ಪರಿಷತ್ ಉಪಚುನಾವಣೆ ಫಲಿತಾಂಶ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಕಪಾಳಮೋಕ್ಷ: ಸಿದ್ದರಾಮಯ್ಯ

Date:

ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆ ಸಲ್ಲಿಸಿ ಪತ್ರಿಕಾ ಹೇಳಿಕೆ ಬಿಡಿಗಡೆಮಾಡಿರುವ ಅವರು, “ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ” ಎಂದಿದ್ದಾರೆ.

“ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಜಯ; ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಮುಖಭಂಗ

“ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ” ಎಂದು ಕುಟುಕಿದ್ದಾರೆ.

“ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ” ಎಂದು ಹೇಳಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಲೆಕ್ಕ ಕೊಡಿ: ಆರ್. ಅಶೋಕ್

"ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ...

ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು....

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...