ಪ್ಯಾರಿಸ್ ಒಲಿಂಪಿಕ್ಸ್: ಅಮೃತ ಕ್ರೀಡಾ ದತ್ತು ಯೋಜನೆಯಡಿ ರಾಜ್ಯದ 75 ಕ್ರೀಡಾಪಟುಗಳ ಆಯ್ಕೆ: ಸಚಿವ ಬಿ.ನಾಗೇಂದ್ರ

Date:

ಮುಂದಿನ ವರ್ಷ ಫ್ರಾನ್ಸ್ ದೇಶದ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಾಗುವ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.

- Advertisement -

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಎಸ್.ರುದ್ರೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ 566 (562)ಕ್ಕೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ಯಾರಿಸ್‌ನಲ್ಲಿ ನಡೆಯುವ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಸಹಾಯವಾಗುವಂತೆ ರಾಜ್ಯದ ಕ್ರೀಡಾಪಟುಗಳಿಗೆ 2021-22 ನೇ ಸಾಲಿನಿಂದ ಅಮೃತ ಕ್ರೀಡಾ ದತ್ತು ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಒಲಿಂಪಿಕ್ಸ್‌ ಸೇರಿದಂತೆ ಅಂತಾರಾಷ್ಟಿಯ ಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯ ಹೊಂದಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಪೋಷಿಸಿ, ಸಾಧನೆಗೆ ಅಗತ್ಯವಾದ ಬೆಂಬಲ ವ್ಯವಸ್ಥೆ ನೀಡುವುದು ಈ ಯೋಜನೆಯ ಗುರಿಯಾಗಿದೆ ಎಂದು ತಿಳಿಸಿದರು.

“ಈ ಯೋಜನೆಯ ಫಲಾನುಭವಿಗಳಿಗೆ ತರಬೇತಿಗಾಗಿ ಕ್ರೀಡಾ ವಿಜ್ಞಾನದ ಬೆಂಬಲ, ಪೌಷ್ಟಿಕ ಆಹಾರ, ತರಬೇತಿಗೆ ಅಗತ್ಯವಿರುವ ಕ್ರೀಡಾ ಕಿಟ್ ಖರೀದಿ, ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು, ದೈನಂದಿನ ಅಗತ್ಯಗಾಗಿ ಮತ್ತು ಇತರೆ ವೆಚ್ಚಗಳಿಗಾಗಿ ತಲಾ ರೂ 10 ಲಕ್ಷ ವಾರ್ಷಿಕ ಗರಿಷ್ಠ ಪ್ರೋತ್ಸಾಹ ಧನ ನೀಡಲಾಗುತ್ತಿದೆ” ಎಂದು ಸಚಿವ ಬಿ.ನಾಗೇಂದ್ರ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...