ಪಂಚಮಸಾಲಿ ಸಮುದಾಯ ಬಿಎಸ್‌ವೈ ಜೊತೆಗಿಲ್ಲ, ಅವರ ನಾಯಕತ್ವ ನಾವು ಒಪ್ಪಲ್ಲ: ಯತ್ನಾಳ್‌ ಕಿಡಿ

Date:

ಬಿ ಎಸ್​ ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಮುಳುಗಿ ಹೋಗುತ್ತೆ ಎಂದುಕೊಂಡಿರಬಹುದು. ನಾವಂತೂ ಯಡಿಯೂರಪ್ಪ ನಾಯಕತ್ವ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.

ವಿಜಯಪುರ ತಾಲೂಕಿನ ತೊರವಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಬಳಿಕ ಬಹಳ ದೊಡ್ಡ ಬದಲಾವಣೆಯಾಗುತ್ತದೆ. ಬದಲಾವಣೆಯಾಗಬೇಕೆಂಬ ಕೂಗು ಕರ್ನಾಟಕ ಬಿಜೆಪಿಯಲ್ಲಿ ಏಳುತ್ತೆ. ನಾಯಕರು, ಕಾರ್ಯಕರ್ತರ ಜತೆ ನಡೆದುಕೊಂಡ ರೀತಿ ಸರಿಯಿಲ್ಲ” ಎಂದರು.

“ಮೊದಲಿನಿಂದಲೂ ಬಿ ಎಸ್ ಯಡಿಯೂರಪ್ಪ ಜೊತೆಗೆ ಯಾವ ಸಮುದಾಯಗಳು ಇಲ್ಲ. ಪ್ರಮುಖವಾಗಿ ನಮ್ಮ ಪಂಚಮಸಾಲಿ ಸಮುದಾಯ ಜೊತೆಗಿಲ್ಲ. ನಮ್ಮ ಸಮುದಾಯಕ್ಕೆ ಬಿ ಎಸ್ ಯಡಿಯೂರಪ್ಪ ಮೋಸ ಮಾಡಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಅಡ್ಡಿ ಮಾಡಿದ್ದಾರೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಟಿಕೆಟ್ ಹಂಚಿಕೆಯಲ್ಲಿ ಭಿನ್ನಮತ ಅವರಿಂದಲೇ ಆಗುತ್ತಿದೆ. ತುಮಕೂರಿನಲ್ಲಿ ಬಿ.ಎಸ್​.ಯಡಿಯೂರಪ್ಪ ಶಿಷ್ಯ ಜೆ ಸಿ ಮಾಧುಸ್ವಾಮಿ. ಯಡಿಯೂರಪ್ಪ ಕೆಜೆಪಿ ಮಾಡಿದಾಗ ಚಂದ್ರಪ್ಪ ರಾಜೀನಾಮೆ ನೀಡಿ ಹೋಗಿದ್ದರು. ಈಗ ಅವರನ್ನು ಕರೆದು ಮಾತನಾಡಿಸದೆ ಟಿಕೆಟ್ ಘೋಷಣೆ ಮಾಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಸವಣ್ಣ, ಕುವೆಂಪು, ಶರೀಫರು ನಡೆದಾಡಿದ ಈ ನೆಲಕ್ಕೆ ಯೋಗಿ ಮಾದರಿಯ ಆಡಳಿತ ಬೇಕೇ ಭೈರಪ್ಪನವರೇ?

“ಚಿತ್ರದುರ್ಗದಲ್ಲಿ ಕಾರಜೋಳಗೆ ಕೊಡದಿದ್ದರೆ ಪ್ರಚಾರ ಮಾಡಲ್ಲ ಎಂದಿದ್ದಾರೆ. ಹೀಗಾಗಿ ಯಡಿಯೂರಪ್ಪ ಬ್ಲಾಕ್​ಮೇಲ್ ಮಾಡಿ ಕಾರಜೋಳಗೆ ಟಿಕೆಟ್ ಕೊಡಿಸಿದ್ದಾರೆ. ಈ ವಿಚಾರವನ್ನು ಶಾಸಕ ಚಂದ್ರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ರೇಣುಕಾಚಾರ್ಯ ಇದೇ ಯಡಿಯೂರಪ್ಪ ಶಿಷ್ಯ. ನನಗೂ ಬೇರೆ ಜಿಲ್ಲೆಗೆ ಹೋಗಿ ಲೋಕಸಭೆಗೆ ನಿಲ್ಲುವಂತೆ ಸೂಚಿಸಿದ್ದರು. ನಾವು ಬೇರೆ ಜಿಲ್ಲೆಗೆ ಹೋಗಿ ಅಲ್ಲಿಯ ಕಾರ್ಯಕರ್ತರಿಗೆ ತೊಂದರೆ ಕೊಡಬಾರದು” ಎಂದು ಮಾರ್ಮಿಕವಾಗಿ ಹೇಳಿದರು.

“ಶೆಟ್ಟರ್ ಬಲಿಕೊಡ್ತಾರೋ, ಹೆಬ್ಬಾಳ್ಕರ್ ಜತೆ ಒಳ ಒಪ್ಪಂದವಿದೆಯೋ ಗೊತ್ತಿಲ್ಲ. ಸಚಿವೆ ಹೆಬ್ಬಾಳ್ಕರ್​ಗೆ ಅನುಕೂಲ ಆಗುವಂತಹ ಕುತಂತ್ರವಿರಬಹುದು. ಇದನ್ನೆಲ್ಲ ಮಾಡುತ್ತಿರುವವರು ಅದೇ ಅಪ್ಪ ಮಕ್ಕಳು. ಅಪ್ಪ ಮಕ್ಕಳಿಗೆ ಕಳಕಳಿ ಇದ್ದರೆ ಕೆ.ಎಸ್.ಈಶ್ವರಪ್ಪಗೆ ಟಿಕೆಟ್​ ಕೊಡಬೇಕಿತ್ತು” ಎಂದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...