ಬೃಹತ್‌ ಸಮಾವೇಶದ ಮೂಲಕ ಪಂಚರತ್ನ ರಥಯಾತ್ರೆಗೆ ಇಂದು ತೆರೆ

Date:

  • ಯಾತ್ರೆಯಲ್ಲಿ ಎಚ್‌ಡಿಕೆ ಕೊರಳಿಗೆ ಬಿದ್ದ ಹಾರಗಳು ಗಿನ್ನಿಸ್ ದಾಖಲೆಗೆ
  • 10,000 ಕಿ.ಮೀ. ಸಂಚರಿಸಿದ ರಥಯಾತ್ರೆ, 55 ಲಕ್ಷ ಜನ ಭಾಗಿ

99 ದಿನಗಳ ಕಾಲ ಪಯಣಿಸಿರುವ ಜೆಡಿಎಸ್‌ನ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಇಂದು (ಮಾ.26) ಸಮಾರೋಪಗೊಳ್ಳುತ್ತಿದೆ.

ಮೈಸೂರಿನ ಉತ್ತನಹಳ್ಳಿ ರಿಂಗ್ ರಸ್ತೆಯ ನೂರು ಎಕರೆ ಪ್ರದೇಶದ ವಿಶಾಲ ಮೈದಾನದಲ್ಲಿ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಭಾಗಿಯಾಗಲಿದ್ದಾರೆ. ಪಂಚರತ್ನ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ಜೆಡಿಎಸ್‌ನ ಶಕ್ತಿ ಪ್ರದರ್ಶನವಾಗಲಿದೆ.

ಮೈಸೂರಿನ ಮಣಿ ಪಾಲ್ ಆಸ್ಪತ್ರೆ ಬಳಿಯ ರಿಂಗ್ ರಸ್ತೆಯಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮತ್ತು ಎಚ್ ಡಿ ಕುಮಾರಸ್ವಾಮಿ ರೋಡ್‌ ಶೋ ನಡೆಯಲಿದ್ದಾರೆ. 2022ರ ನವೆಂಬರ್ 18ರಂದು ಆರಂಭವಾಗಿದ್ದ ರಥಯಾತ್ರೆ 99ದಿನಗಳ ಬಳಿಕ ಇಂದು (ಮಾರ್ಚ್ 26) ಕೊನೆಗೊಳ್ಳುತ್ತಿದೆ. ರಥಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಸುಮಾರು ಹತ್ತು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಪಕ್ಷ ಹೇಳಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ‘ಗೋ ಬ್ಯಾಕ್‌’ ಪ್ರತಿಭಟನೆ ಬಿಸಿ; ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಸೋಮಣ್ಣ

ಪಂಚರತ್ನ ರಥಯಾತ್ರೆಯ ವಿಶೇಷತೆಗಳು

99 ದಿನಗಳನ್ನು ಪೂರೈಸಿದ ರಥಯಾತ್ರೆ, 88 ವಿಧಾನಸಭಾ ಕ್ಷೇತ್ರಗಳಲ್ಲಿ ಅವಿರತ ಸಂಚಾರ

10,000 ಕಿ.ಮೀ. ಸಂಚರಿಸಿದ ರಥಯಾತ್ರೆ, 55 ಲಕ್ಷಕ್ಕೂ ಹೆಚ್ಚು ಜನರ ನೇರ ಭಾಗಿ

3 ಕೋಟಿಗೂ ಅಧಿಕ ಜನರಿಗೆ ಸಾಮಾಜಿಕ ಜಾಲತಾಣದ ಮೂಲಕ ತಲುಪಿದ ರಥಯಾತ್ರೆ

ರಥಯಾತ್ರೆಯ ಮೂಲಕ 5,500ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ಕೊಟ್ಟ ಕುಮಾರಸ್ವಾಮಿ

ಕೃಷಿ ಬೇಳೆಗಳಿಂದಲೇ ತಯಾರಾಗಿದ್ದ ಸಾವಿರಾರು ಬೃಹತ್ ಹಾರಗಳು ಎಚ್‌ಡಿಕೆ ಕೊರಳಿಗೆ

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಸೇರಿದ ಹಾರಗಳು

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು,...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪ್ರಜಾಪ್ರಭುತ್ವ, ಜಾತ್ಯತೀತತೆ ಹಾಗೂ ಮಾನವ ಹಕ್ಕುಗಳ ಉಳಿವಿಗಾಗಿ ಆಂದೋಲನಕ್ಕೆ ಕರೆ

ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಕರೆ ...

ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ...