10 ವರ್ಷಗಳ ನಂತರ ಪಾಕ್ ಸಚಿವ ಭಾರತಕ್ಕೆ ಭೇಟಿ; ಜೈಶಂಕರ್‌ ಆಹ್ವಾನ ಹಿನ್ನೆಲೆ ಆಗಮನ

Date:

  • ಗೋವಾದಲ್ಲಿ ನಡೆಯುವ ವಿದೇಶಾಂಗ ಸಚಿವರ ಸಭೆಯಲ್ಲಿ ಭೇಟಿ
  • 2014 ರಲ್ಲಿ ನವಾಜ್ ಷರೀಫ್ ನಂತರ ಪಾಕ್‌ ನಾಯಕರು ಭಾರತಕ್ಕೆ ಭೇಟಿ ನೀಡಿರಲಿಲ್ಲ

ಗೋವಾದಲ್ಲಿ ನಡೆಯುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಪಾಕ್‌ನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಮುಂದಿನ ತಿಂಗಳು(ಮೇ) ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಲಾವಲ್ ಭುಟ್ಟೋ ಜರ್ದಾರಿ ಅವರು 2023, ಮೇ 4 ಮತ್ತು 5 ರಂದು ಭಾರತದ ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ಮುನ್ನಡೆಸಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಆಹ್ವಾನ ನೀಡಿದ್ದರಿಂದ ಪಾಕಿಸ್ತಾನದ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ತಿಳಿಸಿದ್ದಾರೆ.

“ಶಾಂಘೈ ಸಹಕಾರ ಸಂಘಟನೆಯ ಸಭೆಯಲ್ಲಿ ನಮ್ಮ ಭೇಟಿಯು ನಮ್ಮ ದೇಶದ ಹಕ್ಕುಗಳು ಮತ್ತು ಪ್ರಕ್ರಿಯೆಗಳಿಗೆ ಪಾಕಿಸ್ತಾನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಪಾಕಿಸ್ತಾನವು ತನ್ನ ವಿದೇಶಾಂಗ ನೀತಿಯ ಆದ್ಯತೆಗಳಲ್ಲಿ ಭೇಟಿ ನೀಡುವ ದೇಶಕ್ಕೆ ನೀಡುವ ಪ್ರಾಮುಖ್ಯತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಮುಮ್ತಾಜ್ ಜಹ್ರಾ ಬಲೋಚ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಎಫ್‌ಸಿಆರ್‌ಎ ಅಡಿ ಸಿಬಿಐ ಪ್ರಕರಣ

ಜರ್ದಾರಿ ಅವರ ಭಾರತ ಭೇಟಿಯು 2014 ರಲ್ಲಿ ನವಾಜ್ ಷರೀಫ್ ನಂತರ ಪಾಕಿಸ್ತಾನಿ ನಾಯಕರು ಆಗಮಿಸಿದ ಮೊದಲ ಭೇಟಿಯಾಗಿದೆ. ಶಾಂಘೈ ಸಹಕಾರ ಸಂಘಟನೆ ಒಂದು ಪ್ರಾದೇಶಿಕ ರಾಜಕೀಯ ಮತ್ತು ಭದ್ರತಾ ದೇಶಗಳ ಬಣವಾಗಿದ್ದು, ಈ ಸಂಘಟನೆಯ ಸದಸ್ಯರು ರಷ್ಯಾ, ಚೀನಾ, ಭಾರತ ಮತ್ತು ಪಾಕಿಸ್ತಾನವನ್ನು ಒಳಗೊಂಡಿದ್ದಾರೆ.

ಭಾರತವು ಜೂನ್ 9, 2017 ರಂದು ಎಸ್‌ಸಿಒದ ಪೂರ್ಣ ಸದಸ್ಯತ್ವವನ್ನು ಪಡೆದುಕೊಂಡಿದೆ. ಅಫ್ಘಾನಿಸ್ತಾನ್, ಬೆಲಾರಸ್, ಇರಾನ್ ಮತ್ತು ಮಂಗೋಲಿಯಾ ಎಂಬ ನಾಲ್ಕು ವೀಕ್ಷಕ ರಾಜ್ಯಗಳಿವೆ ಮತ್ತು ಅರ್ಮೇನಿಯಾ, ಅಜೆರ್ಬೈಜಾನ್, ಕಾಂಬೋಡಿಯಾ, ನೇಪಾಳ, ಶ್ರೀಲಂಕಾ ಮತ್ತು ಟರ್ಕಿ ದೇಶಗಳು ಸಂವಾದ ಪಾಲುದಾರರಾಗಿದ್ದಾರೆ. ಎಂಟು ಸದಸ್ಯರ ಶಾಂಘೈ ಸಹಕಾರ ಸಂಸ್ಥೆಯು ತನ್ನ ಸದಸ್ಯ ರಾಷ್ಟ್ರಗಳ ನಡುವೆ ಆರ್ಥಿಕ, ರಾಜಕೀಯ ಮತ್ತು ಮಿಲಿಟರಿ ಸಹಕಾರವನ್ನು ಉತ್ತೇಜಿಸುವ ಉದ್ದೇಶದಿಂದ ಎರಡು ದಶಕಗಳ ಹಿಂದೆ ಸ್ಥಾಪಿಸಲಾದ ಪ್ರಮುಖ ಪ್ರಾದೇಶಿಕ ಶಕ್ತಿ ಕೇಂದ್ರವಾಗಿದೆ. ಇದು ಪ್ರಪಂಚದ ಒಟ್ಟು ಜನಸಂಖ್ಯೆಯ ಸುಮಾರು ಶೇ. 42 ಮತ್ತು ಜಾಗತಿಕ ಜಿಡಿಪಿಯ ಶೇ 25 ರಷ್ಟನ್ನು ಪ್ರತಿನಿಧಿಸುತ್ತದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಆತ ನನ್ನ ಮಗನೇ ಇರಬಹುದು, ಆತನನ್ನು ಗಲ್ಲಿಗೇರಿಸಿ’: ಅತ್ಯಾಚಾರ ಆರೋಪಿಯ ತಂದೆ

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ವಿಶೇಷಚೇತನ ಯೋಧರ ಹೊಸ ಪಿಂಚಣಿ ಯೋಜನೆ; ಮೋದಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೊಮ್ಮೆ ಬಯಲು: ಖರ್ಗೆ

ಸಶಸ್ತ್ರ ಪಡೆ ಸಿಬ್ಬಂದಿಗೆ ಹೊಸ ವಿಶೇಷಚೇತನ ಪಿಂಚಣಿ ನಿಯಮಗಳ ಕುರಿತು ಶನಿವಾರ...