ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಇನ್ಮುಂದೆ ಭಾಗಿಯಾಗಲ್ಲ: ಯತ್ನಾಳ ಸ್ಪಷ್ಟನೆ

Date:

Advertisements
  • ‘ಮೃತ್ಯುಂಜಯ ಸ್ವಾಮೀಜಿಗಳ ಶಿಷ್ಯರು ಮೀಸಲಾತಿ ಕೊಡಿಸಲಿ’
  • ‘ರಾಜ್ಯ ಸರ್ಕಾರ ಜಾರಿಗೆ ತರಬೇಕು, ಇದು ನಮ್ಮ ಕೈಯಲ್ಲಿಲ್ಲ’

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಮತ್ತೆ ಪ್ರತಿಭಟನೆಗೆ ಮುಂದಾಗಿರುವ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದ ಹೋರಾಟಕ್ಕೆ ಇನ್ಮುಂದೆ ಭಾಗಿಯಾಗಲ್ಲ ಎಂದು ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಿಜಯಪುರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಪದೇ ಪದೆ ಪಾಲ್ಗೊಳ್ಳಲು ಆಗುವುದಿಲ್ಲ” ನೇರವಾಗಿಯೇ ತಿಳಿಸಿದ್ದಾರೆ.

“ಮೀಸಲಾತಿ ವಿಷಯದಲ್ಲಿ ಮುಂದೇನಾದರೂ ಆಗಬೇಕಾಗಿರುವುದು ಇದ್ದರೆ ಗುರುಗಳ ಶಿಷ್ಯರಾದ ಲಕ್ಷ್ಮಿ ಹೆಬ್ಬಾಳಕರ, ವಿನಯ ಕುಲಕರ್ಣಿ ಹಾಗೂ ವಿಜಯಾನಂದ ಕಾಶಪ್ಪನವರ ಇದ್ದಾರೆ. ಅವರ ಮೂಲಕ ಜಾರಿ ಮಾಡಿಸಲಿ. ಸದಾ ಕಾಲ ಹೋರಾಟ ಮಾಡುವುದರಲ್ಲಿ ಅರ್ಥವಿಲ್ಲ” ಎಂದರು.

Advertisements

“ಬಿಜೆಪಿ ಸರ್ಕಾರದ ಅವಧಿಯಲ್ಲೇ ಲಿಂಗಾಯತ ಪಂಚಮಸಾಲಿಗಳಿಗೆ ಮೀಸಲಾತಿ ನೀಡಿ, ನೋಟಿಫಿಕೇಶನ್‌ ಹೊರಡಿಸಲಾಗಿದೆ. ಅಲ್ಲದೇ, ರಾಜ್ಯಪಾಲರಿಂದ ಸುಗ್ರೀವಾಜ್ಞೆಯೂ ಆಗಿದೆ. ಈಗೇನಿದ್ದರೂ ರಾಜ್ಯ ಸರ್ಕಾರ ಜಾರಿಗೆ ತರುವುದಷ್ಟೇ ಬಾಕಿ ಇದ್ದು, ಇದು ನಮ್ಮ ಕೈಯಲ್ಲಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯೋಧ ರಾಯಭಾರಿ; ಹಲವು ಕೋನಗಳಿಂದ ಅಪಾಯಕಾರಿ ಈ ಹುಲಿಸವಾರಿ

“ಹಿಂದುಳಿದ ವರ್ಗಗಳ 2 ‘ಎ’ಗೆ ಇರುವ ಶೇ 15ರಷ್ಟು ಮೀಸಲಾತಿಯನ್ನು ಪಂಚಮಸಾಲಿಗಳಿಗೇ ಕೊಡಬೇಕು ಎಂದು ಈ ಹಿಂದೆ ಶಾಸಕ ವಿಜಯಾನಂದ ಕಾಶಪ್ಪನವರ ಬೇಡಿಕೆ ಇಟ್ಟಿದ್ದರು. ಈಗ ಅವರದೇ ಸರ್ಕಾರ ಇದೆ ಅಲ್ವಾ. ಮುಂದೆ ಹೋಗಿ ಕೊಡಿಸಲಿ” ಎಂದು ಆಗ್ರಹಿಸಿದರು.

ಸಚಿವ ಡಿ.ಸುಧಾಕರ ಜಾತಿ ನಿಂದನೆ ವಿಚಾರವಾಗಿ ಪ್ರತಿಕ್ರಿಯಿಸಿ, “ಸಂವಿಧಾನ ವಿರೋಧಿ ನಡವಳಿಕೆ ತೋರಿರುವ ಅವರು ತಕ್ಷಣ ರಾಜೀನಾಮೆ ನೀಡಬೇಕು, ಮುಖ್ಯಮಂತ್ರಿ ಅವರಿಗೆ ದಲಿತರ ಬಗ್ಗೆ ಗೌರವ ಇದ್ದರೆ ಸುಧಾಕರ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು” ಎಂದು ಯತ್ನಾಳ ಒತ್ತಾಯಿಸಿದರು.

“ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ” ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಯತ್ನಾಳ, ‘ಸಿದ್ದರಾಮಯ್ಯನವರು ಸಜೀವವಾಗಿ ಬಂದರೂ ಬಿಜೆಪಿಗೆ ತೆಗೆದುಕೊಳ್ಳುವುದಿಲ್ಲ. ಇನ್ನು ಹೆಣವಾಗಿ ಬಂದರೆ ತೆಗೆದುಕೊಳ್ಳುತ್ತೇವಾ’ ಎಂದು ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X