ಪ್ಯಾರಿಸ್ ಒಲಿಂಪಿಕ್ಸ್: 9 ಕ್ರೀಡಾಪಟುಗಳಿಗೆ ಅನುದಾನ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ

Date:

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.

- Advertisement -

ಕರ್ನಾಟಕ ಒಲಿಂಪಿಕ್ಸ್‌ ಅಸೋಸಿಯೇಷನ್ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯಕವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಜುಲೈ 26 ರಿಂದ ಆಗಸ್ಟ್ 11ರವರೆಗೆ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್‌ ವಿಭಾಗದಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀ-ಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ, ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್‌ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್‌ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಒಂಬತ್ತು ಮಂದಿಗೆ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್‌ನಿಂದ ಪ್ರತ್ಯೇಕ ನೆರವು ದೊರೆಯಲಿದೆ ಎಂದು ತಿಳಿಸಿರುವ ಡಾ.ಕೆ.ಗೋವಿಂದರಾಜು, ಕ್ರೀಡಾಪಟುಗಳಿಗೆ ಸರ್ಕಾರದ ನೆರವು ದೊರಕಿಸಿಕೊಟ್ಟು ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಬ್ರಿಕ್ಸ್‌ ಶೃಂಗಸಭೆ | ಚೀನಾಗೆ ಹೆಚ್ಚಿನ ಲಾಭ, ಭಾರತಕ್ಕೆ ಸವಾಲುಗಳ ನಿರ್ವಹಣೆ: ಕಪಿಲ್ ಸಿಬಲ್

ಇತ್ತೀಚೆಗೆ ದೆಹಲಿಯಲ್ಲಿ ಮುಕ್ತಾಯಗೊಂಡ 'ಬ್ರಿಕ್ಸ್‌' ಶೃಂಗಸಭೆಯಿಂದ ಚೀನಾ ಅತ್ಯಂತ ಹೆಚ್ಚಿನ ಲಾಭವನ್ನು...

ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್...