ಸುದೀಪ್‌ ಬಳಿಕ ಬಿಜೆಪಿಗೆ ಪವನ್ ಕಲ್ಯಾಣ ಬಲ? ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ

Date:

  • ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತು ಸ್ಪಷ್ಟನೆ
  • ಮೀಸಲಾತಿ ಕುರಿತು ಕಾಂಗ್ರೆಸ್ ವಿರುದ್ಧ ಕಿಡಿ

ನಟ ಕಿಚ್ಚ ಸುದೀಪ್ ಅವರ ಬೆಂಬಲದ ಬೆನ್ನಲ್ಲೇ ತೆಲುಗು ಚಿತ್ರನಟ, ರಾಜಕಾರಣಿ ಪವನ್ ಕಲ್ಯಾಣ ಅವರು ಸಹ ಬಿಜೆಪಿ ಪರ ಪ್ರಚಾರ ಮಾಡುವ ಸಾಧ್ಯತೆಗಳಿವೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸುಳಿವು ನೀಡಿದ್ದಾರೆ.

ಗುರುವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಬಸವರಾಜ ಬೊಮ್ಮಾಯಿ ಇಂತಹದೊಂದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದಾರೆ.

ಈಗಾಗಲೇ ಸುದೀಪ್ ಅವರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗೆ ನಾಂದಿ ಹಾಡಿದೆ. ಈ ಹೊತ್ತಲ್ಲೇ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಪವನ್‌ ಕಲ್ಯಾಣ್‌ ಅವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡುವ ಬಗ್ಗೆ ಕುತೂಹಲವನ್ನೂ ಹುಟ್ಟುಹಾಕಿದೆ.

ಸುದೀಪ್ ಅವರ ಜೊತೆಗೆ ಪವನ್ ಕಲ್ಯಾಣ್ ಅವರು ರಾಜ್ಯ ಬಿಜೆಪಿ ನಾಯಕರ ಪರ ಬ್ಯಾಟ್‌ ಬೀಸುವ ಸಾಧ್ಯತೆಗಳಿವೆ.

ಸೆಲಬ್ರಿಟಿಗಳ ಬಿಜೆಪಿ‌ ಪರ‌ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, “ತೆಲಗು ಚಿತ್ರನಟ ಪವನ್ ಕಲ್ಯಾಣ್ ಅವರನ್ನು ಕೇಂದ್ರ ನಾಯಕರು ಭೇಟಿಯಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಕಾದು ನೋಡಿ” ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಧಾರ್‌ – ಪ್ಯಾನ್ ಜೋಡಣೆಗೆ ದುಬಾರಿ ಶುಲ್ಕ; ನಿರ್ಮಲಾ ಸೀತಾರಾಮನ್ ಸಮರ್ಥನೆ

ಒಂದೇ ಕ್ಷೇತ್ರದಿಂದ ಬೊಮ್ಮಾಯಿ ಸ್ಪರ್ಧೆ

ಬಸವರಾಜ ಬೊಮ್ಮಾಯಿ ಅವರು ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ವದಂತಿಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದವು. ಆದರೆ, ಈ ವಿಷಯಕ್ಕೆ ಬೊಮ್ಮಾಯಿ ತೆರೆ ಎಳೆದಿದ್ದಾರೆ.

“ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಕೇವಲ ವದಂತಿ. ಅದಕ್ಕೆ ಯಾರು ಕಿವಿಗೊಡಬಾರದು” ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

“ರಾಜ್ಯ ಕೋರ್ ಕಮಿಟಿ ಸಭೆ ನಿನ್ನೆ ಮುಕ್ತಾಯವಾಗಿದೆ. ಏಪ್ರಿಲ್ 8ರಂದು ಸಭೆ ಸೇರಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಹಾಲಿ‌ ಶಾಸಕರಿಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, “ಮೂರು ನಾಲ್ಕು ಹಂತದಲ್ಲಿ ಪರಿಶೀಲಿಸಿ ವರದಿ‌ ಪಡೆದುಕೊಳ್ಳಲಾಗಿದೆ. ಅದನ್ನೆಲ್ಲ ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುವುದು” ಎಂದಿದ್ದಾರೆ.

ಮೀಸಲಾತಿ ವಿಚಾರ ಬಿಜೆಪಿಗೆ ತಿರುಗು ಬಾಣ ಆಗಲಿದೆ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಅವರು, “ನಮ್ಮ ನಿರ್ಧಾರಗಳು ಕಾಂಗ್ರೆಸ್‌ಗೆ ತಿರುಗು ಬಾಣ ಆಗಲಿದೆ. ಕಾಂಗ್ರೆಸ್ ಮಾಡದೆ ಇದ್ದುದನ್ನು ಬಿಜೆಪಿ ಮಾಡಿ ತೋರಿಸಿದೆ” ಎಂದಿದ್ದಾರೆ.

“ಇಷ್ಟು ದಿನದ ದೀನದಲಿತರನ್ನು ಕಾಂಗ್ರೆಸ್ ಮತ ಬ್ಯಾಂಕ್ ಮಾಡಿಕೊಂಡಿತ್ತು. ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ನಾವು ಮಾಡಿದ್ದೇವೆ. ಹತಾಶೆಯಿಂದ ಕಾಂಗ್ರೆಸ್ ಆರೋಪಿಸುತ್ತಿದೆ” ಎಂದು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ...