ಪರಿಷತ್‌ ಚುನಾವಣೆ | ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಯಡಿಯೂರಪ್ಪ

Date:

“ಜೆಡಿಎಸ್–ಬಿಜೆಪಿ ಮೈತ್ರಿ ರಾಜ್ಯದಲ್ಲಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ವಿರೋಧವಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿಯೊಂದಿಗೆ ಹೋಗುತ್ತೇವೆ” ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.

- Advertisement -

ಮೈಸೂರಿನಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ನಾವು ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ, ಜೆಡಿಎಸ್‌ಗೂ ಎರಡು ಸ್ಥಾನ ಬಿಟ್ಟುಕೊಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಯಾವ ಕ್ಷೇತ್ರ ಬಿಟ್ಟು ಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಶನಿವಾರ ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ವಿವರ ಬಿಡುಗಡೆ ಮಾಡಲಿದ್ದಾರೆ” ಎಂದು ತಿಳಿಸಿದರು.

“ಎನ್‌ಡಿಎ ಮೈತ್ರಿಕೂಟ ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ. ರಾಜ್ಯದಲ್ಲಿ ನಾವು ಕನಿಷ್ಠ 24-25 ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಕಾಂಗ್ರೆಸ್‌ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ನಲ್ಲಿ ಪ್ರಧಾನಿ ಆಗುವ ಯೋಗ್ಯತೆ ಯಾರಿಗಿದೆ? ವಿಧಾನಸಭೆ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ, ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಎಲ್ಲರ ಅಭಿಪ್ರಾಯ” ಎಂದು ಹೇಳಿದರು.

ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿ, “ತನಿಖೆ ಪಾರದರ್ಶಕವಾಗಿ ನಡೆಯಬೇಕಾದರೆ ಸಿಬಿಐಗೆ ಕೊಡಬೇಕು. ಬಹುತೇಕರ ಅಭಿಪ್ರಾಯ ಇದೇ ಆಗಿದೆ” ಎಂದರು.

ಕೆ ಎಸ್ ಈಶ್ವರಪ್ಪ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, “ಆ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ. ಶಿವಮೊಗ್ಗದಲ್ಲಿ ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ” ಎಂದು ಹೇಳಿದರು.

‘ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...