ನರೇಗಾದಲ್ಲಿ ಪಂಚಾಯತ್ ರಾಜ್ ಇಲಾಖೆ ದೇಶದಲ್ಲಿ ನಂಬರ್ ಒನ್ ಸ್ಥಾನ ಪಡೆದಿದೆ : ಸಿಎಂ ಬೊಮ್ಮಾಯಿ

Date:

Advertisements
  • ಗಾಂಧಿ ಗ್ರಾಮ ಪುರಸ್ಕಾರ, ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದ ಮುಖ್ಯಮಂತ್ರಿ
  • ‘ನರೇಗಾ ಅರ್ಥಪೂರ್ಣವಾಗಿ ಅನುಷ್ಠಾನಕ್ಕೆ ತರಲು ಕಾನೂನಿಗೆ ತಿದ್ದುಪಡಿ ತರಲಾಗುವುದು’

ನರೇಗಾದಲ್ಲಿ ಕರ್ನಾಟಕದ ಪಂಚಾಯತ್ ರಾಜ್ ಇಲಾಖೆ ಅತ್ಯುತ್ತಮ ಕೆಲಸ ಮಾಡಿದ್ದು ದೇಶದಲ್ಲಿಯೇ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಶುಕ್ರವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ 2019-2020, 2020-2021 ಹಾಗೂ 2021-2022ನೇ ಸಾಲಿನ ʼಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭʼ ಹಾಗೂ ಪಂಚತಂತ್ರ 2.0 ಬಾಪೂಜಿ ಸೇವಾ ಕೇಂದ್ರ ತಂತ್ರಾಂಶ ತೆರಿಗೆ ಸಂಗ್ರಹದ PoS ಉಪಕರಣಗಳ ಲೋಕಾರ್ಪಣೆ ಹಾಗೂ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

“ನರೇಗಾದಿಂದ ಸಾಕಷ್ಟು ಆಸ್ತಿ ನಿರ್ಮಾಣವಾಗಿದೆ. ಸಾಕಷ್ಟು ಜನರಿಗೆ ಕೆಲಸ ದೊರೆತಿದೆ. ಇದನ್ನು ಅರ್ಥಪೂರ್ಣವಾಗಿ ಅನುಷ್ಠಾನಕ್ಕೆ ತರಲು ಕಾನೂನಿನಲ್ಲಿ ಕೆಲವು ಬದಲಾವಣೆ ತರಬೇಕಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಶಾಲೆ, ಆಸ್ಪತ್ರೆಗಳಿಗೆ ನರೇಗಾ ಬಳಕೆ ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸಚಿವರ ಬಳಿ ಮಾತನಾಡಿದ್ದು, ಶೀಘ್ರದಲ್ಲಿಯೇ ಬದಲಾವಣೆ ನಿರೀಕ್ಷೆ ಮಾಡುತ್ತಿದ್ದೇವೆ” ಎಂದರು.

Advertisements

“ಪ್ರತಿ ಗ್ರಾಮ ಪಂಚಾಯಿತಿಗಳು ಆಸ್ತಿ ನಿರ್ವಹಣೆ ಮಾಡುವ ಸಲುವಾಗಿ ದುಪ್ಪಟ್ಟು ಅನುದಾನ ನೀಡಲಾಗುತ್ತಿದೆ. ರಾಜಕೀಯ ವಿಕೇಂದ್ರೀಕರಣದ ಜೊತೆಗೆ ಆರ್ಥಿಕ ವಿಕೇಂದ್ರೀಕರಣವನ್ನೂ ಮಾಡಲಾಗುತ್ತಿದೆ” ಎಂದರು.

“ಅಭಿವೃದ್ಧಿಗಾಗಿ ಜನ ಓಡಾಡುವಂತಾಗಬಾರದು. ಜನರಿದ್ದಲ್ಲಿ ಆಡಳಿತ, ಅಭಿವೃದ್ಧಿಯಾಗಬೇಕು. ಬಾಪೂಜಿ ಕೇಂದ್ರದ ತಂತ್ರಾಂಶಗಳ ಮೂಲಕ ಇನ್ನಷ್ಟು ವೇಗವಾಗಿ ಕೆಲಸಗಳನ್ನು ಮಾಡಲು ಅನುಕೂಲವಾಗಲಿದೆ. ಇದರ ಜೊತೆಗೆ ಸೇವಾ ಭತ್ಯೆಗಳನ್ನು ಒಂದು ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅಧ್ಯಕ್ಷರಿಗೆ ಆರು ಸಾವಿರ ದೊರೆಯುವಂತೆ ಮಾಡಲಾಗಿದೆ” ಎಂದು ಹೇಳಿದರು.

“ಗ್ರಾಮೀಣಾಭಿವೃದ್ಧಿ ಈ ದೇಶದ ಸಮಗ್ರ ಅಭಿವೃದ್ಧಿಯ ಮೂಲ. ಅಬ್ದುಲ್ ನಜೀರ್ ಸಾಬ್ ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಹರಿಕಾರರು. ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವಧಿಯಲ್ಲಿ 73ನೇ ತಿದ್ದುಪಡಿ ಮೂಲಕ ಪಂಚಾಯತ್ ರಾಜ್‌ ವ್ಯವಸ್ಥೆ ಜಾರಿಗೆ ತರಲಾಯಿತು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X