ಮನ್‌ರೇಗಾದಲ್ಲಿದ್ದ 7.43 ಲಕ್ಷಕ್ಕೂ ಹೆಚ್ಚು ನಕಲಿ ಉದ್ಯೋಗ ಕಾರ್ಡ್‌ ‘ಡಿಲೀಟ್’: ಉತ್ತರ ಪ್ರದೇಶದಲ್ಲೇ ಅಧಿಕ!

Date:

2022-23ರ ಆರ್ಥಿಕ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅಡಿಯಲ್ಲಿ 7.43 ಲಕ್ಷಕ್ಕೂ ಹೆಚ್ಚು ನಕಲಿ ಉದ್ಯೋಗ ಕಾರ್ಡ್‌ಗಳನ್ನು ಡಿಲೀಟ್ ಮಾಡಲಾಗಿದೆ. ಇದರಲ್ಲಿ 2.96 ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳನ್ನು ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ರದ್ದುಗೊಳಿಸಲಾಗಿದೆ ಎಂಬ ಅಚ್ಚರಿಯ ಮಾಹಿತಿಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿಳಿಸಿದೆ.

ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿ ಈ ವಿವರಗಳನ್ನು ಹಂಚಿಕೊಂಡಿದ್ದಾರೆ.

ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ಬಾರಿ ನಕಲಿ ಉದ್ಯೋಗ ಕಾರ್ಡ್‌ಗಳನ್ನು ತೆಗೆದು ಹಾಕುವಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ. 2021-22 ರಲ್ಲಿ 3,06,944 ನಕಲಿ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗಿತ್ತು. ಆದರೆ ಈ ಬಾರಿ ಅದರ ಸಂಖ್ಯೆ 7,43,457 ಕ್ಕೆ ಏರಿಕೆಯಾಗಿದೆ ಎಂದು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಒದಗಿಸಿರುವ ವಿವರದಲ್ಲಿ, ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ 2,96,464 ನಕಲಿ ಉದ್ಯೋಗ ಕಾರ್ಡ್‌ಗಳನ್ನು ಅಳಿಸುವ ಮೂಲಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಒಡಿಶಾದಲ್ಲಿ 1,14,333 ನಕಲಿ ಉದ್ಯೋಗ ಕಾರ್ಡ್ ಅಳಿಸುವ ಮೂಲಕ ನಂತರದ ಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ.

ಜಾಬ್‌ ಕಾರ್ಡ್‌ಗಳನ್ನು ಅಳಿಸುವುದು ಮತ್ತು ನವೀಕರಿಸುವುದು ನಿರಂತರ ಪ್ರಕ್ರಿಯೆ. ಕಾಯ್ದೆಯ ಸೆಕ್ಷನ್ 25ರ ಪ್ರಕಾರ, ನಿಬಂಧನೆಗಳನ್ನು ಉಲ್ಲಂಘಿಸಿದರೆ 1,000 ರೂ.ವರೆಗೆ ದಂಡ ವಿಧಿಸಬಹುದು. ಅಲ್ಲದೆ, ನಕಲಿ ಜಾಬ್ ಕಾರ್ಡ್ ವಿತರಣೆಯನ್ನು ತಡೆಯಲು ಫಲಾನುಭವಿಗಳ ಡೇಟಾಬೇಸ್‌ನ ನಕಲು ಮಾಡಲು ಆಧಾರ್ ಸೀಡಿಂಗ್ ಕಡ್ಡಾಯಗೊಳಿಸಲಾಗಿದೆ ಎಂದು ಸಚಿವೆ ಜ್ಯೋತಿ ಹೇಳಿದ್ದಾರೆ.

ಈ ಮಧ್ಯೆ, 2022-23ರಲ್ಲಿ 6,47,8345 ಹೊಸ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ಜ್ಯೋತಿ ಲೋಕಸಭೆಗೆ ಮತ್ತೊಂದು ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದರು.

2021-22ರಲ್ಲಿ 1,20,63,967 ಹೊಸ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ. ಆದರೆ, 2020-21ರಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಧಿಸಲಾಗಿತ್ತು. ಈ ವೇಳೆ 1,91,05,369 ಹೊಸ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉದ್ಯೋಗ ಕಾರ್ಡ್‌ಗಳನ್ನು ವಿವಿಧ ಕಾರಣಗಳಿಗಾಗಿ ಅಳಿಸಲಾಗುತ್ತದೆ. ಇವುಗಳು ನಕಲಿ ಎಂದು ತಿಳಿದಾಗ ಫಲಾನುಭವಿಯು ಪಂಚಾಯತ್ ಪ್ರದೇಶದಿಂದ ಹೊರಬಂದಾಗ ಮರಣ ಹೊಂದಿದಾಗ ಜಾಬ್‌ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುತ್ತದೆ.

ಮುಂಗಾರು ಅಧಿವೇಶನದ ವೇಳೆ ಲೋಕಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ನೀಡಿದ ಉತ್ತರದಂತೆ, 2022- 23ರಲ್ಲಿ 5.18 ಕೋಟಿ ಉದ್ಯೋಗಿಗಳನ್ನು ಒಳಗೊಂಡ ಜಾಬ್‌ ಕಾರ್ಡ್‌ಗಳನ್ನು ಅಳಿಸಲಾಗಿದೆ. ಇದು 2021-22ಕ್ಕೆ ಹೋಲಿಸಿದರೆ ಶೇಕಡಾ 247.06ರಷ್ಟು ಹೆಚ್ಚು ಎಂದು ತಿಳಿದುಬಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...

ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ಠಾಣೆಗೆ ಶಾಮಿಯಾನ ಹಾಕಿ ನಟ ದರ್ಶನ್‌ಗೆ ರಕ್ಷಣೆಯೇ: ಶೋಭಾ ಕರಂದ್ಲಾಜೆ ಪ್ರಶ್ನೆ

ಕೊಲೆ ಪ್ರಕರಣದಲ್ಲಿ ನಟ ದರ್ಶನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ...