ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ | ಸಂಪುಟ ಸಭೆ ಬಳಿಕ ನಿರ್ಧಾರ: ಸಿಎಂ ಬೊಮ್ಮಾಯಿ

Date:

  • ನಮ್ಮ ಬದಲು ನಮ್ಮ ಕೆಲಸಗಳು ಜನರ ಬಳಿ ಮಾತನಾಡುತ್ತವೆ: ಮುಖ್ಯಮಂತ್ರಿ
  • 2ಎ ಸಮುದಾಯಗಳನ್ನು 3ಬಿಗೆ ಹಾಕುವ ಬಗ್ಗೆ ಯಾವುದೇ ವರದಿ ಇಲ್ಲ: ಸಿಎಂ

ರಾಜ್ಯ ಸಚಿವ ಸಂಪುಟ ಸಭೆ ಮಾರ್ಚ್ 24 ರಂದು ನಡೆಯಲಿದೆ. ಈ ಸಭೆಯ ನಂತರ ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಧೋಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮುದ್ದೇಬಿಹಾಳ ಕ್ಷೇತ್ರದಲ್ಲಿ 1600 ಕೋಟಿ ರೂಪಾಯಿಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಇದಾಗುತ್ತಿದೆ. ನಮ್ಮ ಬದಲು ನಮ್ಮ ಕೆಲಸಗಳು ಜನರ ಬಳಿ ಮಾತನಾಡುತ್ತವೆ ಎಂದು ಅವರು ಹೇಳಿದರು.

ವೇತನ ಹೆಚ್ಚಳ
ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಈಗಾಗಲೇ ಅವರಿಗೆ 15% ವೇತನ ಹೆಚ್ಚಳ ಮಾಡಲಾಗಿದೆ ಎಂದರು. ಇದೇ ವೇಳೆ 2ಎ ಸಮುದಾಯಗಳನ್ನು 3ಬಿಗೆ ಹಾಕುವ ಬಗ್ಗೆ ಯಾವುದೇ ವರದಿ ಇಲ್ಲ ಎಂದು ಸಿಎಂ ಹೇಳಿದರು.

ಕಾಂಗ್ರೆಸ್‌ ಲೇವಡಿ
ನಿರುದ್ಯೋಗಿಗಳಿಗೆ ಮೂರು ಸಾವಿರ ನೀಡುವ ಭರವಸೆ ನೀಡಿರುವ ಕಾಂಗ್ರೆಸ್‌ ಆ ಯೋಜನೆಯನ್ನು ಅವರ ಪಕ್ಷದ ರಾಹುಲ್ ಗಾಂಧಿ ಅವರಿಗೆ ನೀಡುವ ಮೂಲಕ ಪ್ರಾರಂಭಿಸಬೇಕು ಎಂದು ಸಿಎಂ ಲೇವಡಿ ಮಾಡಿದರು. ನಿರುದ್ಯೋಗಿಗಳಿಗೆ ಭತ್ಯೆ ನೀಡುವ ಬಗ್ಗೆ ರಾಜಸ್ತಾನ, ಛತ್ತೀಸ್‌ಗಡ ಚುನಾವಣೆಗಳ ವೇಳೆ ಕಾಂಗ್ರೆಸ್‌ನವರು ಹೇಳಿದ್ದರು. ಆದರೆ ಇವ್ಯಾವುದರ ಅನುಷ್ಠಾನವನ್ನು ಆ ಪಕ್ಷ ಮಾಡಿಲ್ಲ, ಹೀಗಾಗಿ ಹತಾಶರಾಗಿರುವ ಅವರು ನಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತರಿಂದ ಖರೀದಿಸುವ ಹಾಲಿನ ನಿಗದಿ ದರ ಕಡಿತ ಮಾಡಬೇಡಿ; ಸಿಎಂ ಸೂಚನೆ

ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆ ಸಿಎಂ ಸೂಚನೆ ಹಾಲು...

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು ಕಾರ್ಮಿಕರ ನೆರವಿಗೆ...

ಸಚಿವ ವೆಂಕಟೇಶ್ ಹೇಳಿಕೆಯಿಂದ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ‌ ತಲೆ ಎತ್ತಲಿದೆ: ಮಾಜಿ ಸಿಎಂ ಬೊಮ್ಮಾಯಿ

ಗೋವುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಬೊಮ್ಮಾಯಿ ಆಕ್ಷೇಪ 'ತಮಗೆ ನೀಡಿರುವ...

15,000 ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆ ಶೀಘ್ರ ಭರ್ತಿ; ಗೃಹ ಸಚಿವ ಪರಮೇಶ್ವರ್

ಪೊಲೀಸ್ ಇಲಾಖೆಗೆ ಬಲ ತುಂಬಲು ಮುಂದಾದ ಸರ್ಕಾರ ಹೊಸ ನೇಮಕಾತಿ ಆರಂಭಿಸಲು ಸೂಚನೆ...