ಪರಿವಾರ/ ತಳವಾರ ಜನಾಂಗ | ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿದ್ದರಾಮಯ್ಯ ಘೋಷಣೆ

Date:

Advertisements

ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಹರಿಹರದ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ವತಿಯಿಂದ ಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.

“ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ” ಎಂದರು.

Advertisements

ಬುದ್ಧಿವಂತಿಕೆ ಯಾರ ಸ್ವತ್ತಲ್ಲ

“ಅಕ್ಷರ ಸಂಸ್ಕೃತಿಯಿಂದ ವಂಚಿತರಾದಾಗ ಸಾಮಾಜಿಕ ಆರ್ಥಿಕ ಅಸಮಾನತೆ ನಿರ್ಮಾಣವಾಗಿರುವುದು. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಭಟ್ಕಳದ ಕಟ್ಟೆ ಪುರಾಣ: ಚುನಾವಣಾ ನಿಮಿತ್ತಂ, ಕೋಣೆಮನೆ ವೇಷಂ

ಸಮಸಮಾಜ ನಿರ್ಮಾಣವಾದಾಗಲೇ ರಾಮರಾಜ್ಯದ ಸ್ಥಾಪನೆ

“ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು. ಆದರೆ ಕಾವ್ಯಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು” ಎಂದರು.

“ಶ್ರೀರಾಮಚಂದ್ರನ ಕಾಲದಲ್ಲಿಯೇ ಸಮಾನ ಸಮಾಜದ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯಿತ್ತು. ಪ್ರಜೆಗಳೇ ಆಡಳಿತ ನಡೆಸುವ ಪ್ರಜಾಪ್ರಭುತ್ವದ ಮೂಲವನ್ನು ರಾಮಾಯಣದಲ್ಲಿ ಕಾಣಬಹುದು. ಬಸವಾದಿ ಶರಣರು ತಿಳಿಸಿದಂತೆ ವರ್ಗರಹಿತ, ಜಾತಿರಹಿತ, ಸಮಾನ ಅವಕಾಶ ನೀಡುವ ಸಮಾಜ ನಿರ್ಮಾಣವಾದಾಗ ರಾಮರಾಜ್ಯ ಎಂದು ಹೇಳಬಹುದು” ಎಂದು ಹೇಳಿದರು.

ಸಹಿಷ್ಣುತೆ ಹಾಗೂ ಸಹಬಾಳ್ವೆ

“ಇಂದು ಜಾತಿ ಜಾತಿಗಳನ್ನು ಒಡೆಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೇ ಸರ್ಕಾರದ ಗುರಿಯಾಗಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಮಾಡಬೇಕೆಂದು ಸಂವಿಧಾನ ಹೇಳುತ್ತದೆ. ಎಸ್ ಸಿ, ಎಸ್ ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸರಿಯಾದ ಅವಕಾಶ ದೊರೆತಲ್ಲಿ ಉತ್ತಮವಾಗಿ ಜೀವನ ರೂಪಿಸಿಕೊಳ್ಳುತ್ತಿದ್ದರು. ಇವರಿಗೆ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X