ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉಭಯ ಸದನದಲ್ಲಿ ಪ್ರತಿಪಕ್ಷಗಳು ಚರ್ಚೆ ನಡೆಸುವಂತೆ ಪಟ್ಟು ಹಿಡಿದಿದೆ.
ಈ ನಡುವೆಯೇ ರಾಜ್ಯಸಭೆಯ ಅಧಿವೇಶನದ ವೇಳೆ ಸದನದ ಬಾವಿಗಿಳಿದು ಪ್ರತಿಭಟಿಸುತ್ತಿದ್ದ ಆಮ್ ಆದ್ಮಿ ಪಕ್ಷ ಸಂಸದ ಸಂಜಯ್ ಸಿಂಗ್ ಅವರನ್ನು ಸದನದಿಂದ ಅಮಾನತು ಮಾಡಲಾಗಿದೆ.
#WATCH | Rajya Sabha Chairman suspends AAP MP Sanjay Singh for the remaining duration of the Monsoon session during the Opposition's protest in the House over the Manipur issue pic.twitter.com/YpNYIhhMck
— ANI (@ANI) July 24, 2023
ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...
ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...
ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...
ಸಂಜಯ್ ಸಿಂಗ್ ಅವರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವಂತೆ ರಾಜ್ಯಸಭಾ ನಾಯಕ ಪಿಯೂಷ್ ಗೋಯಲ್ ಅವರು ನಿರ್ಣಯ ಮಂಡಿಸಿದರು. ಇದನ್ನು ಮತಕ್ಕೆ ಹಾಕಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಂಗೀಕಾರ ಪಡೆದು, ಅನುಮೋದಿಸಿದರು.
ಸಂಜಯ್ ಸಿಂಗ್ ಅವರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿರುವುದಾಗಿ ಪ್ರಕಟಿಸಿದರು. ಆ ಬಳಿಕ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.
ಜುಲೈ 20ರಿಂದ ಆರಂಭಗೊಂಡಿರುವ ಮುಂಗಾರು ಅಧಿವೇಶನವು ಆಗಸ್ಟ್ 11ರವರೆಗೆ ನಡೆಯಲಿದೆ.




