ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ನಡೆದರೆ ಮಾತ್ರ ಪಕ್ಷದ ಚಟುವಟಿಕೆಗಳಲ್ಲಿ ಭಾಗಿ: ಕಾಂಗ್ರೆಸ್‌ ಕಾರ್ಯಕರ್ತರ ಎಚ್ಚರಿಕೆ

Date:

ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಪ್ರಾರಂಭವಾಗುವವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದಾರೆ.

“ತನಿಖೆಯ ಬಗ್ಗೆ ಸರ್ಕಾರ ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ, ನಮ್ಮ ಹೋರಾಟಕ್ಕೆ ಯಾವುದೇ ಬೆಲೆ ಇಲ್ಲದಂತಾಗುತ್ತದೆ. ಆದ್ದರಿಂದ ತನಿಖೆ ಆರಂಭಿಸುವ ತನಕ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ತಮ್ಮನ್ನೂ ಸೇರಿಕೊಂಡು ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತರು ದೂರ ಉಳಿಯಲಿದ್ದಾರೆ” ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ಆಚಾರ್ಯ ತಿಳಿಸಿದ್ದಾರೆ.

“ಇದು ಕೇವಲ ನನ್ನೊಬ್ಬನ ನಿರ್ಧಾರವಲ್ಲ ಇತ್ತೀಚೆಗೆ ಕಾರ್ಕಳ ಬ್ಲಾಕ್ ಸಮಿತಿಯ ಸಭೆಗೆ ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಕುಶಲ ಶೆಟ್ಟಿ ಅವರು ಆಗಮಿಸಿದ್ದು ಅವರು ಸೇರಿದಂತೆ ಕಾರ್ಕಳದ ನಾಯಕರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಕಾರ್ಕಳ ಬ್ಲಾಕ್ ಅಧ್ಯಕ್ಷರ ಸಮ್ಮುಖದಲ್ಲೇ ಎಲ್ಲಾ ಕಾರ್ಯಕರ್ತರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬೆಳವಣಿಗೆ ಸ್ಥಳೀಯ ಕಾಂಗ್ರೆಸ್ಸಿಗರಲ್ಲಿ ಸಂಚಲನವನ್ನು ಉಂಟುಮಾಡಿದೆ. “ನನ್ನ ನಿರ್ಧಾರವು ಕಾರ್ಕಳದ ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ನಿರ್ಧಾರವೂ ಆಗಿದೆ ಎಂದು ಭಾವಿಸುತ್ತೇನೆ” ಎಂದು ಯೋಗೀಶ್ ಆಚಾರ್ಯ ಹೇಳಿಕೊಂಡಿದ್ದಾರೆ.

ಬುಧವಾರ ಕಾರ್ಕಳದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಸ್ಥಳೀಯ ಮಟ್ಟದ ನಾಯಕರು ಸಭೆ ನಡೆಸಿದ್ದಾರೆ. ತನಿಖೆಯ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚೆ ನಡೆಸುವ ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

ಏನಿದು ಪ್ರಕರಣ

ಕಾರ್ಕಳ ತಾಲೂಕಿನ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಲಾಗಿದೆ. ಈ ಪಾರ್ಕ್ ಅನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2023ರ ಜ. 17ರಂದು ಉದ್ಘಾಟಿಸಿದ್ದರು. ಇಡೀ ಥೀಮ್ ಪಾರ್ಕ್ ಅನ್ನು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರಲ್ಲಿ ಬೃಹತ್ತಾದ ಪರಶುರಾಮನ ಪುತ್ಥಳಿ, ಬಯಲು ರಂಗ ಮಂದಿರ, ಆರ್ಟ್ ಗ್ಯಾಲರಿ, ಭಜನಾ ಮಂದಿರ ಇವೆ.

ಪರಶುರಾಮನ ಪುತ್ಥಳಿಯು 53 ಅಡಿ ಎತ್ತರವಿದ್ದು, 15 ಟನ್ ತೂಕವಿದೆ. ಇದನ್ನು ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಕೃಷ್ಣನಾಯ್ಕ ಅವರು ನಿರ್ಮಿಸಿದ್ದಾರೆ. ಈ ಮೂರ್ತಿಗೆ ಕಂಚು ಮತ್ತು ಉಕ್ಕು ಬಳಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಕಾಂಗ್ರೆಸ್ ನಾಯಕರು ಈ ಪುತ್ಥಳಿಯನ್ನು ಫೈಬರ್‌ನಿಂದ ನಿರ್ಮಿಸಲಾಗಿದ್ದು, ಉಕ್ಕು ಮತ್ತು ಕಂಚಿನ ಪುತ್ಥಳಿಗಿಂತ ಕಡಿಮೆ ಖರ್ಚಿನಲ್ಲಿ ಈ ಪುತ್ಥಳಿ ನಿರ್ಮಿಸಲಾಗಿದೆ. ಕಂಚು, ಉಕ್ಕು ಬಳಸಲಾಗಿದೆ ಎಂದು ಹೇಳಿ ಆ ಹಣವನ್ನು ಈ ಥೀಮ್ ಪಾರ್ಕ್ ನಿರ್ಮಿಸುವ ಜವಾಬ್ದಾರಿ ಹೊತ್ತಿದ್ದ ಸ್ಥಳೀಯ ಶಾಸಕರು (ಸುನಿಲ್ ಕುಮಾರ್) ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೈಲು ಸೇರಿದ ಬಜರಂಗದಳ ಕಾರ್ಯಕರ್ತರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

ಲವ್ ಜಿಹಾದ್​ ಪ್ರಕರಣದಲ್ಲಿ ​ಹಲ್ಲೆ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಸೇರಿರುವ...

ಕರಂದ್ಲಾಜೆ ವಿರುದ್ದ ಷಡ್ಯಂತ್ರ ನಡೀತಿದೆ ಎಂದ ಬಿಎಸ್‌ವೈ; ಬಾಸ್ ಈಸ್ ಆಲ್ವೇಸ್ ರೈಟ್ ಎಂದ ಸಿ ಟಿ ರವಿ

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಕೇಳಿಲ್ಲ. ಈ ಬಗ್ಗೆ ಈಗಾಗಲೇ...

ಪರಿಹಾರಕ್ಕೆ ಹಣವಿಲ್ಲ, ಜಾಹೀರಾತಿಗೆ ಹಣವಿದೆ ಎಂದು ಸರ್ಕಾರ ಕುಟುಕಿದ ಕುಮಾರಸ್ವಾಮಿ

"ರಾಜ್ಯದ ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ. ಆದ್ರೆ,...