ಪವಾರ್ v/s ಪವಾರ್ | ಅತ್ತಿಗೆ-ನಾದಿನಿಯರ ಪೈಪೋಟಿ ಕಣವಾದ ಬಾರಾಮತಿ ಕ್ಷೇತ್ರ

Date:

ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದ ಒಂದೇ ಕುಟುಂಬ ರಾಜಕೀಯ ಜಿದ್ದಾಜಿದ್ದನ ಕಣವಾಗಿ ಮಾರ್ಪಟ್ಟಿದೆ. ಶರದ್ ಪವಾರ್ ಕುಟುಂಬದ ಇಬ್ಬರು ಮಹಿಳಾ ಅಭ್ಯರ್ಥಿಗಳು ಪರಸ್ಪರ ಪ್ರತಿಸ್ಪರ್ಧಿಗಳಾಗಿ ಕಣಕ್ಕಿಳಿದಿದ್ದಾರೆ. ಬಾರಾಮತಿಯಲ್ಲಿ ಶರದ್ ಪವಾರ್ ಮಗಳು, ಸಂಸದೆ ಸುಪ್ರಿಯಾ ಸುಳೆ ವಿರುದ್ಧ ಮಹಾ ಮುಖ್ಯಮಂತ್ರಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಸ್ಪರ್ಧಿಸಿದ್ದಾರೆ. ಸದ್ಯ ಕ್ಷೇತ್ರವು ಅತ್ತಿಗೆ-ನಾದಿನಿಯರ ಜಿದ್ದಿನ ಕಣವಾಗಿ ಮಾರ್ಪಟ್ಟಿದೆ.

ಮಹಾರಾಷ್ಟ್ರದಲ್ಲಿ ರಾಜಕೀಯ ವೈರುದ್ಯಗಳಲ್ಲಿ ಶಿವಸೇನೆಯಂತೆ ಎನ್‌ಸಿಪಿ ಕೂಡ ಇಬ್ಬಾಗವಾಗಿದೆ. ಅಜಿತ್ ಪವಾರ್ (ಶರದ್ ಪವಾರ್ ಅಣ್ಣನ ಮಗ) ಬಣ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದೆ. ಶರದ್ ಪವಾರ್ ಅವರ ಬಣವು ಕಾಂಗ್ರೆಸ್‌ ಜೊತೆಗೆ ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿದೆ.

ಸ್ಪರ್ಧೆಯ ಬಗ್ಗೆ ಪ್ರತಿಕ್ರಿಯಿಸಿರುವ ಸುನೇತ್ರಾ ಪವಾರ್, “ಇದು ನನಗೆ ಅದೃಷ್ಟದ ದಿನವಾಗಿದೆ. ನಾನು ಚುನಾವಣೆಯಲ್ಲಿ ಹೋರಾಡಲು ಸಮರ್ಥಳೆಂದು ಪರಿಗಣಿಸಿದ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಮಹಾಯುತಿಯ (ಶಿವಸೇನೆ, ಬಿಜೆಪಿ ಮತ್ತು ಎನ್‌ಸಿಪಿ) ಎಲ್ಲ ನಾಯಕರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಾರಾಮತಿಯಲ್ಲಿನ ಚುನಾವಣಾ ಹೋರಾಟವು ಸಿದ್ಧಾಂತ ಮತ್ತು ತತ್ವಗಳದ್ದಾಗಿದೆಯೇ ಹೊರತು ಕುಟುಂಬವಲ್ಲ ಎಂದು ಎನ್‌ಸಿಪಿ (ಶರದ್ ಬಣ) ರಾಜ್ಯಾಧ್ಯಕ್ಷ ಸುನಿಲ್ ತಟ್ಕರೆ ಹೇಳಿದ್ದಾರೆ.

ಬಾರಾಮತಿಯು ಶರದ್ ಪವಾರ್ ಅವರ ಎನ್‌ಸಿಪಿಯ ಭದ್ರಕೋಟೆಯಾಗಿದೆ. 1999ರಲ್ಲಿ ಆರಂಭವಾಗಿದ್ದ ಎನ್‌ಸಿಪಿ, 2023ರ ಜುಲೈನಲ್ಲಿ ಇಬ್ಬಾಗವಾಗಿಯಿತು. ಶಿವಸೇನೆ (ಏಕನಾಥ್ ಶಿಂಧೆ ಬಣ) ನೇತೃತ್ವದ ಸರ್ಕಾರದೊಂದಿಗೆ ಅಜಿತ್ ಪವಾರ್ ಅವರ ಎನ್‌ಸಿಪಿ ಬಣ ಕೈಜೋಡಿಸಿದೆ. ಎನ್‌ಸಿಪಿ ವಿಭಜನೆಯ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದ್ದು, ಬಾರಾಮತಿ ಕ್ಷೇತ್ರವು ಜಿದ್ದಿನ ಚುನಾವಣಾ ಕದನಕ್ಕೆ ಸಾಕ್ಷಿಯಾಗಲಿದೆ.

2019ರ ಚುನಾವಣೆಯಲ್ಲಿ, ಸುಪ್ರಿಯಾ ಸುಳೆ ಅವರು ಎನ್‌ಸಿಪಿ ಅಭ್ಯರ್ಥಿಯಾಗಿ ಬಾರಾಮತಿ ಕ್ಷೇತ್ರದಲ್ಲಿ ಗೆದ್ದು, ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ನೇಹಿತೆ ಮೇಲೆ ಹಲ್ಲೆ, ಅತ್ಯಾಚಾರ; ಆರೋಪಿ ಬಂಧನ – ಮನೆಯ ಅಕ್ರಮ ಭಾಗ ನೆಲಸಮ

ತನ್ನ ಸ್ನೇಹಿತೆ ಮೇಲೆಯೇ ಹಲ್ಲೆಗೈದು ಅತ್ಯಾಚಾರ ಎದಗಿದ್ದ ಆರೋಪದ ಮೇಲೆ 20...

ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ ಆಗಲ್ಲ: ಸುಮಲತಾ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸಮರ್ಥನೀಯವಲ್ಲ. ಅವುಗಳು ಮಹಿಳೆಯರನ್ನು ಸಬಲೀಕರಣ ಮಾಡುವುದಿಲ್ಲ ಎಂದು...

ಅನಾರೋಗ್ಯ ಹಿನ್ನೆಲೆ; ರಾಹುಲ್ ಗಾಂಧಿ ಕೇರಳ ಚುನಾವಣಾ ಪ್ರಚಾರ ರದ್ದು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 22...

ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

'ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ನ ಪ್ರಣಾಳಿಕೆ'...