ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಅಕ್ರಮ ವ್ಯವಹಾರದ ಬಗ್ಗೆ ತನಿಖೆ ಆರಂಭಿಸಿದ ED: ವರದಿ

Date:

ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಆರ್‌ಬಿಐ ರದ್ದುಗೊಳಿಸುವ ಆದೇಶ ಹೊರಡಿಸಿದ ಎರಡು ವಾರಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಲು ಪ್ರಕರಣ ಕೈಗೆತ್ತಿಕೊಂಡಿರುವುದಾಗಿ ವರದಿಯಾಗಿದೆ.

- Advertisement -

ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಮೂಲಕ ಆಗಿರುವ ಅವ್ಯವಹಾರ ಆಗಿರುವ ಶಂಕೆಯ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಬಿಸಿ-ಟಿವಿ18 ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದ ಎರಡು ವಾರದ ಬಳಿಕ ಈ ಬೆಳವಣಿಗೆ ನಡೆದಿದೆ. ಆದರೆ ಈ ಬಗ್ಗೆ ಇ ಡಿ ಅಧಿಕಾರಿಗಳಾಗಲೀ, ಪೇಟಿಎಂ ಆಗಲಿ ಹೇಳಿಕೆ ನೀಡಿಲ್ಲ ಎಂದು ವರದಿ ತಿಳಿಸಿದೆ.

ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು
ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ಆದೇಶ ಹೊರಡಿಸಿತ್ತು. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ ಆದೇಶದಲ್ಲಿ ತಿಳಿಸಿತ್ತು.

ಪೇಟಿಎಂನ ಪೇಮೆಂಟ್‌ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಆರ್‌ಬಿಐ, “ಬ್ಯಾಂಕ್‌ನಲ್ಲಿ ನಿರಂತರ ಉಲ್ಲಂಘನೆಗಳು ಮುಂದುವರಿದ ಕಾರಣದಿಂದ ಮಹತ್ವದ ಮೇಲ್ವಿಚಾರಣಾ ಕಾಳಜಿಗಳಿಗಾಗಿ ಹಾಗೂ ಬಾಹ್ಯ ಸಂಸ್ಥೆಗಳಿಂದ ಸಮಗ್ರ ಲೆಕ್ಕಪರಿಶೋಧನೆ ಕೈಗೊಂಡ ನಂತರವೇ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಆರ್‌ಬಿಐ ಸ್ಪಷ್ಟಪಡಿಸಿತ್ತು.

2022 ಮಾರ್ಚ್‌ 11ರಲ್ಲೇ  ನೂತನ ಗ್ರಾಹಕರನ್ನು ಹೊಂದುವುದನ್ನು ನಿಲ್ಲಿಸಬೇಕು ಎಂದು ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಸಂಸ್ಥೆಗೆ ತಿಳಿಸಿರುವುದನ್ನು ಆರ್‌ಬಿಐ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಈ ಆದೇಶದ ಬೆನ್ನಲ್ಲೇ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ನಿರ್ದೇಶಕ ಮಂಜು ಅಗರ್ವಾಲ್ ರಾಜೀನಾಮೆ ನೀಡಿದ್ದರು.

ಇ.ಡಿ ಮೌನ ಪ್ರಶ್ನಿಸಿದ್ದ ಕಾಂಗ್ರೆಸ್

ಪೇಟಿಎಂ ಪೇಮೆಂಟ್ ಬ್ಯಾಂಕ್‌ ಸೇವೆಗಳನ್ನು ಆರ್‌ಬಿಐ ರದ್ದುಗೊಳಿಸಿದ್ದ ನಂತರ ಜಾರಿ ನಿರ್ದೇಶನಾಲಯದ ಮೌನದ ಬಗ್ಗೆ ವಿಪಕ್ಷ ಕಾಂಗ್ರೆಸ್ ಪ್ರಶ್ನಿಸಿತ್ತು.

ಇದನ್ನು ಓದಿದ್ದೀರಾ? ಪೇಟಿಎಂ ಪಾವತಿ ಬ್ಯಾಂಕ್ | ಅಕ್ರಮ ಹಣ ವ್ಯವಹಾರದ ಬಗ್ಗೆ ಇ.ಡಿ ತನಿಖೆಯ ಅಗತ್ಯವೇಕಿದೆ?

ಈ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, “ಈ ಹಗರಣದ ಬಗ್ಗೆ ಕೇಂದ್ರದ ನಿಲುವು ಏನು? ಕಳೆದ ಏಳು ವರ್ಷಗಳಿಂದ ತಪ್ಪು ನಡೆಯುತ್ತಿದ್ದರೂ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಮೇಲೆ ಏಕೆ ಕ್ರಮ ಜರುಗಿಸಿಲ್ಲ? ಪೇಟಿಎಂ ಪೇಮೆಂಟ್‌ ಬ್ಯಾಂಕಿನ ಮುಖ್ಯಸ್ಥ ಪ್ರಧಾನಿ ಮೋದಿ ಭಕ್ತ. ಅವರೊಂದಿಗೆ ಸೆಲ್ಫಿ ಪಡೆದಿದ್ದಾರೆ. ಪ್ರಧಾನಿಯಿಂದ ಅನುಕೂಲ ಪಡೆಯಲು ಜಾಹೀರಾತುಗಳನ್ನು ಪ್ರಕಟಿಸಿದ್ದಾರೆ” ಎಂದು ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...