಸುಮಾರು 14,000ಕ್ಕೂ ಅಧಿಕ ಪುರುಷರು ಹಣವನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ವಂಚನೆಯಿಂದ ದಾಖಲೆ ಬದಲಾಯಿಸಿಕೊಂಡು ಯೋಜನೆಯ ಫಲಾನುಭವಿಗಳಾದ ಪುರುಷರು ಈವರೆಗೆ ಒಟ್ಟಾಗಿ 21.44 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ.

- Advertisement -

ಕಳೆದ ವರ್ಷ ವಾರ್ಷಿಕವಾಗಿ ರೂ. 2.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳ 21ರಿಂದ 65 ವರ್ಷ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1,500 ರೂಪಾಯಿ ನೀಡುವ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ‘ಗ್ಯಾರಂಟಿ ಯೋಜನೆ’ಗಳು ಚುನಾವಣಾ ಸಮಯದಲ್ಲಷ್ಟೇ ಗ್ಯಾರಂಟಿ!

ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಡಬ್ಲ್ಯೂಸಿಡಿ) ನಡೆಸಿದ ಲೆಕ್ಕಪರಿಶೋಧನೆ ವೇಳೆ ಆನ್‌ಲೈನ್ ನೋಂದಣಿ ವ್ಯವಸ್ಥೆಯನ್ನು ತಪ್ಪಾಗಿ ಬಳಸಿಕೊಂಡು 14,298 ಪುರುಷರು ತಮ್ಮನ್ನು ಮಹಿಳಾ ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ, ಹತ್ತು ತಿಂಗಳಿನಿಂದ ಹಣ ಪಡೆದಿದ್ದಾರೆ ಎಂಬುದು ಬಹಿರಂಗವಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಅಜಿತ್ ಪವಾರ್, “ಲಡ್ಕಿ ಬಹಿನ್ ಯೋಜನೆಯನ್ನು ಬಡ ಮಹಿಳೆಯರಿಗೆ ಸಹಾಯ ಮಾಡಲು ಪ್ರಾರಂಭಿಸಲಾಗಿದೆ. ಪುರುಷರು ಅದರ ಫಲಾನುಭವಿಗಳಾಗಿರಬಾರದು. ಅವರಿಗೆ ನೀಡಲಾದ ಹಣವನ್ನು ನಾವು ಮರುಪಡೆಯುತ್ತೇವೆ. ಅವರು ಸಹಕರಿಸದಿದ್ದರೆ, ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನು ಫಲಾನುಭವಿಗಳ ಪಟ್ಟಿಯಲ್ಲಿ ಪುರುಷರು ಇರುವುದು ಒಂದು ಸಮಸ್ಯೆಯಾದರೆ, ಇನ್ನೊಂದೆಡೆ ಭಾರೀ ಪ್ರಮಾಣದ ಅನರ್ಹ ದಾಖಲಾತಿಗಳಿಂದಾಗಿ ಈ ಯೋಜನೆಯು ತನ್ನ ಮೊದಲ ವರ್ಷದಲ್ಲಿ 1,640 ಕೋಟಿ ರೂ.ಗಳ ನಷ್ಟವನ್ನುಂಟುಮಾಡಿದೆ ಎಂದು ಅಂದಾಜಿಸಲಾಗಿದೆ.

ಮನೆಯ ಓರ್ವ ಮಹಿಳೆಗೆ ಮಾತ್ರ ಈ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಆದರೆ ಒಂದೇ ಕುಟುಂಬದಿಂದ ಮೂವರು ಸದಸ್ಯರಾಗಿರುವುದೂ ಇದೆ. ಈ ರೀತಿ 7.97 ಲಕ್ಷಕ್ಕೂ ಹೆಚ್ಚು ಮಹಿಳೆಯರು ಯೋಜನೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇದರಿಂದಾಗಿ 1,196 ಕೋಟಿ ರೂಪಾಯಿ ವೆಚ್ಚವಾಗಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಚುನಾವಣಾ ಕಾರ್ಯಯೋಜನೆ ಚರ್ಚೆಗೆ ಮಹಾರಾಷ್ಟ್ರದ ಅಘಾಡಿ ಮೈತ್ರಿ ಕೂಟ ಸಭೆ

ಮತ್ತೊಂದೆಡೆ ಅರ್ಹತೆಗಾಗಿ ವಯಸ್ಸಿನ ಮಿತಿಯನ್ನು 65 ವರ್ಷಕ್ಕೆ ನಿಗದಿಪಡಿಸಿದ್ದರೂ ಸಹ, 65 ವರ್ಷಕ್ಕಿಂತ ಮೇಲ್ಪಟ್ಟ 2.87 ಲಕ್ಷ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರಿಂದಾಗಿ ಸುಮಾರು 431.7 ಕೋಟಿ ರೂಪಾಯಿ ನಷ್ಟವಾಗಿದೆ. ಇದಲ್ಲದೆ ನಾಲ್ಕು ಚಕ್ರ ವಾಹನಗಳನ್ನು ಹೊಂದಿರುವ ಮನೆಗಳ 1.62 ಲಕ್ಷ ಮಹಿಳೆಯರು ಸಹ ಫಲಾನುಭವಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸಂಶೋಧನೆಗಳು ಟೀಕೆಗಳನ್ನು ಹುಟ್ಟುಹಾಕಿವೆ ಮತ್ತು ವ್ಯಾಪಕ ತನಿಖೆಗೆ ಬೇಡಿಕೆ ಕೆಳಿಬಂದಿದೆ. “ಈ ಪುರುಷರು ಫಾರ್ಮ್‌ಗಳನ್ನು ಹೇಗೆ ಭರ್ತಿ ಮಾಡಿದರು? ಅವರಿಗೆ ಯಾರು ಸಹಾಯ ಮಾಡಿದರು? ನೋಂದಣಿಗಾಗಿ ಯಾವ ಕಂಪನಿ ಜೊತೆ ಒಪ್ಪಂದ ಮಾಡಲಾಗಿದೆ? ಇದರ ಹಿಂದೆ ದೊಡ್ಡ ಪಿತೂರಿ ಇದೆ. ಕಂಪನಿಯ ಬಗ್ಗೆ ತನಿಖೆ ನಡೆಸಬೇಕು ಮತ್ತು ಈ ವಿಷಯವನ್ನು ಎಸ್‌ಐಟಿ ಅಥವಾ ಇಡಿ ತನಿಖೆ ನಡೆಸಬೇಕು” ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...