ಬೆಂಗಳೂರು ಕಾಲ್ತುಳಿತ | ಬಿ ದಯಾನಂದ್‌ಗೆ ಮತ್ತೆ ಆಯುಕ್ತ ಹುದ್ದೆ ಇಲ್ಲ: ಪರಮೇಶ್ವರ್ ಸ್ಪಷ್ಟನೆ

Date:

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್ ಅವರಿಗೆ ಮತ್ತೆ ಆಯುಕ್ತ ಹುದ್ದೆಯನ್ನು ನೀಡಲಾಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

- Advertisement -

ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿ ಕರ್ತವ್ಯಲೋಪದ ಆರೋಪದ ಮೇಲೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್‌, ಐಪಿಎಸ್​ ಅಧಿಕಾರಿಗಳಾದ ವಿಕಾಸ್​ ಕುಮಾರ್ ವಿಕಾಸ್​​, ಡಿಸಿಪಿ ಶೇಖರ್ ಹೆಚ್ ಟಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಎಸ್‌ಐ ಬಾಲಕೃಷ್ಣ ಹಾಗೂ ಇನ್‌ಸ್ಪೆಕ್ಟರ್​ ಎ ಕೆ ಗಿರೀಶ್​ ಅವರನ್ನು ಅಮಾನತು ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಬೆಂಗಳೂರು ಕಾಲ್ತುಳಿತ ದುರಂತ: ಐವರೂ ಪೊಲೀಸ್‌ ಅಧಿಕಾರಿಗಳ ಅಮಾನತು ವಾಪಸ್‌

ಸೋಮವಾರ ಐವರೂ ಪೊಲೀಸ್ ಅಧಿಕಾರಿಗಳ ಅಮಾನತನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಈ ಹಿಂದೆಯೇ ವಿಕಾಸ್ ಕುಮಾರ್ ಅವರ ಅಮಾನತನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ರದ್ದುಗೊಳಿಸಿತ್ತು.

ಅಮಾನತು ಹಿಂಪಡೆದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಅಮಾನತು ಆಡಳಿತಾತ್ಮಕವಾದ ನಿರ್ಧಾರ. ಈ ನಿರ್ಧಾರವನ್ನು ವಾಪಸ್ ಪಡೆಯಲಾಗಿದೆ. ತನಿಖೆ ಮುಂದುವರೆದಿದೆ” ಎಂದು ಹೇಳಿದ್ದಾರೆ.

ಅಮಾನತುಗೊಂಡ ಅಧಿಕಾರಿಗಳು ಮತ್ತೆ ಅದೇ ಹುದ್ದೆಯನ್ನು ಪಡೆಯಲಿದ್ದಾರೆಯೇ ಎಂಬ ಬಗ್ಗೆ ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್ ಅವರು, “ಬಿ ದಯಾನಂದ ಅವರಿಗೆ ಅದೇ(ಆಯುಕ್ತ) ಹುದ್ದೆಯನ್ನು ನೀಡಲಾಗುವುದಿಲ್ಲ. ಮತ್ತೆ ಕಮಿಷನರ್ ಮಾಡುವುದಿಲ್ಲ. ಅವರ ಸೇವಾಹಿರಿತನಕ್ಕೆ ತಕ್ಕುದಾದ ಹುದ್ದೆಯನ್ನು ನೀಡಲಾಗುವುದು” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....