“2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸೋಲು ರಾಜ್ಯದ ಕೆಲವು ಹಿರಿಯ ನಾಯಕರನ್ನು ಪಕ್ಷದ ಭವಿಷ್ಯದ ಬಗ್ಗೆ ಚಿಂತಿಸುವಂತೆ ಮಾಡಿದೆ” ಎಂದು ಬದ್ಲಾಪುರ ಬಿಜೆಪಿ ಶಾಸಕ ರಮೇಶ್ ಚಂದ್ರ ಮಿಶ್ರಾ ಹೇಳಿದ್ದಾರೆ.
ಎರಡು ಬಾರಿ ಬಿಜೆಪಿ ಶಾಸಕರಾಗಿರುವ ರಮೇಶ್ ಚಂದ್ರ ಮಿಶ್ರಾ ಅವರು ಈ ಬಗ್ಗೆ ವಿಡಿಯೋ ಒಂದರಲ್ಲಿ ಮಾತನಾಡಿದ್ದು ಸದ್ಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಕಾಮೆಂಟ್ ಮಾಡಿರುವ ನೆಟ್ಟಿಗರು “ಹೌದು ಬಿಜೆಪಿ ಶಾಸಕ ಹೇಳುತ್ತಿರುವುದು ಸರಿಯೇ ಇದೆ. ಬಿಜೆಪಿ ನಾಯಕರು ಸ್ಥಳೀಯವಾಗಿ ಯಾವುದೇ ಕಾರ್ಯ ಮಾಡುತ್ತಿಲ್ಲ” ಎಂದಿದ್ದಾರೆ.
“ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸದ್ಯದ ಸ್ಥಿತಿ ಅತಂತ್ರವಾಗಿದೆ. 2027ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದಿಂದ ಕೆಳಗಿಳಿಯುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ರಾಜ್ಯದಲ್ಲಿ ನಮ್ಮ ಪಕ್ಷವನ್ನು ಬಲಪಡಿಸಲು ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ” ಎಂದು ವಿಡಿಯೋದಲ್ಲಿ ಬಿಜೆಪಿ ಶಾಸಕ ಹೇಳಿರುವುದು ಕಂಡು ಬಂದಿದೆ.
ಇದನ್ನು ಓದಿದ್ದೀರಾ? Viral video: ಅಮಿತ್ ಶಾ ವಿರುದ್ಧ ಸಿಡಿಮಿಡಿಗೊಂಡ ಯುಪಿ ಬಿಜೆಪಿ ಕಾರ್ಯಕರ್ತ: ವಿಡಿಯೋ ವೈರಲ್!
ಇನ್ನು ಇದೇ ವಿಡಿಯೋದಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ರಾಜಕೀಯ ಭಾಷಣಗಳ ಜನಪ್ರಿಯತೆ ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಮಿಶ್ರಾ, “ಹಿಂದುಳಿದ ವರ್ಗಗಳು ಅಥವಾ ಒಬಿಸಿಗಳು, ದಲಿತರು ಮತ್ತು ಅಲ್ಪಸಂಖ್ಯಾತರ ರಾಜಕೀಯ ಭಾಷಣದಲ್ಲಿ ಪ್ರಾಬಲ್ಯ ಸಾಧಿಸಿದ ರೀತಿ ಮತ್ತು ಸಮಾಜವಾದಿ ಪಕ್ಷವು ಸೃಷ್ಟಿಸಿದ ದಾರಿತಪ್ಪಿಸುವ ವಾತಾವರಣವನ್ನು ಪರಿಗಣಿಸಿದರೆ ನಮ್ಮ ಪಕ್ಷದ ಪರಿಸ್ಥಿತಿಯು ರಾಜ್ಯದಲ್ಲಿ ಅಷ್ಟು ಪ್ರಬಲವಾಗಿಲ್ಲ ಎಂದು ತೋರುತ್ತದೆ” ಎಂದು ಅಭಿಪ್ರಾಯಿಸಿದರು.
Not all is well in UP BJP?
“Give me the present situation, we (BJP) don’t see forming government in 2027,” said Ramesh Chandra Mishra, BJP MLA from UP’s Jaunpur. He suggested the national leadership will have to take some bold decision and focus on the elections in 2027. pic.twitter.com/8vbcCR0xlH
— Piyush Rai (@Benarasiyaa) July 13, 2024
“ಪ್ರತಿಯೊಬ್ಬ ಕಾರ್ಯಕರ್ತರು ಬಿಜೆಪಿ ಸಲುವಾಗಿ ಅವರ / ಅವಳ ಆತ್ಮ ಮತ್ತು ಹೃದಯಪೂರ್ವಕವಾಗಿ ಶ್ರಮಿಸಬೇಕಾಗುತ್ತದೆ. ಆಗ ಮಾತ್ರ ನಾವು ಮತ್ತೆ ಸರ್ಕಾರವನ್ನು ರಚಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ, ಪ್ರಸ್ತುತ ಪರಿಸ್ಥಿತಿಯು ಕರಾಳವಾಗಿದೆ, ನಮ್ಮ ಸರ್ಕಾರದ ಸ್ಥಿತಿ ಕೆಟ್ಟದಾಗಿದೆ” ಎಂದು ಹೇಳಿದರು.
ಮಿಶ್ರಾ ಹೇಳಿಕೆಯು ಉತ್ತರ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಹೆಚ್ಚುತ್ತಿರುವ ಆತಂಕವನ್ನು ಪ್ರತಿಧ್ವನಿಸಿದೆ. ವಿಶೇಷವಾಗಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ರಾಮಮಂದಿರ ಇರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋಲು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಳಿಯುತ್ತಿರುವುದರ ಸೂಚನೆಯಂತಾಗಿದೆ. ಇನ್ನು ಈ ವಿಡಿಯೋ ವೈರಲ್ ಆದ ಬಳಿಕ ಯಾರ ಕರೆ, ಇಮೇಲ್‌ಗಳಿಗೆ ಪ್ರತಿಕ್ರಿಯಿಸುತ್ತಿಲ್ಲ ಎಂದು ವರದಿಯಾಗಿದೆ.