ಮಣಿಪುರ | ಸರ್ಕಾರ ರಚನೆ ತಯಾರಿ: ದೆಹಲಿಗೆ ದೌಡಾಯಿಸಿದ 20ಕ್ಕೂ ಅಧಿಕ ಬಿಜೆಪಿ ಶಾಸಕರು

Date:

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸದ್ಯ ರಾಷ್ಟ್ರಪತಿ ಆಡಳಿತವಿದ್ದು, ಮತ್ತೆ ಸರ್ಕಾರ ರಚನೆ ಮಾಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಈ ನಡುವೆ ಮಣಿಪುರದ 20ಕ್ಕೂ ಅಧಿಕ ಬಿಜೆಪಿ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ. “ಎಲ್ಲಾ ಎನ್‌ಡಿಎ ಶಾಸಕರನ್ನು ಕರೆಯಲಾಗಿದೆ. ಜನಪ್ರಿಯ ಸರ್ಕಾರ ರಚನೆಯಾಗುತ್ತದೆ ಎಂದು ನಾವು ಆಶಿಸುತ್ತೇವೆ” ಎಂದು ತಿಳಿಸಿದ್ದಾರೆ.

- Advertisement -

ಮಾಜಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮಾತನಾಡಿ, “ಎನ್‌ಡಿಎ ಎಲ್ಲಾ ಶಾಸಕರನ್ನು ಸಭೆಗೆ ಆಹ್ವಾನಿಸಲಾಗುತ್ತಿರುವುದರಿಂದ, ನಾನು ಸರ್ಕಾರ ರಚನೆಯ ನಿರೀಕ್ಷೆಯಲ್ಲಿದ್ದೇನೆ. ಇದಕ್ಕೂ ಮೊದಲು, ಎಲ್ಲಾ ಬಿಜೆಪಿ ಶಾಸಕರ ಸಭೆ ನಡೆದಿತ್ತು. ರಾಷ್ಟ್ರಪತಿ ಆಳ್ವಿಕೆಯ ಅವಧಿ ಫೆಬ್ರವರಿ 12 ರಂದು ಕೊನೆಗೊಳ್ಳಲಿದೆ. ಸಕಾರಾತ್ಮಕ ಪ್ರತಿಕ್ರಿಯೆಗಾಗಿ ಆಶಿಸೋಣ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಇದನ್ನು ಓದಿದ್ದೀರಾ? ಮಣಿಪುರದಲ್ಲಿ ಮಕಾಡೆ ಮಲಗಿದ ಬಿಜೆಪಿ

“ಸರ್ಕಾರ ನಿರಂತರ ಪ್ರಕ್ರಿಯೆ. ಮಣಿಪುರದಲ್ಲಿ ಬದಲಾವಣೆಯನ್ನು ತರಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದೆ. ಸದ್ಯ ಸಾಕಷ್ಟು ಬದಲಾವಣೆಗಳಾಗಿವೆ” ಎಂದೂ ತಿಳಿಸಿದ್ದಾರೆ.

ಇನ್ನು ಲಾಮ್ಸಾಂಗ್ ಕ್ಷೇತ್ರದ ಶಾಸಕ ಎಸ್. ರಾಜೇನ್ ಸಿಂಗ್ ಮಾತನಾಡಿ, “ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ಆದರೂ ಕೇಂದ್ರ ನಾಯಕತ್ವವು ರಾಜ್ಯದ ಪರಿಸ್ಥಿತಿಯನ್ನು ಗಮನಿಸಿದ ನಂತರ ಸಿಎಂ ಆಯ್ಕೆ ಮಾಡಲಿದೆ. ಸಭೆ ಸೋಮವಾರ ಸಂಜೆ ನಡೆಯುವ ಸಾಧ್ಯತೆಯಿದೆ” ಎಂದಿದ್ದಾರೆ.

ಇನ್ನು ಶಾಸಕ ಎಚ್. ಡಿಂಗೊ, “ಸಭೆ ಸೋಮವಾರ ಸಂಜೆ. ಆದರೆ ಸಭೆಯ ಕಾರ್ಯಸೂಚಿಯನ್ನು ಘೋಷಿಸಲಾಗಿಲ್ಲ. ಇಂದೇ ದೆಹಲಿಗೆ ತಲುಪಲು ನಮಗೆ ಹೇಳಲಾಗಿತ್ತು” ಎಂದು ಹೇಳಿದ್ದಾರೆ. ಆದರೆ ಖುರೈ ಕ್ಷೇತ್ರದ ಶಾಸಕ ಎಲ್. ಸುಸಿಂದ್ರೊ ದೆಹಲಿ ಸಭೆಯ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಹೇಳಿಕೊಂಡಿದ್ದಾರೆ.

2023ರ ಮೇ ತಿಂಗಳಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಗುಂಪುಗಳ ನಡುವೆ ಜನಾಂಗೀಯ ಹಿಂಸಾಚಾರ ನಡೆದಿದ್ದು, 260ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಎನ್ ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಳೆದ ವರ್ಷ ಫೆಬ್ರವರಿ 13ರಿಂದ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವಿದೆ.

ವಿಧಾನಸಭೆಯ ಅಧಿಕಾರಾವಧಿ 2027ರವರೆಗೆ ಇದ್ದು, ಇನ್ನೂ ಸರ್ಕಾರ ರಚಿಸುವ ಸಮಯವಿದೆ. 60 ಸದಸ್ಯರ ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿ 37 ಶಾಸಕರನ್ನು ಹೊಂದಿದೆ. ಮಣಿಪುರದಲ್ಲಿ ಎನ್‌ಡಿಎ ಭಾಗವಾಗಿರುವ ಎನ್‌ಪಿಪಿ ಮತ್ತು ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಕ್ರಮವಾಗಿ ಆರು ಮತ್ತು ಐದು ಶಾಸಕರನ್ನು ಹೊಂದಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...